ಮಂಗಳೂರು, ಅಕ್ಟೋಬರ್ 31, 2025 (ಕರಾವಳಿ ಟೈಮ್ಸ್) : ಮಂಗಳೂರು ನಗರ ಪೊಲೀಸ್ ಕಮೀಷನರೇಟ್ ವಾಪ್ತಿಯ ವಿವಿಧ ಪೊಲೀಸ್ ಠಾಣಾ ವಾಪ್ತಿಯಲ್ಲಿ ಸೆಪ್ಟೆಂಬರ್ 15 ರಿಂದ ಅಕ್ಟೋಬರ್ 30ರವರೆಗೆ ಕಳೆದು ಹೋದ ಮೊಬೈಲ್ ಗಳ ಬಗ್ಗೆ ದಾಖಲಾದ ದೂರಿನ ಮೇರೆಗೆ ಸಿಇಐಆರ್ ಪೋರ್ಟಲ್ ಮೂಲಕ ಪತ್ತೆ ಮಾಡಲಾಗಿರುವ 233 ಮೊಬೈಲ್ ಗಳನ್ನು ಮಂಗಳೂರು ನಗರ ಪೊಲೀಸ್ ಆಯುಕ್ತರ ಕಛೇರಿಯಲ್ಲಿ ಅ 31 ರಂದು ವಾರಸುದಾರರಿಗೆ ಹಸ್ತಾಂತರಿಸಲಾಗಿದೆ.
ಮಂಗಳೂರು ಉತ್ತರ ಠಾಣಾ ವ್ಯಾಪ್ತಿಯಲ್ಲಿ 9, ದಕ್ಷಿಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 16, ಪೂರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 18, ಉರ್ವಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 19, ಬರ್ಕೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 20, ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 17, ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 10, ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 7, ಕಂಕನಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 20, ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 23, ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 14, ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 11, ಮೂಡಬಿದ್ರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 14, ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 14, ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 9, ಸೆನ್ ಕ್ರೈಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 12 ಮೊಬೈಲ್ ಫೋನ್ ಸೇರಿದಂತೆ ಒಟ್ಟು 233 ಮೊಬೈಲ್ ಫೋನುಗಳನ್ನು ಪತ್ತೆ ಹಚ್ಚಿ ವಾರೀಸುದಾರರಿಗೆ ನೀಡಲಾಗಿದೆ.
















0 comments:
Post a Comment