ಮಂಗಳೂರು, ಅಕ್ಟೋಬರ್ 05, 2025 (ಕರಾವಳಿ ಟೈಮ್ಸ್) : ಮುಲ್ಕಿ ಪೊಲೀಸ್ ಠಾಣಾ ಆರೋಪಿಯಾಗಿ ಕಳೆದ 8 ವರ್ಷಗಳಿಂದ ಪೊಲೀಸರ ಕೈಗೆ ಸಿಗದೆ ತಲೆ ಮರೆಸಿಕೊಂಡಿದ್ದ ಭೂಗತ ಪಾತಕಿ ಕಲಿ ಯೋಗೀಶನ ಸಹಚರನೋರ್ವನನ್ನು ಮಂಗಳೂರು ಪೊಲೀಸರ ತಂಡ ಮುಂಬೈಯಿಂದ ಬಂಧಿಸಿ ಕರೆ ತರುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತ ಆರೋಪಿಯನ್ನು ಭೂಗತ ಪಾತಕಿ ಕಲಿ ಯೋಗೀಶನ ಸಹಚರ, ಮುಲ್ಕಿ ತಾಲೂಕು, ಚಿತ್ರಾಪು ಗ್ರಾಮದ ನಿವಾಸಿ ದಿವಂಗತ ಕೃಷ್ಣ ಶೆಟ್ಟಿ ಎಂಬವರ ಪುತ್ರ ಶ್ರೀನಿವಾಸ್ ಅಲಿಯಾಸ್ ಶೀನು (45) ಎಂದು ಹೆಸರಿಸಲಾಗಿದೆ. ಮಂಗಳೂರು ನಗರ ಕಮಿಷನರೇಟ್ ವ್ಯಾಪ್ತಿಯ ಮುಲ್ಕಿ ಪೆÇಲೀಸ್ ಠಾಣೆಯಲ್ಲಿ ದಾಖಲಾಗಿರುವ ಅಪರಾಧ ಕ್ರಮಾಂಕ 155/2017 ಹಾಗೂ ಕೋಕಾ ಪ್ರಕರಣದ ಅರೋಪಿಯಾಗಿದ್ದ ಈತ ಕಳೆದ 8 ವರ್ಷಗಳಿಂದ ದಸ್ತಗಿರಿಗೆ ಸಿಗದೆ, ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ.
ಈತನ ವಿರುದ್ದ ಮೈಸೂರು ಪ್ರಿನ್ಸಿಪಲ್ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ವಾರೆಂಟ್ ಹಾಗೂ ಉದ್ಘೂಷಣೆ ಹೊರಡಿಸಿರುತ್ತದೆ. ಈತನ ಪತ್ತೆ ಬಗ್ಗೆ ಮಂಗಳೂರು ಉತ್ತರ ಉಪವಿಭಾಗದ ಪಣಂಬೂರು ಸಹಾಯಕ ಪೊಲೀಸ್ ಆಯುಕ್ತ ಶ್ರೀಕಾಂತ್ ಅವರ ಮಾರ್ಗದರ್ಶನದಲ್ಲಿ ಮುಲ್ಕಿ ಪೆÇಲೀಸ್ ಠಾಣಾ ಪೆÇಲೀಸ್ ಇನ್ಸ್ ಪೆಕ್ಟರ್ ಮಂಜುನಾಥ ಬಿ ಎಸ್, ಪಿಎಸ್ಸೈ ಉಮೇಶ್ ಕುಮಾರ್ ಎಂ ಎನ್ ಅವರ ನೇತೃತ್ವದಲ್ಲಿ ಸಿಬ್ಬಂದಿಗಳಾದ ಎಎಸ್ಸೈ ಸುರೇಶ್ ಕುಂದರ್, ಎಚ್ ಸಿ ಉದಯ ಅವರನ್ನೊಳಗೊಂಡ ತಂಡ ರಚಿಸಿ ಆರೋಪಿಯ ಪತ್ತೆಗೆ ಕಾರ್ಯಾಚರಣೆ ಕೈಗೊಂಡು ಆತ ಮುಂಬಯಿಯಲ್ಲಿ ಇರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಸ್ತಗಿರಿ ಮಾಡಿದ್ದಾರೆ. ಬಂಧಿತ ಆಸಾಮಿಯನ್ನು ಅ 4 ರಂದು ಶನಿವಾರ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿ ನ್ಯಾಯಾಂಗ ಬಂಧನ ವಿಧಿಸಲಾಗಿದೆ.













0 comments:
Post a Comment