ಅಕ್ಟೋಬರ್ 27 ರಂದು ಮಂಗಳೂರಿನಲ್ಲಿ ಅಂತರಾಷ್ಟ್ರೀಯ ಬ್ಯಾಡ್ಮಿಂಟನ್ ಪಂದ್ಯಾವಳಿ ಉದ್ಘಾಟಿಸಲಿರುವ ಸಿಎಂ ಸಿದ್ದರಾಮ್ಯ : ಡೀಸಿ ಅಧ್ಯಕ್ಷತೆಯಲ್ಲಿ ಪೂರ್ವಸಿದ್ದತಾ ಸಭೆ - Karavali Times ಅಕ್ಟೋಬರ್ 27 ರಂದು ಮಂಗಳೂರಿನಲ್ಲಿ ಅಂತರಾಷ್ಟ್ರೀಯ ಬ್ಯಾಡ್ಮಿಂಟನ್ ಪಂದ್ಯಾವಳಿ ಉದ್ಘಾಟಿಸಲಿರುವ ಸಿಎಂ ಸಿದ್ದರಾಮ್ಯ : ಡೀಸಿ ಅಧ್ಯಕ್ಷತೆಯಲ್ಲಿ ಪೂರ್ವಸಿದ್ದತಾ ಸಭೆ - Karavali Times

728x90

23 October 2025

ಅಕ್ಟೋಬರ್ 27 ರಂದು ಮಂಗಳೂರಿನಲ್ಲಿ ಅಂತರಾಷ್ಟ್ರೀಯ ಬ್ಯಾಡ್ಮಿಂಟನ್ ಪಂದ್ಯಾವಳಿ ಉದ್ಘಾಟಿಸಲಿರುವ ಸಿಎಂ ಸಿದ್ದರಾಮ್ಯ : ಡೀಸಿ ಅಧ್ಯಕ್ಷತೆಯಲ್ಲಿ ಪೂರ್ವಸಿದ್ದತಾ ಸಭೆ

 ಮಂಗಳೂರು, ಅಕ್ಟೋಬರ್ 23, 2025 (ಕರಾವಳಿ ಟೈಮ್ಸ್) : ಇದೇ ಮೊದಲ ಬಾರಿಗೆ ಮಂಗಳೂರಿನಲ್ಲಿ ನಡೆಯಲಿರುವ  ಅಂತಾರಾರಾಷ್ಟ್ರೀಯ ಮಟ್ಟದ ಬ್ಯಾಡ್ಮಿಂಟನ್ ಪಂದ್ಯಾವಳಿ “ಮಂಗಳೂರು ಇಂಡಿಯಾ ಇಂಟರ್ ನ್ಯಾಷನಲ್ ಚಾಲೆಂಜ್ -2025” ಕ್ರೀಡಾಕೂಟಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಕ್ಟೋಬರ್ 27 ರಂದು  ನಗರದ ಉರ್ವಾ ಒಳಾಂಗಣ ಕ್ರೀಡಾಂಗಣದಲ್ಲಿ ಚಾಲನೆ ನೀಡಲಿದ್ದಾರೆ.

ಈ ಬಗ್ಗೆ ಗುರುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ  ಜಿಲ್ಲಾಧಿಕಾರಿ ದರ್ಶನ್ ಎಚ್.ವಿ ಅಧ್ಯಕ್ಷತೆಯಲ್ಲಿ  ಕ್ರೀಡಾಕೂಟದ ಪೂರ್ವಸಿದ್ಧತಾ ಸಭೆ ನಡೆಯಿತು. ಈ ಸಂದರ್ಭ ಮಾತನಾಡಿದ ಜಿಲ್ಲಾಧಿಕಾರಿಗಳು, ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ ಅಂತಾರಾಷ್ಟ್ರೀಯ ಕ್ರೀಡಾಕೂಟ ನಡೆಯುತ್ತಿದ್ದು, ಯಾವುದೇ ಲೋಪವಾಗದಂತೆ ಎಲ್ಲಾ ರೀತಿಯ ಸಿದ್ಧತೆಗಳನ್ನು ಏರ್ಪಡಿಸಬೇಕು. ಜಿಲ್ಲೆಯ ಕ್ರೀಡಾ ಮೂಲ ಸೌಲಭ್ಯಗಳು ಜಾಗತಿಕ ಮಟ್ಟದಲ್ಲಿ ಗುರುತಿಸುವಂತಾಗಬೇಕು ಎಂದರು. 

ಈ ಕ್ರೀಡಾಕೂಟದಲ್ಲಿ ದೇಶ-ವಿದೇಶಗಳಿಂದ ಕ್ರೀಡಾಪಟುಗಳು ಭಾಗವಹಿಸಲಿದ್ದಾರೆ. ಅವರಿಗೆ ಕ್ರೀಡಾ ಸೌಲಭ್ಯಗಳು, ವಸತಿ ವ್ಯವಸ್ಥೆಗಳನ್ನು ಉತ್ತಮ ರೀತಿಯಲ್ಲಿ ಒದಗಿಸಬೇಕು. ಕ್ರೀಡಾಂಗಣದ ಒಳಗೆ ಎಲ್ಲಾ ತಾಂತ್ರಿಕ ಅಂಶಗಳನ್ನು ಅಚ್ಚುಕಟ್ಟುಗೊಳಿಸಬೇಕು. ಕ್ರೀಡಾಪಟುಗಳು ಮತ್ತು ತೀರ್ಪುಗಾರರಿಗೆ ಅಗತ್ಯ ವ್ಯವಸ್ಥೆ ಕಲ್ಪಿಸುವಂತೆ ಡೀಸಿ ಸೂಚಿಸಿದರು.       

ಕ್ರೀಡಾಕೂಟಕ್ಕೆ ಬರುವ ವಾಹನಗಳಿಗೆ ಉರ್ವಾ ಮಾರ್ಕೆಟ್ ಕ್ರೀಡಾಂಗಣದಲ್ಲಿ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ. ಕ್ರೀಡಾಂಗಣಕ್ಕೆ ಹೋಗಿ ಬರುವ ರಸ್ತೆ ಲೇಡಿಹಿಲ್ ನಿಂದ ಉರ್ವಾ ಮಾರ್ಕೆಟ್ ವರೆಗೆ ಸುಂದರೀಕರಣಗೊಳಿಸಬೇಕು.   ತ್ಯಾಜ್ಯ ನಿರ್ವಹಣೆಯನ್ನು ಉತ್ತಮ ರೀತಿಯಲ್ಲಿ ಮಾಡಬೇಕು ಎಂದು ಮಹಾನಗರಪಾಲಿಕೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚಿಸಿದರು.

ಈ ಕ್ರೀಡಾಕೂಟದಲ್ಲಿ ಸಂಸ್ಕøತಿ ಮತ್ತು ಪ್ರವಾಸೋದ್ಯಮ ಬಿಂಬಿಸುವ ಪ್ರದರ್ಶನ ಹಾಗೂ ಮಾಹಿತಿ ಕೇಂದ್ರ ಸಿದ್ಧಗೊಳಿಸಬೇಕು. ಕ್ರೀಡಾಪಟುಗಳು ಪ್ರವಾಸಿ ತಾಣಗಳಿಗೆ ಹೋಗಲಿಚ್ಛಿಸಿದ್ದಲ್ಲಿ ಅಗತ್ಯ ವ್ಯವಸ್ಥೆ ಕಲ್ಪಿಸಬೇಕು ಎಂದು ಜಿಲ್ಲಾಧಿಕಾರಿಗಳು ಪ್ರವಾಸೋದ್ಯಮ ಇಲಾಖೆಗೆ ಸೂಚಿಸಿದರು. ಕ್ರೀಡಾಪಟುಗಳಿಗೆ ಅಗತ್ಯ ವೈದ್ಯಕೀಯ ಸೌಲಭ್ಯ ಕಲ್ಪಿಸಲು ಆರೋಗ್ಯ ಕೇಂದ್ರವನ್ನು ಕ್ರೀಡಾಂಗಣದಲ್ಲಿ ಸಜ್ಜುಗೊಳಿಸಬೇಕು. ಕ್ರೀಡಾ ವೈದ್ಯಕೀಯ ತಜ್ಞರನ್ನು ನಿಯೋಜಿಸುವಂತೆ ಜಿಲ್ಲಾ ಆರೋಗ್ಯಾಧಿಕಾರಿಗಳಿಗೂ ಸೂಚಿಸಲಾಯಿತು. ಜಿಲ್ಲಾಡಳಿತ ಹಾಗೂ ಬ್ಯಾಡ್ಮಿಂಟನ್ ಅಸೋಸಿಯೇಷನ್  ಸಮನ್ವಯದಿಂದ ಕಾರ್ಯನಿರ್ವಹಿಸುವಂತೆ ಡೀಸಿ ತಿಳಿಸಿದರು.

ಸಭೆಯಲ್ಲಿ ಉಪ ಪೆÇೀಲಿಸ್ ಆಯುಕ್ತ  ಮಿಥುನ್ ಎಚ್.ಎನ್, ಸ್ಮಾರ್ಟ್ ಸಿಟಿ ಎಂ.ಡಿ ಸಂತೋಷ್ ಕುಮಾರ್, ಮಹಾನಗರಪಾಲಿಕೆ ಆಯುಕ್ತ ರವಿಚಂದ್ರ ನಾಯಕ್, ದಕ್ಷಿಣ ಕನ್ನಡ ಜಿಲ್ಲಾ ಬ್ಯಾಡ್ಮಿಂಟನ್ ಅಸೋಸಿಯೇಷನ್ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ ಮೊದಲಾದವರು ಭಾಗವಹಿಸಿದ್ದರು. 

  • Blogger Comments
  • Facebook Comments

0 comments:

Post a Comment

Item Reviewed: ಅಕ್ಟೋಬರ್ 27 ರಂದು ಮಂಗಳೂರಿನಲ್ಲಿ ಅಂತರಾಷ್ಟ್ರೀಯ ಬ್ಯಾಡ್ಮಿಂಟನ್ ಪಂದ್ಯಾವಳಿ ಉದ್ಘಾಟಿಸಲಿರುವ ಸಿಎಂ ಸಿದ್ದರಾಮ್ಯ : ಡೀಸಿ ಅಧ್ಯಕ್ಷತೆಯಲ್ಲಿ ಪೂರ್ವಸಿದ್ದತಾ ಸಭೆ Rating: 5 Reviewed By: karavali Times
Scroll to Top