ಬಂಟ್ವಾಳ, ಅಕ್ಟೋಬರ್ 05, 2025 (ಕರಾವಳಿ ಟೈಮ್ಸ್) : ಅಕ್ರಮ ಕೆಂಪು ಕಲ್ಲು ಗಣಿಗಾರಿಕೆ ಮಾಡುತ್ತಿರುವ ಬಗ್ಗೆ ಮಾಹಿತಿ ಮೇರೆಗೆ ದಾಳಿ ನಡೆಸಿದ ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು ಕೆಂಪು ಕಲ್ಲು ಸಹಿತ ಇತರ ಸೊತ್ತುಗಳನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿಕೊಂಡ ಘಟನೆ ಕಾವಳಪಡೂರು ಗ್ರಾಮದ ಆಲಂಪುರಿ ಎಂಬಲ್ಲಿ ಶನಿವಾರ ಸಂಜೆ ನಡೆದಿದೆ.
ಕಾವಳಪಡೂರು ಗ್ರಾಮದ ಆಲಂಪುರಿ ಸರ್ವೆ ನಂಬ್ರ 118/5 ರಲ್ಲಿ ಪ್ರಿತೇಶ್ ಭಟ್ ಎಂಬವರು ಯಾವುದೇ ಪರವಾಣಿಗೆ ಇಲ್ಲದೇ ಅಕ್ರಮವಾಗಿ ಕೆಂಪು ಕಲ್ಲು ಗಣಿಗಾರಿಕೆ ಮಾಡುತ್ತಿರುವುದಾಗಿ ಮಾಹಿತಿ ಬಂದ ಮೇರೆಗೆ, ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ಪಿಎಸ್ಸೈ ಮಂಜುನಾಥ ಟಿ ನೇತೃತ್ವದ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ ಅಕ್ರಮ ಕೆಂಪು ಕಲ್ಲುಗಾಣಿಕೆ ನಡೆಸುತ್ತಿರುವುದು ಬೆಳಕಿಗೆ ಬಂದಿದೆ.
ಸ್ಥಳದಲ್ಲಿ ಕೆಂಪು ಕಲ್ಲನ್ನು ಅಕ್ರಮವಾಗಿ ಗಣಿಗಾರಿಕೆ ಮಾಡಿದ್ದು ಕಂಡು ಬಂದಿದ್ದು, ಸುಮಾರು 100 ಕೆಂಪು ಕಲ್ಲುಗಳಿದ್ದು, ಕೆಂಪು ಕೊರೆಯಲು ಬಳಸಿದ ಪವರ್ ಟಿಲ್ಲರ್ ಮೆುಷಿನ್, ಸಲಿಕೆ, ಪಿಕ್ಕಾಸು ಹಾಗೂ ಕಬ್ಬಿಣದ ಸುತ್ತಿಗೆ ಪತ್ತೆಯಾಗಿದೆ. ಈ ಬಗ್ಗೆ ಮಾಹಿತಿ ಸಂಗ್ರಹಿಸಿದಾಗ ಆರೋಪಿ ಪ್ರಿತೇಶ್ ಭಟ್ ಎಂಬವರು ಅಕ್ರಮ ಕೆಂಪು ಕಲ್ಲು ಗಣಿಗಾರಿಕೆ ಮಾಡಿರುವುದನ್ನು ಪೊಲೀಸರು ಕಂಡುಕೊಂಡಿದ್ದಾರೆ. ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.













0 comments:
Post a Comment