ಮಂಗಳೂರು, ಅಕ್ಟೋಬರ್ 27, 2025 (ಕರಾವಳಿ ಟೈಮ್ಸ್) : ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಉರ್ವಾ ನೂತನ ಮಾರುಕಟ್ಟೆ ಕಟ್ಟಡಕ್ಕೆ ಭೇಟಿ ನೀಡಿದರು. ಮಾರುಕಟ್ಟೆ ಕಟ್ಟಡದ ಒಳಗೆ ಹೋದ ಸಚಿವರು ಅಂಗಡಿ ಕೋಣೆಗಳು, ಮೀನು-ಮಾಂಸ ಮಾರಾಟ ಕೇಂದ್ರಗಳನ್ನು ವೀಕ್ಷಿಸಿದರು. ಮಾರುಕಟ್ಟೆ ಕಟ್ಟಡದಲ್ಲಿ ಅತಿ ಶೀಘ್ರವೇ ಚಟುವಟಿಕೆಗಳನ್ನು ಪುನರಾರಂಭಿಸಬೇಕು. ಅಂಗಡಿ ಕೋಣೆಗಳನ್ನು ಮಳಿಗೆದಾರರಿಗೆ ಹಸ್ತಾಂತರಿಸಬೇಕು. ವರ್ತಕರಿಗೆ ಅಗತ್ಯವಿರುವ ಸೌಲಭ್ಯಗಳನ್ನು ಕಲ್ಪಿಸಿಕೊಡಬೇಕು ಎಂದು ನಗರಪಾಲಿಕೆ ಅಧಿಕಾರಿಗಳಿಗೆ ಸೂಚಿಸಿದರು.
ಅಗತ್ಯವಿದ್ದರೆ ಟೆಂಡರ್ ಶರತ್ತುಗಳನ್ನು ಸಡಿಲಗೊಳಿಸಬೇಕು. ತಾತ್ಕಾಲಿಕ ಮಾರುಕಟ್ಟೆಯಲ್ಲಿರುವ ಎಲ್ಲಾ ಮಳಿಗೆಗಳನ್ನು ನೂತನ ಮಾರುಕಟ್ಟೆಗೆ ಸ್ಥಳಾಂತರಿಸಬೇಕು ಎಂದವರು ಸೂಚಿಸಿದರು. ಈ ಸಂದರ್ಭ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ, ಜಿಲ್ಲಾಧಿಕಾರಿ ದರ್ಶನ್ ಎಚ್.ವಿ, ಮಹಾನಗರಪಾಲಿಕೆ ಆಯುಕ್ತ ರವಿಚಂದ್ರ ನಾಯಕ್ ಮತ್ತಿತರರು ಉಪಸ್ಥಿತರಿದ್ದರು.




















0 comments:
Post a Comment