ಅಕ್ಟೋಬರ್ 10-11 : ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ದ.ಕ. ಜಿಲ್ಲಾ ಪ್ರವಾಸ - Karavali Times ಅಕ್ಟೋಬರ್ 10-11 : ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ದ.ಕ. ಜಿಲ್ಲಾ ಪ್ರವಾಸ - Karavali Times

728x90

8 October 2025

ಅಕ್ಟೋಬರ್ 10-11 : ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ದ.ಕ. ಜಿಲ್ಲಾ ಪ್ರವಾಸ

ಮಂಗಳೂರು, ಅಕ್ಟೋಬರ್ 08, 2025 (ಕರಾವಳಿ ಟೈಮ್ಸ್) : ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಅಕ್ಟೋಬರ್ 10 ಮತ್ತು 11 ರಂದು ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. 

ಅ. 10 ರಂದು ಬೆಳಿಗ್ಗೆ 10.05ಕ್ಕೆ ಮಂಗಳೂರು ವಿಮಾನ ನಿಲ್ದಾಣ ಆಗಮನ, 10.30ಕ್ಕೆ ಫಳ್ನೀರ್ ಶ್ರವಣ ಹಿಯರಿಂಗ್ ಏಡ್ ಸೆಂಟರ್ ಉದ್ಘಾಟನೆ, 10.45ಕ್ಕೆ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಪ್ರಗತಿ ಪರಿಶೀಲನೆ ಸಭೆ, 11.45ಕ್ಕೆ ಮಂಗಳೂರು ಮಹಾನಗರಪಾಲಿಕೆ ಸಭಾಂಗಣದಲ್ಲಿ ಮಹಾನಗರಪಾಲಿಕೆಯ ಪ್ರಗತಿ ಪರಿಶೀಲನಾ ಸಭೆ, ಮದ್ಯಾಹ್ನ 2 ಗಂಟೆಗೆ ಕೆನರಾ ವಾಣಿಜ್ಯ ಚೇಂಬರಿನಲ್ಲಿ ಸಂವಾದ, 3 ಗಂಟೆಗೆ ಅಡ್ಯಾರ್ ಗಾರ್ಡನ್ ನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ಹಾಗೂ ವಿವಿಧ ಯೋಜನೆಗಳ ಕುರಿತು ಅರಿವು ಕಾರ್ಯಕ್ರಮ, ಸಂಜೆ 5 ಗಂಟೆಗೆ ವಾರ್ತಾಭಾರತಿ ದಿನ ಪತ್ರಿಕೆ ಕೇಂದ್ರ ಕಚೇರಿಗೆ ಭೇಟಿ, 6 ಗಂಟೆಗೆ ಮಂಗಳೂರು ಸೂರ್ಯ ವುಡ್ ಸಭಾಂಗಣದಲ್ಲಿ ಪ್ರೊಫೆಷನಲ್ ಸ್ಟೂಡೆಂಟ್ ಗ್ಲೋಬಲ್ ಕಾನ್ಫರೆನ್ಸ್ ಕಾರ್ಯಕ್ರಮ.  

ಅಕ್ಟೋಬರ್ 11 ರಂದು ಬೆಳಿಗ್ಗೆ 9 ಗಂಟೆಗೆ ಬೋಳೂರು ಅಮೃತಾನಂದಮಯಿ ಮಠದಲ್ಲಿ ಅಮೃತೋತ್ಸವ  ಕಾರ್ಯಕ್ರಮ, 10.30ಕ್ಕೆ ಬೆಳ್ತಂಗಡಿ ತಾಲೂಕಿನ ಪೂಂಜಾಲಕಟ್ಟೆಯಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಡಿ ದೇವರಾಜ ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯ ಉದ್ಘಾಟನೆ,  11 ಗಂಟೆಗೆ ಬೆಳ್ತಂಗಡಿ ಮಾಲಾಡಿ ಗ್ರಾಮದ ಸಬರÀಬೈಲು ಎಂಬಲ್ಲಿ ನೂತನ ದೇವರಾಜ ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯ ಉದ್ಘಾಟನೆ,  11.30ಕ್ಕೆ ಬೆಳ್ತಂಗಡಿ, ಲಾಯಿಲ-ಕಾಶಿಬೆಟ್ಟು ಡಿ ದೇವರಾಜ ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯ ಶಿಲಾನ್ಯಾಸ, 12 ಗಂಟೆಗೆ ಬೆಳ್ತಂಗಡಿಯಲ್ಲಿ ಇಂದಿರಾ ಕ್ಯಾಂಟೀನ್ ಉದ್ಘಾಟನಾ ಕಾರ್ಯಕ್ರಮ, ಬೆಳ್ತಂಗಡಿ ಟೌನ್ ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯ ಕಟ್ಟಡ ಶಿಲಾನ್ಯಾಸ,  94ಸಿ ಹಕ್ಕು ಪತ್ರ ವಿತರಣೆ, ಮಧ್ಯಾಹ್ನ 1 ಗಂಟೆಗೆ ಬೆಳ್ತಂಗಡಿಯಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಸಭೆ, ಸಂಜೆ 4 ಗಂಟೆಗೆ ಸಚಿವರು  ಬೆಳ್ತಂಗಡಿಯಿಂದ ನಿರ್ಗಮಿಸಿ, ಮಂಗಳೂರು ವಿಮಾನ ನಿಲ್ದಾಣದಿಂದ 6.15ಕ್ಕೆ  ಬೆಂಗಳೂರಿಗೆ ನಿರ್ಗಮಿಸಲಿದ್ದಾರೆ.

  • Blogger Comments
  • Facebook Comments

0 comments:

Post a Comment

Item Reviewed: ಅಕ್ಟೋಬರ್ 10-11 : ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ದ.ಕ. ಜಿಲ್ಲಾ ಪ್ರವಾಸ Rating: 5 Reviewed By: karavali Times
Scroll to Top