ಮಂಗಳೂರು, ಅಕ್ಟೋಬರ್ 23, 2025 (ಕರಾವಳಿ ಟೈಮ್ಸ್) : ಭಾರತೀಯ ಹವಾಮಾನ ಇಲಾಖೆಯ ಹವಾಮಾನ ಮುನ್ಸೂಚನೆಯಂತೆ ಅಕ್ಟೋಬರ್ 23 ರಿಂದ 26ರವರೆಗೆ ಅರಬ್ಬೀ ಸಮುದ್ರದಲ್ಲಿ ಮಳೆ ಮತ್ತು ಭಾರೀ ಗಾಳಿ ಬೀಸುವುದರಿಂದ ಪ್ರಕ್ಷುಬ್ದವಾಗಿರುತ್ತದೆ. ಅನಾಹುತವನ್ನು ತಡೆಯುವ ಸಲುವಾಗಿ ನಾಡದೋಣಿ ಮೀನುಗಾರರು ಸೇರಿದಂತೆ ಯಾರೂ ಮೀನುಗಾರಿಕೆ ನಡೆಸಲು ಸಮುದ್ರಕ್ಕೆ ತೆರಳದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ಮೀನುಗಾರಿಕೆ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
23 October 2025
- Blogger Comments
- Facebook Comments
Subscribe to:
Post Comments (Atom)

















0 comments:
Post a Comment