ಬಂಟ್ವಾಳ, ಅಕ್ಟೋಬರ್ 15, 2025 (ಕರಾವಳಿ ಟೈಮ್ಸ್) : ಕಾರು ಡಿಕ್ಕಿ ಹೊಡೆದು ಇಲೆಕ್ಟ್ರಿಕ್ ದ್ವಿಚಕ್ರ ವಾಹನದಲ್ಲಿ ಸಂಚರಿಸುತ್ತಿದ್ದ ಇಬ್ಬರು ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿಗಳು ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಪಂಜಿಕಲ್ಲು ಗ್ರಾಮದ ಸೊರ್ನಾಡು ಎಂಬಲ್ಲಿ ಅ 13 ರಂದು ಸಂಭವಿಸಿದೆ.
ಗಾಯಗೊಂಡ ವಿದ್ಯಾರ್ಥಿಗಳನ್ನು ಅರಳ ಗ್ರಾಮದ ಕೆಮ್ಮಡ ಜೋರ ಹಿರ್ನಿ ನಿವಾಸಿ, ವಳಚ್ಚಿಲ್ ಶ್ರೀನಿವಾಸ್ ಕಾಲೇಜಿನ ದ್ವಿತೀಯ ವರ್ಷದ ವಿದ್ಯಾರ್ಥಿ ದೀಕ್ಷಿತ್ (21) ಹಾಗೂ ಅವರ ಸ್ನೇಹಿತ ಶೈಲೇಶ್ ಎಂದು ಹೆಸರಿಸಲಾಗಿದೆ.
ಇವರು ಅ 13 ರಂದು ಸಂಜೆ ಕಾಲೇಜು ಮುಗಿಸಿ ಎಲೆಕ್ಟ್ರಿಕಲ್ ಸ್ಕೂಟರಿನಲ್ಲಿ ಮನೆ ಕಡೆ ಬರುತ್ತಿದ್ದ ವೇಳೆ ಪಂಜಿಕಲ್ಲು ಕಡೆಗೆ ಹೋಗುತ್ತಿರುವಾಗ ಸಂಜೆ ಸುಮಾರು 4.45 ಗಂಟೆಗೆ ಪಂಜಿಕಲ್ಲು ಗ್ರಾಮದ ಸೊರ್ನಾಡ್ ಎಂಬಲ್ಲಿಗೆ ತಲುಪುತ್ತಿದ್ದಂತೆ, ಎದುರುಗಡೆಯಿಂದ ಅಂದರೆ ಪಂಜಿಕಲ್ಲು ಕಡೆಯಿಂದ ಬಂಟ್ವಾಳ ಕಡೆಗೆ ಗಾಡ್ ಫ್ರೇ ಪಾಶನ್ ಎಂಬವರು ಚಲಾಯಿಸಿಕೊಂಡು ಬಂದ ಕಾರು ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. ಪರಿಣಾಮ ಸವಾರರಿಬ್ಬರು ಸ್ಕೂಟರ್ ಸಮೇತ ರಸ್ತೆಗೆ ಬಿದ್ದು ಗಾಯಗೊಂಡಿದ್ದಾರೆ. ಗಾಯಗೊಂಡ ಸವಾರರನ್ನು ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿ ಅಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿದ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ದೇರಳಕಟ್ಟೆಯ ಕೆ ಎಸ್ ಹೆಗ್ಡೆ ಆಸ್ಪತ್ರೆಗೆ ಸಾಗಿಸಲಾಗಿದೆ. ಈ ಬಗ್ಗೆ ಬಂಟ್ವಾಳ ಸಂಚಾರಿ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.














0 comments:
Post a Comment