ಬಂಟ್ವಾಳ, ಅಕ್ಟೋಬರ್ 17, 2025 (ಕರಾವಳಿ ಟೈಮ್ಸ್) : ಕಾರು ಡಿಕ್ಕಿ ಹೊಡೆದು ಬೈಕ್ ಸವಾರ ಗಾಯಗೊಂಡ ಘಟನೆ ಬಿ ಸಿ ರೋಡು-ಮೂಡಬಿದ್ರೆ ರಾಜ್ಯ ಹೆದ್ದಾರಿಯ ಪಂಜಿಕಲ್ಲು ಗ್ರಾಮದ ಸೊರ್ನಾಡು ತಿರುವಿನಲ್ಲಿ ಸಂಭವಿಸಿದೆ.
ಗಾಯಗೊಂಡ ಬೈಕ್ ಸವಾರನನ್ನು ಪಂಜಿಕಲ್ಲು ಗ್ರಾಮದ ಪಾಂಗಾಳ ನಿವಾಸಿ ಸುರೇಶ್ (38) ಎಂದು ಹೆಸರಿಸಲಾಗಿದೆ. ಇವರು ತನ್ನ ಬೈಕಿನಲ್ಲಿ ಮಂಗಳೂರು ಕಡೆಯಿಂದ ಬಿ ಸಿ ರೋಡು ಮಾರ್ಗವಾಗಿ ಮನೆ ಕಡೆ ಹೊರಟಿದ್ದ ವೇಳೆ ಸೊರ್ನಾಡು ತಿರುವಿನಲ್ಲಿ ಮೂಡಬಿದ್ರೆ ಕಡೆಯಿಂದ ಬಿ ಸಿ ರೋಡು ಕಡೆಗೆ ಆಸ್ಯತ್ ನಸ್ರಿಯಾ ಎಂಬವರು ಚಲಾಯಿಸಿಕೊಂಡು ಬಂದ ಕಾರು ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ.
ಅಪಘಾತದಿಂದ ಬೈಕ್ ಸಮೇತ ರಸ್ತೆಗೆ ಬಿದ್ದ ಸುರೇಶ್ ಅವರು ಗಾಯಗೊಂಡಿದ್ದು, ಅವರನ್ನು ದೇರಳಕಟ್ಟೆ ಕೆ ಎಸ್ ಹೆಗ್ಡೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

















0 comments:
Post a Comment