ಬಾಲ ಕಾರ್ಮಿಕರು ಕಂಡು ಬಂದಲ್ಲಿ 1098 ಸಂಖ್ಯೆಗೆ ಕರೆ ಮಾಡಿ ಮಾಹಿತಿ ನೀಡಿ : ನ್ಯಾಯಾಧೀಶೆ ಜೈಬುನ್ನೀಸಾ ಕರೆ - Karavali Times ಬಾಲ ಕಾರ್ಮಿಕರು ಕಂಡು ಬಂದಲ್ಲಿ 1098 ಸಂಖ್ಯೆಗೆ ಕರೆ ಮಾಡಿ ಮಾಹಿತಿ ನೀಡಿ : ನ್ಯಾಯಾಧೀಶೆ ಜೈಬುನ್ನೀಸಾ ಕರೆ - Karavali Times

728x90

24 November 2025

ಬಾಲ ಕಾರ್ಮಿಕರು ಕಂಡು ಬಂದಲ್ಲಿ 1098 ಸಂಖ್ಯೆಗೆ ಕರೆ ಮಾಡಿ ಮಾಹಿತಿ ನೀಡಿ : ನ್ಯಾಯಾಧೀಶೆ ಜೈಬುನ್ನೀಸಾ ಕರೆ

ಮಂಗಳೂರು, ನವೆಂಬರ್ 24, 2025 (ಕರಾವಳಿ ಟೈಮ್ಸ್) : ದೇಶದಲ್ಲಿ ಮಕ್ಕಳನ್ನು ದೇವರ ರೂಪ ಎಂದು ಪರಿಗಣಿಸಲಾಗುತ್ತದೆ. ಆದರೆ ಅನೇಕರ ಬಾಲ್ಯವು ಶಿಕ್ಷಣ ಆಟ ಸಂಭ್ರಮದಿಂದ ತುಂಬಿರಬೇಕಾದ ಸಮಯದಲ್ಲಿ ಕಷ್ಟಪಟ್ಟು ಕೆಲಸ ಮಾಡುವುದರಲ್ಲಿ ಕಳೆಯುತ್ತಿದೆ. ಈ ದುಸ್ಥಿತಿ ತಡೆಯಲು ಬಾಲಕಾರ್ಮಿಕರ ಕುರಿತು ಅರಿವು ನೆರವು ಮೂಡಿಸುವುದು ಅಗತ್ಯ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ, ನ್ಯಾಯಾಧೀಶೆ ಜೈಬುನ್ನೀಸಾ ಹೇಳಿದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಕಾರ್ಮಿಕ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘ, ಪೆÇಲೀಸ್ ಇಲಾಖೆ, ಮಕ್ಕಳ ಸಹಾಯವಾಣಿ, ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು, ಉರ್ವ ಎಸ್.ಸಿ.ಎಸ್ ಪ್ರಥಮ ದರ್ಜೆ ಕಾಲೇಜು ಇವುಗಳ ಸಹಯೋಗದಲ್ಲಿ ನಡೆದ ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ 1986ರ ಪ್ರಸ್ತುತ ತಿದ್ದುಪಡಿ ಕಾಯ್ದೆ 2016ಕ್ಕೆ ಸಂಬಂಧಿಸಿದ ಪ್ರಾವಧಾನ, ಮಾನವ ಕಳ್ಳ ಸಾಗಾಣಿಕೆ ಹಾಗೂ ಮಾದಕ ವಸ್ತುಗಳ ದುಷ್ಪರಿಣಾಮಗಳ ಬಗ್ಗೆ ಕಾನೂನು ಅರಿವು ಕಾರ್ಯಗಾರ ಉದ್ಘಾಟಿಸಿ   ಮಾತನಾಡಿದ ಅವರು, ಬಾಲಕಾರ್ಮಿಕರು ಕಂಡುಬಂದಲ್ಲಿ ತಕ್ಷಣವೇ 1098 ಗೆ ಕರೆ ಮಾಡಿ ಮಾಹಿತಿ ನೀಡಬೇಕು  ಎಂದರು. 

ಸಹಾಯಕ ಕಾರ್ಮಿಕ ಆಯುಕ್ತೆ ನಾಜಿಯಾ ಸುಲ್ತಾನ ಮಾತನಾಡಿ, ಬಾಲಕಾರ್ಮಿಕ ನಿಯಂತ್ರಣ ಕಾಯ್ದೆಯ ಉದ್ದೇಶ ನಮ್ಮ ದೇಶದ ಪ್ರತಿಯೊಬ್ಬ ಮಕ್ಕಳಿಗೂ ಉಜ್ವಲ ಭವಿಷ್ಯ ಸಮಾನ ಹಕ್ಕುಗಳು ಮತ್ತು ಸಂತೋಷಕರ ಬಾಲ್ಯ ಒದಗಿಸುವ್ಯದಾಗಿದೆ. 6-14 ವರ್ಷದ ಮಕ್ಕಳು ಕಡ್ಡಾಯ ಶಿಕ್ಷಣವನ್ನು ಪಡೆದುಕೊಳ್ಳುವಂತೆ ಸಭೆಗೆ ತಿಳಿಸಿದರು.

ಎಸ್.ಸಿ.ಎಸ್ ಸಮೂಹ ಸಂಸ್ಥೆ ಆಡಳಿತ ಅಧಿಕಾರಿ ಯು.ಕೆ ಖಾಲಿದ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಉರ್ವ ಪೆÇಲೀಸ್ ಠಾಣಾ ಪಿಎಸ್ಸೈ ಗುರುಕಾಂತಿ, ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ ಕಾಯ್ದೆ  ಕುರಿತು ಕಾರ್ಮಿಕ ಅಧಿಕಾರಿ ಬಿ.ಆರ್. ಕುಮಾರ್ ಹಾಗೂ ಮಕ್ಕಳ ಹಕ್ಕುಗಳ ರಕ್ಷಣೆ ಹಾಗೂ ದತ್ತು ನಿಯಮಾವಳಿಗಳ ಕುರಿತು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಕುಮಾರ್ ಶೆಟ್ಟಿಗಾರ್ ಉಪನ್ಯಾಸ ನೀಡಿದರು.

ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ ಯೋಜನಾ ನಿರ್ದೇಶಕ ಶ್ರೀನಿವಾಸ್, ಎಸ್.ಸಿ.ಎಸ್ ಕಾಲೇಜು ಪ್ರಾಂಶುಪಾಲ ಹಾರ್ದಿಕ್ ಪಿ ಚೌಹಾನ್, ಹಿರಿಯ ಕಾರ್ಮಿಕ ನಿರೀಕ್ಷಕ ರಾಜಶೇಖರ ರೆಡ್ಡಿ ಮೊದಲಾದವರು ಭಾಗವಹಿಸಿದ್ದರು. 

  • Blogger Comments
  • Facebook Comments

0 comments:

Post a Comment

Item Reviewed: ಬಾಲ ಕಾರ್ಮಿಕರು ಕಂಡು ಬಂದಲ್ಲಿ 1098 ಸಂಖ್ಯೆಗೆ ಕರೆ ಮಾಡಿ ಮಾಹಿತಿ ನೀಡಿ : ನ್ಯಾಯಾಧೀಶೆ ಜೈಬುನ್ನೀಸಾ ಕರೆ Rating: 5 Reviewed By: karavali Times
Scroll to Top