ನಾರ್ವೆ ಸಂಸತ್ತಿಗೆ ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ನೇತೃತ್ವದ ನಿಯೋಗ ಭೇಟಿ - Karavali Times ನಾರ್ವೆ ಸಂಸತ್ತಿಗೆ ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ನೇತೃತ್ವದ ನಿಯೋಗ ಭೇಟಿ - Karavali Times

728x90

21 October 2025

ನಾರ್ವೆ ಸಂಸತ್ತಿಗೆ ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ನೇತೃತ್ವದ ನಿಯೋಗ ಭೇಟಿ

ಮಂಗಳೂರು, ಅಕ್ಟೋಬರ್ 21, 2025 (ಕರಾವಳಿ ಟೈಮ್ಸ್) : ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಅವರ ನೇತೃತ್ವದಲ್ಲಿ ನಿಯೋಗವು ನಾರ್ವೆ ಪಾರ್ಲಿಮೆಂಟ್‍ಗೆ  ಭೇಟಿ ನೀಡಿತು. 1814ರಲ್ಲಿ ಸ್ಥಾಪಿತವಾದ ನಾರ್ವೆ ಸಂಸತ್ತು ವಿಶ್ವದ ಅತ್ಯಂತ ಹಳೆಯ ಪ್ರಜಾಪ್ರಭುತ್ವ ಸಂಸತ್ತುಗಳಲ್ಲಿ ಒಂದು ಹಾಗೂ ಅದೇ ವರ್ಷ ಅಂಗೀಕರಿಸಲಾದ ನಾರ್ವೆಯ ಸಂವಿಧಾನವು ಇಂದಿಗೂ ಶಾಶ್ವತ ಪ್ರಜಾಪ್ರಭುತ್ವದ ಮಾದರಿಯಾಗಿ ಉಳಿದಿದೆ. ಈ ಸಂದರ್ಭದಲ್ಲಿ ಅವರು ನಾರ್ವೆಯ ಮಾಜಿ ಸಚಿವರೂ ಹಾಗೂ  ಮಾಜಿ ಸಂಸದರೂ ಆಗಿದ್ದ ಹಿಮಾಂಶು ಗುಲೇಟ್ ಅವರೊಂದಿಗೆ ವಿಚಾರ ವಿನಿಮಯ ನಡೆಸಿದರು. 

ಭೇಟಿಯ ವೇಳೆ ನಾರ್ವೆಯ ಇತಿಹಾಸ, ಸಂವಿಧಾನ, ಆಡಳಿತ ವ್ಯವಸ್ಥೆ ಹಾಗೂ ಜನಪರ ಯೋಜನೆಗಳ ಬಗ್ಗೆ ಚರ್ಚಿಸಲಾಯಿತು.  ಅಲ್ಲದೆ, ಎರಡೂ ರಾಷ್ಟ್ರಗಳ ಸಂಸತ್ತಿನ ಕಾರ್ಯನಿರ್ವಹಣಾ ವಿಧಾನಗಳು, ಜನತಾಂತ್ರಿಕ ಪ್ರಕ್ರಿಯೆಗಳ ವಿನ್ಯಾಸ ಹಾಗೂ ಸಂಸದೀಯ ಅಧಿವೇಶನಗಳ ನಿರ್ವಹಣೆ ಕುರಿತಂತೆ ಪರಸ್ಪರ ಅಭಿಪ್ರಾಯ ವಿನಿಮಯವೂ ನಡೆಯಿತು.

ಸ್ಪೀಕರ್ ಯು.ಟಿ ಖಾದರ್ ಅವರು, ಕರ್ನಾಟಕದಲ್ಲಿ ರಾಜ್ಯ ಸರ್ಕಾರ ಕೈಗೊಂಡಿರುವ ವಿವಿಧ ಕಲ್ಯಾಣ ಯೋಜನೆಗಳ ಕುರಿತು ಮಾಹಿತಿ ನೀಡಿದರು. ಪ್ರಮುಖ ಯೋಜನೆಗಳನ್ನು ವಿವರಿಸಿದರು. ಸ್ಪೀಕರ್ ಖಾದರ್ ಅವರು ನಾರ್ವೆಯ ಪ್ರಗತಿಶೀಲ ಜನತಾಂತ್ರಿಕ ಮಾದರಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ, ಕರ್ನಾಟಕ ಮತ್ತು ನಾರ್ವೆ  ದೇಶದ ನಡುವೆ ಶಿಕ್ಷಣ, ಪ್ರವಾಸೋದ್ಯಮ ಮತ್ತು ಸಾಂಸ್ಕøತಿಕ ಸಹಕಾರ ವೃದ್ಧಿಯ ಸಾಧ್ಯತೆಗಳ ಬಗ್ಗೆ ಚರ್ಚಿಸಿದರು.

ಈ ಸಂದರ್ಭ ಕರ್ನಾಟಕ ವಿಧಾನ ಪರಿಷತ್ ಕಾರ್ಯದರ್ಶಿ ಕೆ ಆರ್ ಮಹಾಲಕ್ಷ್ಮಿ ಹಾಗೂ ಸ್ಪೀಕರ್ ಆಪ್ತ ಕಾರ್ಯದರ್ಶಿ ಮಹೇಶ್ ಕರ್ಜಗಿ ಉಪಸ್ಥಿತರಿದ್ದರು.

  • Blogger Comments
  • Facebook Comments

0 comments:

Post a Comment

Item Reviewed: ನಾರ್ವೆ ಸಂಸತ್ತಿಗೆ ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ನೇತೃತ್ವದ ನಿಯೋಗ ಭೇಟಿ Rating: 5 Reviewed By: karavali Times
Scroll to Top