ಮಂಗಳೂರಿನಲ್ಲಿ ಪೊಲೀಸ್ ಹುತಾತ್ಮ ದಿನಾಚರಣೆ
ಮಂಗಳೂರು, ಅಕ್ಟೋಬರ್ 21, 2025 (ಕರಾವಳಿ ಟೈಮ್ಸ್) : ಪ್ರತಿ ವರ್ಷ ಅಕ್ಟೋಬರ್ 21 ರಂದು ಕರ್ತವ್ಯ ನಿರ್ವಹಣೆಯ ಸಮಯ ತಮ್ಮ ಪ್ರಾಣ ಕಳೆದುಕೊಂಡ ಪೆÇಲೀಸರ ಸ್ಮರಣಾರ್ಥ ಪೆÇಲೀಸ್ ಹುತಾತ್ಮ ದಿನವೆಂದು ಸ್ಮರಿಸಲಾಗುತ್ತಿದ್ದು, ಮಂಗಳೂರು ನಗರ ಪೆÇಲೀಸ್ ವತಿಯಿಂದಲೂ ಮಂಗಳವಾರ ಕಛೇರಿ ಆವರಣದಲ್ಲಿ ಪೆÇಲೀಸ್ ಹುತಾತ್ಮ ದಿನ ಆಚರಿಸಲಾಯಿತು.
ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಜಿಲ್ಲಾ ಪ್ರಧಾನ ಸತ್ರ ನ್ಯಾಯಾಲಯದ ನ್ಯಾಯಾಧೀಶ ಬಸವರಾಜ್ ಅವರು ಮಾತನಾಡಿ, ನೊಂದವರ ಧ್ವನಿಯಾಗಿ ದಿನದ 24 ಗಂಟೆಯೂ ಸೇವೆ ಸಲ್ಲಿಸುವ ಇಲಾಖೆ ಪೆÇಲೀಸ್ ಇಲಾಖೆ. ಸಮಾಜದ ದುಷ್ಟ ಶಕ್ತಿಗಳನ್ನು ಮಟ್ಟ ಹಾಕಲು ಪೆÇಲೀಸರು ಹಗಲಿರುಳು ಶ್ರಮಿಸುತ್ತಿದ್ದಾರೆ. 2001ರಲ್ಲಿ ಸಂಸತ್ ಭವನದ ಮೇಲೆ ದಾಳಿಯಾದಾಗ, 2008ರಲ್ಲಿ ತಾಜ್ ಹೊಟೇಲ್ ಮೇಲೆ ದಾಳಿಯಾದಾಗ ಪೆÇಲೀಸರು ಉತ್ತಮ ಕರ್ತವ್ಯ ನಿರ್ವಹಿಸಿದ್ದಾರೆ. ಅಷ್ಟೇ ಅಲ್ಲದೆ, ಕೊರೊನಾ ಸಂದರ್ಭದಲ್ಲಿ ಪೆÇಲೀಸರು ತಮ್ಮ ಜೀವದ ಹಂಗು ತೊರೆದು ಕರ್ತವ್ಯ ನಿರ್ವಹಿಸಿದ್ದರು ಎಂದು ಶ್ಲಾಘಿಸಿದರು.
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ನಗರ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ, ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿ ಡಾ. ಅರುಣ್ ಕೆ., ಅರಣ್ಯ ಇಲಾಖೆಯ ಸಿಸಿಎಫ್ ಕರಿಕಲನ್ ಅವರು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಹಿರಿಯ, ಕಿರಿಯ ಹಾಗೂ ನಿವೃತ್ತ ಪೆÇಲೀಸ್ ಅಧಿಕಾರಿಗಳು, ಸಾರ್ವಜನಿಕರು ಮತ್ತು ಕೇಂದ್ರ ಸರಕಾರ ಮತ್ತು ರಾಜ್ಯ ಸರಕಾರದ ವಿವಿಧ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಹಿರಿಯ ಅಧಿಕಾರಿಗಳು ವಿಶೇಷ ಆಹ್ವಾನಿತರಾಗಿ ಭಾಗವಹಿಸಿದ್ದರು.
2024 ರ ಸೆಪ್ಟೆಂಬರ್ 1 ರಿಂದ 2025 ರ ಆಗಸ್ಟ್ 31ರವರೆಗಿನ ಅವಧಿಯಲ್ಲಿ ಭಾರತದಲ್ಲಿ ಒಟ್ಟು 191 ಪೆÇಲೀಸರು ಹುತಾತ್ಮರಾಗಿದ್ದು, ಕರ್ನಾಟಕ ರಾಜ್ಯದಲ್ಲಿ 8 ಪೆÇಲೀಸರು ಹುತಾತ್ಮರಾಗಿದ್ದಾರೆ. ಅವರನ್ನು ಸ್ಮರಿಸಿ ಗೌರವ ವಂದನೆ ಸಲ್ಲಿಸಲಾಯಿತು.

























0 comments:
Post a Comment