ತಾಲೂಕು ಮಟ್ಟದಲ್ಲೂ ನಾಡು-ನುಡಿಗೆ ಸೇವೆ ಸಲ್ಲಿಸಿದ ಸಾಹಿತ್ಯಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡವರನ್ನು ಗುರುತಿಸಿ ಗೌರವಿಸುವ ಕೆಲಸ ಆಗಬೇಕು : ಕಸಾಪ ಅಧ್ಯಕ್ಷ ವಿಶ್ವನಾಥ್ - Karavali Times ತಾಲೂಕು ಮಟ್ಟದಲ್ಲೂ ನಾಡು-ನುಡಿಗೆ ಸೇವೆ ಸಲ್ಲಿಸಿದ ಸಾಹಿತ್ಯಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡವರನ್ನು ಗುರುತಿಸಿ ಗೌರವಿಸುವ ಕೆಲಸ ಆಗಬೇಕು : ಕಸಾಪ ಅಧ್ಯಕ್ಷ ವಿಶ್ವನಾಥ್ - Karavali Times

728x90

31 October 2025

ತಾಲೂಕು ಮಟ್ಟದಲ್ಲೂ ನಾಡು-ನುಡಿಗೆ ಸೇವೆ ಸಲ್ಲಿಸಿದ ಸಾಹಿತ್ಯಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡವರನ್ನು ಗುರುತಿಸಿ ಗೌರವಿಸುವ ಕೆಲಸ ಆಗಬೇಕು : ಕಸಾಪ ಅಧ್ಯಕ್ಷ ವಿಶ್ವನಾಥ್

ಬಂಟ್ವಾಳದಲ್ಲಿ ತಾಲೂಕು ಮಟ್ಟದ ಕನ್ನಡ ರಾಜ್ಯೋತ್ಸವ ಆಚರಣೆ, ಆಕರ್ಷಕ ಪಥ ಸಂಚಲನ


ಬಂಟ್ವಾಳ, ನವೆಂಬರ್ 01, 2025 (ಕರಾವಳಿ ಟೈಮ್ಸ್) : ರಾಜ್ಯಮಟ್ಟದ, ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿಗಳನ್ನು ನೀಡುವುದರ ಜೊತೆಗೆ ತಾಲೂಕು ಮಟ್ಟದಲ್ಲಿ ತಾಲೂಕಾಡಳಿತ ವತಿಯಿಂದ ಕನ್ನಡ ನಾಡು-ನುಡಿಗೆ ಸೇವೆ ಸಲ್ಲಿಸಿದ ಹಾಗೂ ಸಾಹಿತ್ಯಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವ ಸಾಧಕರನ್ನು ಗುರುತಿಸಿ ಗೌರವಿಸುವ ನಿಟ್ಟಿನಲ್ಲಿ ಸರಕಾರ ಚಿಂತನೆ ನಡೆಸಬೇಕಾಗಿದೆ ಎಂದು ಬಂಟ್ವಾಳ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ವಿಶ್ವನಾಥ ಬಂಟ್ವಾಳ ಅಭಿಪ್ರಾಯಪಟ್ಟರು. 

ಬಂಟ್ವಾಳ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ನವೆಂಬರ್ 1 ರಂದು ಬಿ ಸಿ ರೋಡಿನ ತಾಲೂಕು ಆಡಳಿತ ಸೌಧದಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಮುಂದಿನ ದಿನಗಳಲ್ಲಿ ಈ ಬಗ್ಗೆ ಜಾರಿಗೆ ಬರುವಂತೆ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಕ್ರಮ ಕೈಗೊಳ್ಳಬೇಕು ಎಂದು ವಿನಂತಿಸಿದರು. 

ಕಾರ್ಯಕ್ರಮದ ಅದ್ಯಕ್ಷತೆ ವಹಿಸಿದ್ದ ಬಂಟ್ವಾಳ ಶಾಸಕ ಯು ರಾಜೇಶ್ ನಾಯಕ್ ಮಾತನಾಡಿ, ಕನ್ನಡಿಗರು ಎಂಬ ಹೆಮ್ಮೆಯ ಜೊತೆಗೆ ಕನ್ನಡ ನಾಡು-ನುಡಿಯ ಬಗ್ಗೆ ಗೌರವ ಹೊಂದಿ ಮುನ್ನಡೆಯಬೇಕು ಎಂದು ಸರ್ವರಿಗೂ ರಾಜ್ಯೋತ್ಸವದ ಶುಭ ಕೋರಿದರು. 

ಬಂಟ್ವಾಳ ಪುರಸಭಾಧ್ಯಕ್ಷ ಬಿ ವಾಸು ಪೂಜಾರಿ ಲೊರೆಟ್ಟೊ ಅವರು ಮಾತನಾಡಿ, ಆಂಗ್ಲ ಮಾಧ್ಯಮದ ಅಗತ್ಯತೆಯ ಜೊತೆಗೆ ಶಿಕ್ಷಕರು ಮಕ್ಕಳಿಗೆ ಕನ್ನಡ ಭಾಷೆಯ ಇಂಪನ್ನು ಹೆಚ್ಚಾಗಿ ದೊರಕಿಸುವಂತಾಗಬೇಕು. ಮಕ್ಕಳಿಗೆ ಎಳೆ ವಯಸ್ಸಿನಲ್ಲೇ ಕನ್ನಡಾಭಿಮಾನ, ಕನ್ನಡದ ಬಗ್ಗೆ ಒಲವು ಮೂಡಿಬರಬೇಕು ಎಂದರು. 

ಕನ್ನಡ ರಾಜ್ಯೋತ್ಸವದ ಬಗ್ಗೆ ವಿಶೇಷ ಸಂದೇಶ ನೀಡಿದ ಕೊಳ್ನಾಡು ಸರಕಾರಿ ಶಾಲಾ ವಿದ್ಯಾರ್ಥಿನಿ ಕು ಸಜೀನಾ ಮಾತನಾಡಿ, ನಾವೆಲ್ಲರೂ ನೆವಂಬರ್ 1ಕ್ಕೆ ಸೀಮಿತಗೊಂಡ ನಾಮಮಾತ್ರ ಕನ್ನಡಿಗರಾಗದೆ ನಂಬರ್ ಒನ್ ಕನ್ನಡಿಗರಾಗೋಣ ಎಂದು ಕರೆ ನೀಡಿದರಲ್ಲದೆ, ಕನ್ನಡ ನಾಡು-ನುಡಿಯ ಸೊಬಗನ್ನು ವಿವರಿಸಿದರು. 

ಬಂಟ್ವಾಳ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಬೇಬಿ ಕುಂದರ್ ಮಾತನಾಡಿ, ವಿದ್ಯಾರ್ಥಿ ಸಮುದಾಯದ ಕೈಯಲ್ಲಿ ಈ ದೇಶದ ಭವಿಷ್ಯ ಅಡಗಿದ್ದು, ಶಾಲೆಗಳಲ್ಲಿ ವ್ಯಾಸಂಗ ಮಾಡುವ ಸಂದರ್ಭ ಉತ್ತಮ ಸಂಸ್ಕಾರ, ಸಂಸ್ಕøತಿ ಕಲಿತು ದೇಶಾಭಿಮಾನ, ಕನ್ನಡಾಭಿಮಾನ ಬೆಳೆಸಿಕೊಂಡರೆ ದೇಶಕ್ಕೆ ಪೂರಕ, ವಿದ್ಯಾರ್ಥಿಗಳು ದಾರಿ ತಪ್ಪಿದರೆ ದೇಶಕ್ಕೆ ಮಾರಕ. ಈ ನಿಟ್ಟಿನಲ್ಲಿ ವಿದ್ಯಾರ್ಥಿ ಸಮುದಾಯವನ್ನು ಪೂರಕ ದಾರಿಯಲ್ಲಿ ಬೆಳೆಸುವ ಜವಾಬ್ದಾರಿ ಪೋಷಕರು ಹಾಗೂ ಶಿಕ್ಷಕರದ್ದು ಎಂದರು. 

ತಾಲೂಕು ತಹಶೀಲ್ದಾರ್ ಮಂಜುನಾಥ್ ಅವರು ಧ್ವಜಾರೋಹಣಗೈದು, ಧ್ವಜ ವಂದನೆ ಸ್ವೀಕರಿಸಿದರು. ಬಂಟ್ವಾಳ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷೆ ಜಯಂತಿ ಪೂಜಾರಿ ಭಾಗವಹಿಸಿದ್ದರು. ಇದಕ್ಕೂ ಮೊದಲು ಬಂಟ್ವಾಳ ನಗರ ಪೊಲೀಸ್ ಠಾಣಾ ಪಿಎಸ್ಸೈ ಸಂದೀಪ್ ಶೆಟ್ಟಿ ನೇತೃತ್ವದ ಪೆÇಲೀಸ್ ಇಲಾಖೆ, ಗೃಹರಕ್ಷಕ ದಳ, ವಿವಿಧ ಶಾಲೆಗಳ ಸ್ಕೌಟ್ಸ್, ಗೈಡ್ಸ್ ವಿದ್ಯಾರ್ಥಿಗಳಿಂದ ಆಕರ್ಷಕ ಪಥ ಸಂಚಲನ, ಗೌರವ ವಂದನೆ ನಡೆಯಿತು. 

ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುನಾಥ್ ಸ್ವಾಗತಿಸಿ, ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಸಚಿನ್ ಕುಮಾರ್ ವಂದಿಸಿದರು. ಮೊಡಂಕಾಪು ಶಾಲಾ ವಿದ್ಯಾರ್ಥಿಗಳು ರೈತಗೀತೆ ಹಾಡಿದರು. ಕೊಳ್ನಾಡು ಸರಕಾರಿ ಶಾಲಾ ಶಿಕ್ಷಕಿ ವಿಜಯಲಕ್ಷ್ಮಿ ಕಟೀಲ್ ಹಾಗೂ ಉಪತಹಶೀಲ್ದಾರ್  ನವೀನ್ ಬೆಂಜನಪದವು ಕಾರ್ಯಕ್ರಮ ನಿರೂಪಿಸಿದರು. ಬಳಿಕ ವಿವಿಧ ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕøತಿಕ ಕಾರ್ಯಕ್ರಮಗಳು ನಡೆಯಿತು.

  • Blogger Comments
  • Facebook Comments

0 comments:

Post a Comment

Item Reviewed: ತಾಲೂಕು ಮಟ್ಟದಲ್ಲೂ ನಾಡು-ನುಡಿಗೆ ಸೇವೆ ಸಲ್ಲಿಸಿದ ಸಾಹಿತ್ಯಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡವರನ್ನು ಗುರುತಿಸಿ ಗೌರವಿಸುವ ಕೆಲಸ ಆಗಬೇಕು : ಕಸಾಪ ಅಧ್ಯಕ್ಷ ವಿಶ್ವನಾಥ್ Rating: 5 Reviewed By: karavali Times
Scroll to Top