ಬಂಟ್ವಾಳ, ಅಕ್ಟೋಬರ್ 09, 2025 (ಕರಾವಳಿ ಟೈಮ್ಸ್) : ಸ್ಕೂಟರ್ ಸ್ಕಿಡ್ ಆಗಿ ಬಿದ್ದು ಸವಾರರಿಬ್ಬರು ಗಾಯಗೊಂಡ ಆಸ್ಪತ್ರೆಗೆ ದಾಖಲಾದ ಘಟನೆ ಕನ್ಯಾನ ಗ್ರಾಮದ ಬೊಳ್ಪಾದೆ ಎಂಬಲ್ಲಿ ಅ 5 ರಂದು ಸಂಭವಿಸಿದೆ.
ಗಾಯಗೊಂಡ ಸ್ಕೂಟರ್ ಸವಾರರನ್ನು ಮುಹಮ್ಮದ್ ಫಾರಿಶ್ ಹಾಗೂ ಮುಹಮ್ಮದ್ ಆರಿಫ್ ಎಂದು ಹೆಸರಿಸಲಾಗಿದೆ. ಇವರು ಅ 5 ರಂದು ಕೇರಳ ರಾಜ್ಯದ ಬಾಯಾರು ಎಂಬಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮಕ್ಕೆ ತೆರಳಿ ವಾಪಾಸು ಬರುತ್ತಿದ್ದ ವೇಳೆ ಬೊಳ್ಪಾದೆ ತಿರುವಿನಲ್ಲಿ ಸ್ಕೂಟರ್ ಸ್ಕಿಡ್ ಆಗಿ ರಸ್ತೆಗೆ ಬಿದ್ದಿದ್ದಾರೆ. ಅಪಘಾತದಿಂದ ಗಾಯಗೊಂಡ ಇವರನ್ನು ಅದೇ ಕಾರ್ಯಕ್ರಮಕ್ಕೆ ತೆರಳಿ ಹಿಂದಿನಿಂದ ಬರುತ್ತಿದ್ದ ಸ್ಕೂಟರ್ ಸವಾರ ಗೂಡಿನಬಳಿ ನಿವಾಸಿ ಅಬ್ದುಲ್ ರಜಾಕ್ ಅವರು ಅಂಬ್ಯುಲೆನ್ಸ್ ಮೂಲಕ ಮಂಗಳೂರಿನ ಹೈಲ್ಯಾಂಡ್ ಆಸ್ಪತ್ರೆಗೆ ಸಾಗಿಸಿದ್ದಾರೆ. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
0 comments:
Post a Comment