ಮಂಗಳೂರು, ಅಕ್ಟೋಬರ್ 18, 2025 (ಕರಾವಳಿ ಟೈಮ್ಸ್) : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಅಕ್ಟೋಬರ್ 20 ರಂದು ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಲಿದ್ದಾರೆ.
ಬೆಳಿಗ್ಗೆ 11 ಗಂಟೆಗೆ ವಿಶೇಷ ವಿಮಾನದ ಮೂಲಕ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸುವ ಸಚಿವರು ಮಧ್ಯಾಹ್ನ 12.10ಕ್ಕೆ ಪುತ್ತೂರು ರೈ ಎಸ್ಟೇಟ್ಸ್ ಎಜುಕೇಶನಲ್ ಮತ್ತು ಚಾರಿಟೇಬಲ್ ಟ್ರಸ್ಟ್ ವತಿಯಿಂದ ಆಯೋಜಿಸಿರುವ ಅಶೋಕ ಜನ-ಮನ-2025 ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಬಳಿಕ ಜಿಲ್ಲೆಯ ಅಧಿಕಾರಿಗಳೊಂದಿಗೆ ಚರ್ಚೆ ಮತ್ತು ಸಭೆ, ಸಂಜೆ 5.10ಕ್ಕೆ ಸಚಿವರು ಬೆಂಗಳೂರಿಗೆ ನಿರ್ಗಮಿಸುವರು.

















0 comments:
Post a Comment