ಮಂಗಳೂರು, ಅಕ್ಟೋಬರ್ 09, 2025 (ಕರಾವಳಿ ಟೈಮ್ಸ್) : ಅಕ್ಟೋಬರ್ 10 ರಂದು (ನಾಳೆ) ಅಪರಾಹ್ನ 3 ಗಂಟೆಗೆ ಅಡ್ಯಾರ್ ಗಾರ್ಡನ್ನಿನ ವಿ ಕೆ ಶೆಟ್ಟಿ ಅಡಿಟೋರಿಯಂದಲ್ಲಿ ನೋಂದಾಯಿತ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ಹಾಗೂ ಯೋಜನೆಗಳ ಕುರಿತು ಅರಿವು ಮೂಡಿಸುವ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದಲ್ಲಿ ರಾಜ್ಯ ಕಾರ್ಮಿಕ ಸಚಿವ ಸಂತೋಷ ಲಾಡ್, ವಿಧಾನಸಭಾ ಸ್ಪೀಕರ್ ಯು ಟಿ ಖಾದರ್ ಹಾಗೂ ಜಿಲ್ಲಾ ಉಸ್ತವಾರಿ ಸಚಿವ ದಿನೇಶ್ ಗುಂಡೂರಾವ್ ಸಹಿತ ಹಲವು ಗಣ್ಯರು ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಅಸಂಘಟಿತ ಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಅರಿವು ಮೂಡಿಸುವ ಕಾರ್ಯಕ್ರಮದ ಸದುಪಯೋಗಪಡೆದುಕೊಳ್ಳುವಂತೆ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಸಂಘಟಿತ ಕಾರ್ಮಿಕ ಘಟಕದ ಅಧ್ಯಕ್ಷ ಬಿ ಎಂ ಅಬ್ಬಾಸ್ ಅಲಿ ಕರೆ ನೀಡಿದ್ದಾರೆ.
9 October 2025
- Blogger Comments
- Facebook Comments
Subscribe to:
Post Comments (Atom)
0 comments:
Post a Comment