ಪೊಲೀಸರು ಮನಸ್ಸು ಮಾಡಿದರೆ ಎಲ್ಲವೂ ಸಾಧ್ಯ, ಇದಕ್ಕೆ ದಕ್ಷಿಣ ಕನ್ನಡ ಜಿಲ್ಲೆಯ ಪೊಲೀಸ್ ಅಧಿಕಾರಿಗಳ ಕಾರ್ಯವೈಖರಿಯೇ ಸಾಕ್ಷಿ : ಸಿಎಂ ಸಿದ್ದರಾಮಯ್ಯ - Karavali Times ಪೊಲೀಸರು ಮನಸ್ಸು ಮಾಡಿದರೆ ಎಲ್ಲವೂ ಸಾಧ್ಯ, ಇದಕ್ಕೆ ದಕ್ಷಿಣ ಕನ್ನಡ ಜಿಲ್ಲೆಯ ಪೊಲೀಸ್ ಅಧಿಕಾರಿಗಳ ಕಾರ್ಯವೈಖರಿಯೇ ಸಾಕ್ಷಿ : ಸಿಎಂ ಸಿದ್ದರಾಮಯ್ಯ - Karavali Times

728x90

28 October 2025

ಪೊಲೀಸರು ಮನಸ್ಸು ಮಾಡಿದರೆ ಎಲ್ಲವೂ ಸಾಧ್ಯ, ಇದಕ್ಕೆ ದಕ್ಷಿಣ ಕನ್ನಡ ಜಿಲ್ಲೆಯ ಪೊಲೀಸ್ ಅಧಿಕಾರಿಗಳ ಕಾರ್ಯವೈಖರಿಯೇ ಸಾಕ್ಷಿ : ಸಿಎಂ ಸಿದ್ದರಾಮಯ್ಯ

ರಾಜ್ಯ ಆದಷ್ಟು ಬೇಗ “ಡ್ರಗ್ಸ್ ಮುಕ್ತ ಕರ್ನಾಟಕ” ಆಗಲಿ, ಇದನ್ನು ಮಾಡಿ ತೋರಿಸಿ ಎಂದು ಪೊಲೀಸರಿಗೆ ಸಿಎಂ ಸಲಹೆ


ಬೆಂಗಳೂರು, ಅಕ್ಟೋಬರ್ 28, 2025 (ಕರಾವಳಿ ಟೈಮ್ಸ್) : ಡ್ರಗ್ಸ್ ಮುಕ್ತ ಕರ್ನಾಟಕ ನನ್ನ ಗುರಿ, ಇದು ಪೊಲೀಸ್ ಇಲಾಖೆಯ ಗುರಿಯೂ ಆಗಲಿ. ಇದರಿಂದ ಇಡೀ ಕರ್ನಾಟಕ ಜನತೆ ಪೆÇಲೀಸ್ ಇಲಾಖೆಗೆ ಕೃತಜ್ಞತೆ ಸಲ್ಲಿಸುತ್ತಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. 

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲಿನಲ್ಲಿ ಆಯೋಜಿಸಿದ್ದ ಪೊಲೀಸ್ ಸಿಬ್ಬಂದಿಯ ನೂತನ ಪೀಕ್ ಕ್ಯಾಪ್ ವಿತರಣೆ, ಮಾದಕ ದ್ರವ್ಯ ವಿರೋಧಿ ಕಾರ್ಯಪಡೆ ಉದ್ಘಾಟನೆ ಹಾಗೂ ಸನ್ಮಿತ್ರ ಕಾರ್ಯಯೋಜನೆ ಕೈಪಿಡಿಯನ್ನು ಬಿಡುಗಡೆಗೊಳಿಸಿ ಮಾತನಾಡಿದ ಅವರು, ನಮ್ಮ ಯುವ ಶಕ್ತಿ, ಯುವಜನರ ಚೈತನ್ಯ ಮತ್ತು ಸಾಮರ್ಥ್ಯಗಳು ಮಾದಕ ವಸ್ತುಗಳಿಂದ ಬಲಿ ಆಗಬಾರದು. ಇದಕ್ಕೆ ಪೊಲೀಸ್ ಇಲಾಖೆ ಕಟಿಬದ್ಧ ನಿಲುವು ತಳೆಯಬೇಕು ಎಂದು ಸೂಚಿಸಿದರು. 

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮು ಘರ್ಷಣೆ, ಅನೈತಿಕ ಪೊಲೀಸ್ ಗಿರಿ ಹೆಚ್ಚಾಗಿತ್ತು. ಹಿಂದಿದ್ದ ಅಧಿಕಾರಿಗಳು ನಿಯಂತ್ರಣ ಮಾಡಲಿಲ್ಲ. ಇಬ್ಬರು ಅಧಿಕಾರಿಗಳನ್ನು ಬದಲಾಯಿಸಿ ಆದೇಶ ಹೊರಡಿಸಿದೆ. ಈಗ ದಕ್ಷಿಣ ಕನ್ನಡ ಜಿಲ್ಲೆ ನಿಯಂತ್ರಣದಲ್ಲಿದೆ. ಈ ಸಾಧನೆ ಮಾಡಿದ್ದೂ ನಮ್ಮದೇ ಅಧಿಕಾರಿಗಳು ಮತ್ತು ಸಿಬ್ಬಂದಿ. ಇವರೇನು ಬೇರೆ ಗ್ರಹದಿಂದ ಬಂದವರಲ್ಲ. ನಿಮ್ಮವರೇ, ನಮ್ಮವರೇ ಆಗಿದ್ದಾರೆ. ಆದ್ದರಿಂದ ನೀವು ಮನಸ್ಸು ಮಾಡಿದರೆ ಎಲ್ಲವೂ ಸಾಧ್ಯವಿದೆ. ಸಾಧಿಸುವ ಛಲ ಬೇಕಷ್ಟೆ ಎಂದ ಸಿಎಂ ಇದೇ ರೀತಿ ಇಡೀ ರಾಜ್ಯದಲ್ಲಿ ಮಾದಕ ವಸ್ತು ಹಾವಳಿ ತಪ್ಪಿಸಲು ನಿಮ್ಮಿಂದ ಸಾಧ್ಯವಿದೆ. ನೀವು ಮನಸ್ಸು ಮಾಡಿದರೆ ಕರ್ನಾಟಕ ಪೊಲೀಸರ ಘನತೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಚ್ಚಾಗುತ್ತದೆ.

ಕೆಲವು ಪೊಲೀಸರು ರಿಯಲ್ ಎಸ್ಟೇಟ್ ಮಾಡುವವರ ಜೊತೆ, ಡ್ರಗ್ ಜಾಲದ ಜೊತೆ ಶಾಮೀಲಾಗಿರುತ್ತಾರೆ. ರೌಡಿಗಳನ್ನು ಮೊಳಕೆಯಲ್ಲೆ ಚಿವುಟಿ ಹಾಕುವುದು ಪೊಲೀಸರಿಂದ ಸಾಧ್ಯವಿದೆ. ಪೊಲೀಸರ ಬಗ್ಗೆ ಅಪರಾಧ ಜಗತ್ತಿಗೆ ಭಯ ಕಡಿಮೆಯಾಗಿದೆ. ಯಾಕೆ ಹೀಗಾಯ್ತು ಎಂದು ಆತ್ಮಸಾಕ್ಷಿಯನ್ನು ಕೇಳಿಕೊಳ್ಳಬೇಕು ಎಂದು ಸಲಹೆ ನೀಡಿದರು. 

ಡ್ರಗ್ ಮಾರುವವರು, ತರುವವರು, ಎಲ್ಲಿಂದ ಡ್ರಗ್ಸ್ ಬರುತ್ತದೆ, ಈ ಜಾಲದ ಏಜೆಂಟರು ಯಾರ್ಯಾರು ಎನ್ನುವುದೂ ಪೆÇಲೀಸರಿಗೆ ಗೊತ್ತಿರುತ್ತದೆ. ಆದಷ್ಟು ಬೇಗ ರಾಜ್ಯ, “ಡ್ರಗ್ ಮುಕ್ತ ಕರ್ನಾಟಕ” ಆಗಲಿ, ಇದನ್ನು ಮಾಡಿ ತೋರಿಸಿ ಎಂದು ಸಿಎಂ ಸಿದ್ದರಾಮಯ್ಯ ಕರೆ ನೀಡಿದರು. 

ಇಂದು ನಾನೇ ಬಿಡುಗಡೆ ಮಾಡಿದ ಪೀಕ್ ಕ್ಯಾಪ್ ಮಾದರಿಯನ್ನು ಆಯ್ಕೆ ಮಾಡಿದ್ದೂ ಕೂಡ ನಾನೆ. 1956 ರಿಂದ ಸುಮಾರು 70 ವರ್ಷಗಳಿಂದ ಇದ್ದ ಒಂದೇ ಮಾದರಿಯ ಕ್ಯಾಪ್ ಅನ್ನು ಇಂದು ಬದಲಾಯಿಸಿದ್ದೇವೆ. ಅಧಿಕಾರಿ ಮತ್ತು ಸಿಬ್ಬಂದಿಗೆ ಒಂದೇ ಮಾದರಿ ಕ್ಯಾಪ್ ಒದಗಿಸಲಾಗಿದ್ದು ಇದರಿಂದ ನಿಮ್ಮ ಆತ್ಮ ವಿಶ್ವಾಸ ಹೆಚ್ಚಾಗಲಿ. 

ಕೇವಲ ಕ್ಯಾಪ್ ಬದಲಾಗುವುದಲ್ಲ. ನಿಮ್ಮ ಕಾರ್ಯಕ್ಷಮತೆಯೂ ಬದಲಾಗಲಿ. ಪೊಲೀಸ್ ಇಲಾಖೆಯ ದಕ್ಷತೆಯಿಂದ ಸರ್ಕಾರಕ್ಕೆ ಒಳ್ಳೆ ಹೆಸರು ಬರುತ್ತದೆ. ಇಂಡಿಯಾ ಜಸ್ಟೀಸ್ ವರದಿಯಲ್ಲಿ ಕರ್ನಾಟಕ ಪೊಲೀಸ್ ನಂಬರ್ ಒನ್ ಸ್ಥಾನದಲ್ಲಿದೆ ಎನ್ನುವ ವರದಿ ರಾಜ್ಯದ ಘನತೆ ಹೆಚ್ಚಿಸಿದೆ ಎಂದರು. 

  • Blogger Comments
  • Facebook Comments

0 comments:

Post a Comment

Item Reviewed: ಪೊಲೀಸರು ಮನಸ್ಸು ಮಾಡಿದರೆ ಎಲ್ಲವೂ ಸಾಧ್ಯ, ಇದಕ್ಕೆ ದಕ್ಷಿಣ ಕನ್ನಡ ಜಿಲ್ಲೆಯ ಪೊಲೀಸ್ ಅಧಿಕಾರಿಗಳ ಕಾರ್ಯವೈಖರಿಯೇ ಸಾಕ್ಷಿ : ಸಿಎಂ ಸಿದ್ದರಾಮಯ್ಯ Rating: 5 Reviewed By: karavali Times
Scroll to Top