ಮಂಗಳೂರು, ಅಕ್ಟೋಬರ್ 08, 2025 (ಕರಾವಳಿ ಟೈಮ್ಸ್) : ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪಿಕಪ್ ವಾಹನ ಹಾಗೂ ಮಂಗಳೂರು ದಕ್ಷಿಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೈಕ್ ಕಳ್ಳತನ ಮಾಡಿದ ಕೇರಳ ರಾಜ್ಯದ ಕುಖ್ಯಾತ ಅಂತರ್ ರಾಜ್ಯ ವಾಹನ ಕಳವು ಆರೋಪಿಯೋರ್ವನನ್ನು ದಸ್ತಗಿರಿ ಮಾಡಿರುವ ಸುರತ್ಕಲ್ ಪೊಲೀಸರು ಪಿಕಪ್ ವಾಹನ ಹಾಗೂ ಬೈಕನ್ನು ವಶಪಡಿಸಿಕೊಂಡಿದ್ದಾರೆ.
ಬಂಧಿತ ಆರೋಪಿಯನ್ನು ಕೇರಳ ರಾಜ್ಯದ ತಿರುವನಂತಪುರಂ ಜಿಲ್ಲೆ, ವೆಟ್ಟೂರು ಅಂಚೆ ವ್ಯಾಪ್ತಿಯ, ರಾತಿಕ್ಕಲ್, ವರ್ಕಳಾ ಗ್ರಾಮದ ವಯಲಿಲ್ ವೀಡು ನಿವಾಸಿ ಶಾಜಿ ಅಲಿಯಾಸ್ ಶಾಫಿ ಎಂಬವರ ಪುತ್ರ ಹಂಝ ಕುಪ್ಪಿಕಂಡ ಅಲಿಯಾಸ್ ಹಂಸ ಅಲಿಯಾಸ್ ಹಂಝ ಪೊನ್ನನ್ (29) ಎಂದು ಹೆಸರಿಸಲಾಗಿದೆ.
ಸೆ 30 ರಂದು ರಾತ್ರಿ ಸುಮಾರು 9 ಗಂಟೆಗೆ ಸುರತ್ಕಲ್ ಪೆÇಲೀಸ್ ಠಾಣಾ ವ್ಯಾಪ್ತಿಯ ಕುಳಾಯಿಯ ಸುಕುಮಾರ್ ಎಂಬವರ ಮನೆಯ ಆವರಣದಲ್ಲಿ ನಿಲ್ಲಿಸಿದ್ದ ಕೆಎ19 ಎಇ8017 ನೋಂದಣಿ ಸಂಖ್ಯೆಯ ಪಿಕಪ್ ವಾಹನವನ್ನು ಕಳವು ಮಾಡಿರುವ ಬಗ್ಗೆ ಅ 3 ರಂದು ಸುರತ್ಕಲ್ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಈ ಪ್ರಕರಣದ ಆರೋಪಿಗಳ ಪತ್ತೆ ಕಾರ್ಯ ನಡೆಸುತ್ತಿದ್ದ ಸಮಯ ಅ 7 ರಂದು ಮಂಗಳವಾರ ಬೈಕೊಂದರಲ್ಲಿ ಅನುಮಾನಸ್ಪದ ರೀತಿಯಲ್ಲಿ ತಿರುಗಾಡುತ್ತಿದ್ದ ಆರೋಪಿ ಹಂಝ ಕುಪ್ಪಿಕಂಡ ಎಂಬಾತನನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಿದ ಸಮಯ ಆತ ಚಲಾಯಿಸುತ್ತಿದ್ದ ಬೈಕಿಗೆ ಯಾವುದೇ ದಾಖಲಾತಿಗಳಿಲ್ಲದೇ ಇದ್ದು, ಸದ್ರಿ ಬೈಕನ್ನು ಮಂಗಳೂರು ದಕ್ಷಿಣ ಪೆÇಲೀಸ್ ಠಾಣಾ ವ್ಯಾಪ್ತಿಯ ಫಾರಂ ಮಾಲ್ ಬಳಿಯಿಂದ ಕಳ್ಳತನ ಮಾಡಿರುವುದಾಗಿದೆ. ಈ ಬಗ್ಗೆ ಮಂಗಳೂರು ದಕ್ಷಿಣ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅಲ್ಲದೇ ಈತನು ಸೆ 30 ರಂದು ಕುಳಾಯಿ ಬಳಿಯಿಂದ ಪಿಕಪ್ ವಾಹನವನ್ನು ಕಳವು ಮಾಡಿರುವುದು ತನಿಖೆಯಿಂದ ತಿಳಿದುಬಂದಂತೆ ಈ ಎರಡು ವಾಹನಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ವಶಪಡಿಸಿಕೊಂಡ ವಾಹನಗಳ ಒಟ್ಟು ಮೊತ್ತ 3.10 ಲಕ್ಷ ರೂಪಾಯಿ ಎಂದು ಅಂದಾಜಿಸಲಾಗಿದೆ.
ಆರೋಪಿ ಹಂಝ ಕುಪ್ಪಿಕಂಡ ಎಂಬಾತನು ಕುಖ್ಯಾತ ಕಳ್ಳತನ ಆರೋಪಿಯಾಗಿದ್ದು, ಈತನ ವಿರುದ್ದ ಕೇರಳ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮೊಬೈಲ್ ಕಳ್ಳತನ, ವಾಹನ ಕಳ್ಳತನ ಸೇರಿದಂತೆ ಸುಮಾರು 17 ಪ್ರಕರಣಗಳು ದಾಖಲಾಗಿರುತ್ತದೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಆರೋಪಿ ಪತ್ತೆ ಕಾರ್ಯದಲ್ಲಿ ಸುರತ್ಕಲ್ ಪೆÇಲೀಸ್ ಠಾಣಾ ಪೆÇಲೀಸ್ ಇನ್ಸ್ ಪೆಕ್ಟರ್ ಪ್ರಮೋದ್ ಕುಮಾರ್ ಅವರ ಮಾರ್ಗದರ್ಶನದಲ್ಲಿ ಪಿಎಸ್ಸೈ ಶಶಿಧರ ಶೆಟ್ಟಿ, ಎಎಸ್ಸೈ ರಾಜೇಶ್ ಆಳ್ವ, ಸಿಬ್ಬಂದಿಗಳಾದ ಉಮೇಶ್, ವಿನೋದ್ ಕುಮಾರ್, ನಾಗರಾಜ್, ಸುನೀಲ್ ಕುಮಾರ್ ಅವರು ಪಾಲ್ಗೊಂಡಿದ್ದಾರೆ.














0 comments:
Post a Comment