ಬಂಟ್ವಾಳ, ಅಕ್ಟೋಬರ್ 16, 2025 (ಕರಾವಳಿ ಟೈಮ್ಸ್) : 20ಕ್ಕೂ ಹೆಚ್ಚು ಪ್ರಕರಣಗಳಲ್ಲಿ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ವಾರೆಂಟ್ ಅಸಾಮಿ, ಸಜಿಪಮೂಡ ಗ್ರಾಮದ ನಿವಾಸಿ ಫಾರೂಕ್ ಅಲಿಯಾಸ್ ಉಮ್ಮರ್ ಫಾರೂಕ್ (32) ಎಂಬಾತನನ್ನು ಮಧ್ವ ಎಂಬಲ್ಲಿ ಅ 15 ರಂದು ಪೊಲೀಸರು ದಸ್ತಗಿರಿ ಮಾಡಿದ್ದಾರೆ. ಬಂಧಿತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಆತನಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಈತನ ಮೇಲೆ ಉಪ್ಪಿನಂಗಡಿ, ಕಡಬ, ವಿಟ್ಲ, ಬಂಟ್ವಾಳ ನಗರ, ಬಂಟ್ವಾಳ ಗ್ರಾಮಾಂತರ, ಕೋಣಾಜೆ, ಬರ್ಕೆ, ಬಜಪೆ ಪೊಲೀಸ್ ಠಾಣೆಗಳಲ್ಲಿ ವಿವಿಧ ಪ್ರಕರಣಗಳು ದಾಖಲಾಗಿವೆ ಎಂದ ಪೊಲೀಸರು ತಿಳಿಸಿದ್ದಾರೆ.














0 comments:
Post a Comment