ಬಂಟ್ವಾಳ, ಅಕ್ಟೋಬರ್ 08, 2025 (ಕರಾವಳಿ ಟೈಮ್ಸ್) : ತಲೆ ತಿರುಗಿ ಬಿದ್ದು ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಪುದು ಗ್ರಾಮದ ಪೆಲಪಾಡಿ ಎಂಬಲ್ಲಿ ಸೋಮವಾರ ಸಂಭವಿಸಿದೆ.
ಮೃತ ವ್ಯಕ್ತಿಯನ್ನು ಪುದು ಗ್ರಾಮದ ಪದೆಂಜಿಮಾರ್ ನಿವಾಸಿ ದಿವಂಗತ ಪರಮೇಶ್ವರ ಎಂಬವರ ಪುತ್ರ ಉಮಾನಾಥ (54) ಎಂದು ಹೆಸರಿಸಲಾಗಿದೆ. ಇವರು ಕೃಷಿ ಕೂಲಿ ಕೆಲಸ ಮಾಡಿಕೊಂಡಿದ್ದು, ಸೆ 29 ರಂದು ಪುದು ಗ್ರಾಮದ ಪೆಲಪಾಡಿ ಎಂಬಲ್ಲಿ ಕೆಲಸಕ್ಕೆ ಹೋದವರು ಬೆಳಿಗ್ಗೆ 9.30ರ ವೇಳೆಗೆ ತಲೆ ತಿರುಗಿ ಅಥವಾ ಬೇರೆ ಯಾವುದೋ ಕಾರಣದಿಂದ ಬಿದ್ದಿದ್ದು, ತಲೆಯ ಹಿಂಭಾಗಕ್ಕೆ ಗಾಯವಾಗಿತ್ತು. ತಕ್ಷಣ ಇವರನ್ನು ಯೋಗೀಶ್ ಮತ್ತು ಕರುಣಾಕರ ಅವರು ತುಂಬೆ ಫಾದರ್ ಮುಲ್ಲರ್ ಆಸ್ಪತ್ರೆಗೆ ಸಾಗಿಸಿದ್ದರು. ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಫಾದರ್ ಮುಲ್ಲರ್ ಆಸ್ಪತ್ರೆಗೆ ಸಾಗಿಸಲಾಗಿತ್ತು. ಅಲ್ಲಿ ಅವರು ಚಿಕಿತ್ಸೆ ಫಲಕಾರಿಯಾಗದೆ ಅ 6 ರಂದು ಬೆಳಿಗ್ಗೆ ಮೃತಪಟ್ಟಿದ್ದಾರೆ. ಈ ಬಗ್ಗೆ ಮೃತರ ಸಹೋದರ ಐತಪ್ಪ ಅವರು ನೀಡಿದ ದೂರಿನಂತೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಯುಡಿಆರ್ ಪ್ರಕರಣ ದಾಖಲಾಗಿದೆ.













0 comments:
Post a Comment