ಮಂಗಳೂರು, ಅಕ್ಟೋಬರ್ 30, 2025 (ಕರಾವಳಿ ಟೈಮ್ಸ್) : ವಿದೇಶದಲ್ಲಿ ಉದ್ಯೋಗಕ್ಕಾಗಿ ವೀಸಾ ಕೊಡಿಸುವುದಾಗಿ ನಂಬಿಸಿ ಹಲವರಿಂದ ಸುಮಾರು 1 ಕೋಟಿ ರೂಪಾಯಿ ಪಡೆದು ವಂಚಿಸಿದ ಆರೋಪದಲ್ಲಿ ಇಬ್ಬರು ಖದೀಮರನ್ನು ಕಾವೂರು ಪೊಲೀಸರು ಬಂಧಿಸಿದ್ದಾರೆ.
ಬಂಧಿತರ ಆರೋಪಿಗಳನ್ನು ಬೆಂಗಳೂರಿನ ಆನೆಕಲ್ ತಾಲೂಕಿನ ಆನೇಕಲ್ ಪಬ್ಲಿಕ್ ಸ್ಕೂಲ್ ಬಳಿಯ ಮುನಿರಾಜು ಬಿಲ್ಡಿಂಗ್, ವೀವರ್ಸ್ ಕಾಲೊನಿ ನಿವಾಸಿ ಟಿ ಉಪೇಂದ್ರ ಎಂಬವರ ಪುತ್ರಿ ಪ್ರಕೃತಿ ಯು (34) ಹಾಗೂ ಕುಂದಾಪುರ ತಾಲೂಕಿನ ಗಂಗೊಳ್ಳಿಯ ಚರ್ಚ್ ರೋಡ್ ನಿವಾಸಿ ಅಗಸ್ಟಿನ್ ರೆಬೆರೋ ಅವರ ಪುತ್ರ ಆಲ್ಟನ್ ರೆಬೇರೋ (42) ಎಂದು ಗುರುತಿಸಲಾಗಿದೆ.
ಆರೋಪಿಗಳು ವಿದೇಶದಲ್ಲಿ ಉದ್ಯೋಗ ಕೊಡಿಸುವ ಭರವಸೆ ನೀಡಿ ನಂಬಿಸಿ ಅವರಿಂದ ಹಣ ಪಡೆದು ಬಳಿಕ ಉದ್ಯೋಗ ಕೊಡಿಸದೆ ವಂಚಿಸುತ್ತಿದ್ದರು. ಈ ಬಗ್ಗೆ ಕಾವೂರು ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 131/2025 ಕಲಂ 406, 420 ಜೊತೆಗೆ 149 ಐಪಿಸಿಯಂತೆ ಪ್ರಕರಣ ದಾಖಲಾಗಿತ್ತು.
ಆರೋಪಿಗಳು ಜನರಿಂದ ಪಡೆದುಕೊಂಡು ಮನೆಯಲ್ಲಿ ಅಕ್ರಮವಾಗಿ ಇರಿಸಿಕೊಂಡಿದ್ದ 24 ಪಾಸ್ ಪೆÇೀರ್ಟ್‍ಗಳು, 4.30 ಲಕ್ಷ ರೂಪಾಯಿ ಮೌಲ್ಯದ 43 ಗ್ರಾಂ ಚಿನ್ನ ಹಾಗೂ 2 ಮೊಬೈಲ್ ಗಳನ್ನು ಬೆಂಗಳೂರಿನಲ್ಲಿ ಸ್ವಾಧೀನಪಡಿಸಿಕೊಂಡು ಆರೋಪಿಗಳನ್ನು ದಸ್ತಗಿರಿ ಮಾಡಿದ್ದಾರೆ. ಬಂಧಿತ ಆರೋಪಿಗಳನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಮಂಗಳೂರು ಉತ್ತರ ಉಪವಿಭಾಗದ ಎ.ಸಿ.ಪಿ. ಶ್ರೀಕಾಂತ್ ಕೆ. ಮಾರ್ಗದರ್ಶನದಲ್ಲಿ ಕಾವೂರು ಠಾಣಾ ಇನ್ಸ್ ಪೆಕ್ಟರ್ ರಾಘವೇಂದ್ರ ಎಂ. ಬೈಂದೂರು, ಎಸ್ಸೈ ಮಲ್ಲಿಕಾರ್ಜುನ ಬಿರಾದಾರ, ಸಿಬ್ಬಂದಿಗಳಾದ ನಾಗರತ್ನ, ರಾಘವೇಂದ್ರ, ಪ್ರವೀಣ್, ರಿಯಾಝ್ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ದಸ್ತಗಿರಿ ಮಾಡಿದ್ದಾರೆ.

















0 comments:
Post a Comment