ಪುತ್ತೂರು : ಅಶೋಕ್ ಜನಮನ ಕಾರ್ಯಕ್ರಮ ಯಶಸ್ಸಿಗಾಗಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ವಿಶೇಷ ಪೂಜೆ - Karavali Times ಪುತ್ತೂರು : ಅಶೋಕ್ ಜನಮನ ಕಾರ್ಯಕ್ರಮ ಯಶಸ್ಸಿಗಾಗಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ವಿಶೇಷ ಪೂಜೆ - Karavali Times

728x90

14 October 2025

ಪುತ್ತೂರು : ಅಶೋಕ್ ಜನಮನ ಕಾರ್ಯಕ್ರಮ ಯಶಸ್ಸಿಗಾಗಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ವಿಶೇಷ ಪೂಜೆ

ಪುತ್ತೂರು, ಅಕ್ಟೋಬರ್ 14, 2025 (ಕರಾವಳಿ ಟೈಮ್ಸ್) : ಶಾಸಕ ಅಶೋಕ್ ರೈ ಅವರ ರೈ ಎಸ್ಟೇಟ್ಸ್ ಎಜುಜೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ದೀಪಾವಳಿ ಪ್ರಯುಜ್ತ ನಡೆಯುವ ಅಶೋಕ ಜನಮನ-2025 ವಸ್ತ್ರ ವಿತರಣೆ ಕಾರ್ಯಕ್ರಮ ಮತ್ತು ಈ ಕಾರ್ಯಕ್ರಮಕ್ಕೆ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾಗವಹಿಸಲಿದ್ದು ಕಾರ್ಯಕ್ರಮ ಯಶಸ್ವಿಗೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪುತ್ತೂರು ಬ್ಲಾಕ್ ಕಾಂಗ್ರೆಸ್ ವತಿಯಿಂದ ವಿಶೇಷ ಪ್ರಾರ್ಥನೆ ನಡೆಸಲಾಯಿತು. 

ಈ ಕಾರ್ಯಕ್ರಮದ ಯಾವುದೇ ವಿಘ್ನಗಳು ಇಲ್ಲದೇ ಬಹಳ ಯಶಸ್ವಿಯಾಗಿ ನಡೆಯಬೇಕು ಎಂಬ ಉದ್ದೇಶದಿಂದ ದೇವರಲ್ಲಿ ಪ್ರಾರ್ಥನೆ ಸಲ್ಲಿಸುವ ಸಲುವಾಗಿ ಸರ್ವ ಧರ್ಮದ ಧಾರ್ಮಿಕ ಕೇಂದ್ರಗಳಲ್ಲಿ ಪ್ರಾರ್ಥನೆ ಮಾಡುವುದಾಗಿ ತಿರ್ಮಾನಿಸಲಾಗಿದೆ. 

ಶಾಸಕ ಅಶೋಕ್ ರೈ ನೇತೃತ್ವದಲ್ಲಿ ನಡೆಯುವ ಅಶೋಕ ಜನಮನ ಕಾರ್ಯಕ್ರಮ ಯಶಸ್ವಿಗಾಗಿ ಶ್ರೀ ಮಹಾಲಿಂಗೇಶ್ವರ ದೇವರಲ್ಲಿ ಪಕ್ಷದ ವತಿಯಿಂದ ವಿಶೇಷ ಪ್ರಾರ್ಥನೆ ನಡೆದಿದೆ. ಎಲ್ಲವೂ ನಿರ್ವಿಘ್ನವಾಗಿ ನಡೆದು ಕಾರ್ಯಕ್ರಮ ಯಶಸ್ವಿಯಾಗಲಿ ಎಂದು ದೇವರಲ್ಲಿ ಬೇಡಿಕೊಳ್ಳಲಾಗಿದೆ. ಎಲ್ಲಾ ಧರ್ಮದ ಧಾರ್ಮಿಕ ಕೇಂದ್ರಕ್ಕೆ ತೆರಳಿ ಪಕ್ಷದ ವತಿಯಿಂದ ವಿಶೇಷ ಪ್ರಾರ್ಥನೆ ನಡೆಯಲಿದೆ ಎಂದು ಪುತ್ತೂರು ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಕೃಷ್ಣಪ್ರಸಾದ್ ಆಳ್ವ ತಿಳಿಸಿದ್ದಾರೆ. 

ಈ ಸಂದರ್ಭ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪಂಜಿಗುಡ್ಡೆ ಈಶ್ವರಭಟ್, ಪುಡಾ ಸದಸ್ಯ ನಿಹಾಲ್ ಪಿ ಶೆಟ್ಟಿ, ಮಹಾಬಲ ರೈ, ಸಂತೋಷ್ ಭಂಡಾರಿ, ಸುದರ್ಶನ್, ಗಿರೀಶ್ ರೈ ಸಂಟ್ಯಾರ್, ದಾಮೋದರ್ ಮುರ, ರೂಪ ರೇಖಾ ಆಳ್ವ, ಹರಿಣಾಕ್ಷಿ, ಜಯಂತ ಕೆಂಗುಡೇಲು, ಪೂರ್ಣೇಶ್ ಭಂಡಾರಿ, ರಂಜಿತ್ ಬಂಗೇರ, ರೋಶನ್ ರೈ ಬನ್ನೂರು ಸಹಿತ ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು.

  • Blogger Comments
  • Facebook Comments

0 comments:

Post a Comment

Item Reviewed: ಪುತ್ತೂರು : ಅಶೋಕ್ ಜನಮನ ಕಾರ್ಯಕ್ರಮ ಯಶಸ್ಸಿಗಾಗಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ವಿಶೇಷ ಪೂಜೆ Rating: 5 Reviewed By: karavali Times
Scroll to Top