ಬಂಟ್ವಾಳ, ಅಕ್ಟೋಬರ್ 10, 2025 (ಕರಾವಳಿ ಟೈಮ್ಸ್) : ಕಾಲು, ಬೆನ್ನು ಹಾಗೂ ಸೊಂಟ ನೋವಿನಿಂದ ಬಳಲುತ್ತಿದ್ದ ವ್ಯಕ್ತಿಯೋರ್ವರು ಮನೆಯಲ್ಲೇ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಪೂಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯ ತಣ್ಣೀರುಪಂಥ ಗ್ರಾಮದ ಅಳಕ್ಕೆ ಎಂಬಲ್ಲಿ ಅ 9 ರಂದು ಅಪರಾಹ್ನ ಸಂಭವಿಸಿದೆ.
ಮೃತ ವ್ಯಕ್ತಿಯನ್ನು ಇಲ್ಲಿನ ನಿವಾಸಿ ದಿವಂಗತ ಆನಂದ ಪೂಜಾರಿ ಅವರ ಪುತ್ರ ಸಂತೋಷ್ ಕುಮಾರ್ (40) ಎಂದು ಹೆಸರಿಸಲಾಗಿದೆ. ಮೇಸ್ತ್ರಿ ಕೆಲಸ ಮಾಡಿಕೊಂಡಿರುವ ಸಂತೋಷನಿಗೆ ಕಳೆದ 2 ತಿಂಗಳಿನಿಂದ ಕಾಲುನೋವು, ಸೊಂಟ ನೋವು, ಬೆನ್ನು ನೋವು ಇದ್ದ ಕಾರಣ ಕೆಲಸಕ್ಕೆ ಹೋಗದೆ ಮನೆಯಲ್ಲೇ ಇದ್ದರು. ಈ ಬಗ್ಗೆ ಮಂಗಳೂರು ಕೆಎಂಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅ 9 ರಂದು ಅಪರಾಹ್ನ 3 ಗಂಟೆ ವೇಳೆಗೆ ಮನೆಯಲ್ಲೇ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾನೆ. ಈ ಬಗ್ಗೆ ಅವರ ತಾಯಿ ಶ್ರೀಮತಿ ಚಂಪಾ ಅವರು ನೀಡಿದ ದೂರಿನಂತೆ ಪೂಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
0 comments:
Post a Comment