ಬಂಟ್ವಾಳ, ಅಕ್ಟೋಬರ್ 11, 2025 (ಕರಾವಳಿ ಟೈಮ್ಸ್) : ಸ್ಕೂಟರ್ ಡಿಕ್ಕಿ ಹೊಡೆದು ಹೆದ್ದಾರಿ ದಾಟುತ್ತಿದ್ದ ಪಾದಚಾರಿ ವ್ಯಕ್ತಿ ಗಾಯಗೊಂಡ ಘಟನೆ ಪಾಣೆಮಂಗಳೂರು ಗ್ರಾಮದ ಮೆಲ್ಕಾರ್ ಸಮೀಪದ ಬೋಳಂಗಡಿ ಎಂಬಲ್ಲಿ ಅ 9 ರಂದು ಸಂಜೆ ಸಂಭವಿಸಿದೆ.
ಗಾಯಗೊಂಡ ಪಾದಚಾರಿ ವ್ಯಕ್ತಿಯನ್ನು ಬೋಳಂಗಡಿ ನಿವಾಸಿ ಇಬ್ರಾಹಿಂ (66) ಎಂದು ಹೆಸರಿಸಲಾಗಿದೆ. ಇವರು ಸೆ 9 ರಂದು ಸಂಜೆ 4 ಗಂಟೆ ವೇಳೆಗೆ ಮನೆಯಿಂದ ಮೆಲ್ಕಾರ್ ಕಡೆಗೆ ಹೋಗಲು ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ದಾಟುತ್ತಿದ್ದ ವೇಳೆ ಮೆಲ್ಕಾರ್ ಕಡೆಯಿಂದ ಕಲ್ಲಡ್ಕ ಕಡೆಗೆ ದೀಕ್ಷಿತ್ ಎಂಬವರು ಚಲಾಯಿಸಿಕೊಂಡು ಬಂದ ಸ್ಕೂಟರ್ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ.
ಅಪಘಾತದಿಂದ ಇಬ್ರಾಹಿಂ ಅವರ ತಲೆ ಹಾಗೂ ಕಾಲಿಗೆ ಗಾಯಗಳಾಗಿದ್ದು, ಅವರನ್ನು ಸ್ಕೂಟರ್ ಸವಾರ ಸ್ಥಳೀಯರ ಸಹಕಾರದಿಂದ ಉಪಚರಿಸಿ ತುಂಬೆ ಫಾದರ್ ಮುಲ್ಲರ್ ಆಸ್ಪತ್ರೆಗೆ ಸಾಗಿಸಿದ್ದಾರೆ. ಅಲ್ಲಿ ಪ್ರಥಮ ಚಿಕಿತ್ಸೆ ನೀಡಿದ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಹೈಲ್ಯಾಂಡ್ ಆಸ್ಪತ್ರೆಗೆ ಸಾಗಿಸಲಾಗಿದೆ. ಈ ಬಗ್ಗೆ ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
0 comments:
Post a Comment