ಸುರತ್ಕಲ್ ಬಾರ್ ಬಳಿ ಚೂರಿ ಇರಿತ ಪ್ರಕರಣದ ನಾಲ್ವರು ಆರೋಪಿಗಳ ಬಂಧನ : ಇನ್ನಿಬ್ಬರಿಗಾಗಿ ಶೋಧ ಮುಂದುವರಿಸಿದ ಪೊಲೀಸರು - Karavali Times ಸುರತ್ಕಲ್ ಬಾರ್ ಬಳಿ ಚೂರಿ ಇರಿತ ಪ್ರಕರಣದ ನಾಲ್ವರು ಆರೋಪಿಗಳ ಬಂಧನ : ಇನ್ನಿಬ್ಬರಿಗಾಗಿ ಶೋಧ ಮುಂದುವರಿಸಿದ ಪೊಲೀಸರು - Karavali Times

728x90

24 October 2025

ಸುರತ್ಕಲ್ ಬಾರ್ ಬಳಿ ಚೂರಿ ಇರಿತ ಪ್ರಕರಣದ ನಾಲ್ವರು ಆರೋಪಿಗಳ ಬಂಧನ : ಇನ್ನಿಬ್ಬರಿಗಾಗಿ ಶೋಧ ಮುಂದುವರಿಸಿದ ಪೊಲೀಸರು

ಮಂಗಳೂರು, ಅಕ್ಟೋಬರ್ 24, 2025 (ಕರಾವಳಿ ಟೈಮ್ಸ್) : ಸುರತ್ಕಲ್ ಪೆÇಲೀಸ್ ಠಾಣಾ ವ್ಯಾಪ್ತಿಯ ಕಾನಾದ ಬಳಿಯಲ್ಲಿ ಗುರುವಾರ ರಾತ್ರಿ ಯುವಕರಿಬ್ಬರಿಗೆ ಚೂರಿಯಿಂದ ಇರಿದು ಕೊಲೆಗೆ ಯತ್ನಿಸಿದ ಪ್ರಕರಣದಲ್ಲಿ  ಭಾಗಿಯಾದ ಆರೋಪಿಗಳ ಪೈಕಿ ನಾಲ್ಕು ಮಂದಿಯನ್ನು ಪೊಲೀಸರು ಮಿಂಚಿನ ಕಾರ್ಯಾಚರಣೆಯಲ್ಲಿ ಶುಕ್ರವಾರ ಬಂಧಿಸಿದ್ದಾರೆ. 

ಬಂಧಿತ ಆರೋಪಿಗಳನ್ನು ಕೃತ್ಯದಲ್ಲಿ ನೇರ ಭಾಗಿಯಾದ ಸುರತ್ಕಲ್-ಕಾನಾ ಕಟ್ಲ ಮನೆ ನಿವಾಸಿ ಆನಂದ ಎಂಬವರ ಪುತ್ರ ಸುಶಾಂತ್ ಅಲಿಯಾಸ್ ಕಡವಿ (29), ಇಡ್ಯಾ ಗ್ರಾಮದ ಕಾನಾ ಕಟ್ಲ ನಿವಾಸಿ ವರ್ಗೀಸ್ ಎಂಬವರ ಪುತ್ರ ಕೆ ವಿ ಅಲೆಕ್ಸ್ (27), ಸುರತ್ಕಲ್ ಶಿವಕೃಪಾ-ಇಂದಿರಾಕಟ್ಟೆ ನಿವಾಸಿ ಮಂಕು ಕುಲಾಲ್ ಎಂಬವರ ಪುತ್ರ ನಿತಿನ್ (26) ಹಾಗೂ ಆರೋಪಿಗಳಿಗೆ ಆಶ್ರಯ ಕೊಟ್ಟ ಸುರತ್ಕಲ್ ಹೊನ್ನಕಟ್ಟೆ ಕುಳಾಯಿಗುಡ್ಡೆ ವಿದ್ಯಾನಗರ ರಸ್ತೆ ನಿವಾಸಿ ದಿವಂಗತ ಡಿ ಸುರೇಂದ್ರನಾಥ ಎಂಬವರ ಪಉತ್ರ ಅರುಣ್ ಶೆಟ್ಟಿ (56) ಎಂದು ಹೆಸರಿಸಲಾಗಿದೆ. 

ಪ್ರಕರಣದಲ್ಲಿ ಭಾಗಿಯಾದ ಪ್ರಮುಖ ಆರೋಪಿ ಗುರುರಾಜ್ ಆಚಾರಿ ಹಾಗೂ ಆರೋಪಿಗಳಿಗೆ ಅರುಣ್ ಶೆಟ್ಟಿಯೊಂದಿಗೆ ಅಶ್ರಯ ನೀಡಿದ ಅಶೋಕ್ ಎಂಬವರು ತಲೆಮರೆಸಿಕೊಂಡಿದ್ದು, ಅವರ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ. 

ಅ 23 ರಂದು ರಾತ್ರಿ ಸುಮಾರು 10.30ರ ವೇಳೆಗೆ ಸುರತ್ಕಲ್-ಕಾನಾ ಬಳಿಯ ದೀಪಕ್ ಬಾರ್ ಬಳಿಯಲ್ಲಿ ಕ್ಷುಲಕ ಕಾರಣಕ್ಕಾಗಿ ಹಸನ್ ಮುಕ್ಷಿತ್ ಮತ್ತು ನಿಝಾಂ ಎಂಬ ಯುವಕರಿಬ್ಬರಿಗೆ ಈ ಹಿಂದೆ ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಗುರುರಾಜ್ ಆಚಾರಿ, ಅಲೆಕ್ಸ್ ಸಂತೋಷ್, ನಿತಿನ್ ಮತ್ತು ಸುಶಾಂತ್ ಸೇರಿಕೊಂಡು ಚೂರಿಯಿಂದ ಇರಿದು ಕೊಲೆಗೆ ಯತ್ನಿಸಿದ್ದರು. 

ಆರೋಪಿಗಳ ಪತ್ತೆ ಕಾರ್ಯದಲ್ಲಿ ಹಾಗೂ ತನಿಖೆಯಲ್ಲಿ ಉಪ ಪೊಲೀಸ್ ಆಯುಕ್ತ ರವಿಶಂಕರ್ ಅವರ ನಿರ್ದೇಶನದಂತೆ, ಸಹಾಯಕ ಆಯುಕ್ತ ಶ್ರೀಕಾಂತ್ ಕೆ ಅವರ ಮಾರ್ಗದರ್ಶನದಲ್ಲಿ, ಸುರತ್ಕಲ್ ಪೆÇಲೀಸ್ ಠಾಣಾ ಪೆÇಲೀಸ್ ಇನ್ಸ್ ಪೆಕ್ಟರ್ ಪ್ರಮೋದ್ ಕುಮಾರ್ ಪಿ ಅವರ ನೇತೃತ್ವದಲ್ಲಿ ಪಿಎಸ್ಸೈಗಳಾದ ರಾಘವೇಂದ್ರ ನಾಯ್ಕ್, ಜನಾರ್ಧನ ನಾಯ್ಕ್, ಶಶಿಧರ ಶೆಟ್ಟಿ, ಎಎಸ್ಸೈಗಳಾದ ರಾಜೇಶ್ ಆಳ್ವ, ತಾರನಾಥ, ರಾಧಾಕೃಷ್ಣ ಹಾಗೂ ಸಿಬ್ಬಂದಿಗಳಾದ ಅಣ್ಣಪ್ಪ, ಉಮೇಶ್ ಕುಮಾರ್, ತಿರುಪತಿ, ಅಜಿತ್ ಮ್ಯಾಥ್ಯೂ, ರಾಮು ಕೆ, ಕಾರ್ತೀಕ್, ವಿನೋದ್  ಅವರು ಹಾಗೂ ಸಿಸಿಬಿ ಘಟಕದ ಅಧಿಕಾರಿ/ ಸಿಬ್ಬಂದಿಗಳು ಹಾಗೂ ಎಸ್ ಎ ಎಫ್ ತಂಡದ ಸದಸ್ಯರು ಮತ್ತು ಶ್ವಾನದಳ ಭಾಗವಹಿಸಿದೆ. 

  • Blogger Comments
  • Facebook Comments

0 comments:

Post a Comment

Item Reviewed: ಸುರತ್ಕಲ್ ಬಾರ್ ಬಳಿ ಚೂರಿ ಇರಿತ ಪ್ರಕರಣದ ನಾಲ್ವರು ಆರೋಪಿಗಳ ಬಂಧನ : ಇನ್ನಿಬ್ಬರಿಗಾಗಿ ಶೋಧ ಮುಂದುವರಿಸಿದ ಪೊಲೀಸರು Rating: 5 Reviewed By: karavali Times
Scroll to Top