ಬಂಟ್ವಾಳ ಸಮಾಜ ಸೇವಾ ಸಹಕಾರಿ ಸಂಘದ ಅಧ್ಯಕ್ಷ, ಉಪಾಧ್ಯಕ್ಷ ಸಹಿತ ಎಲ್ಲ ನಿರ್ದೇಶಕರ ಅಮಾನತುಗೊಳಿಸಿ ಜಂಟಿ ನಿಬಂಧಕರ ಆದೇಶ - Karavali Times ಬಂಟ್ವಾಳ ಸಮಾಜ ಸೇವಾ ಸಹಕಾರಿ ಸಂಘದ ಅಧ್ಯಕ್ಷ, ಉಪಾಧ್ಯಕ್ಷ ಸಹಿತ ಎಲ್ಲ ನಿರ್ದೇಶಕರ ಅಮಾನತುಗೊಳಿಸಿ ಜಂಟಿ ನಿಬಂಧಕರ ಆದೇಶ - Karavali Times

728x90

24 November 2025

ಬಂಟ್ವಾಳ ಸಮಾಜ ಸೇವಾ ಸಹಕಾರಿ ಸಂಘದ ಅಧ್ಯಕ್ಷ, ಉಪಾಧ್ಯಕ್ಷ ಸಹಿತ ಎಲ್ಲ ನಿರ್ದೇಶಕರ ಅಮಾನತುಗೊಳಿಸಿ ಜಂಟಿ ನಿಬಂಧಕರ ಆದೇಶ

ಬಂಟ್ವಾಳ, ನವೆಂಬರ್ 24, 2025 (ಕರಾವಳಿ ಟೈಮ್ಸ್) : ಬಂಟ್ವಾಳ ಬೈಪಾಸಿನಲ್ಲಿ ಪ್ರಧಾನ ಕಚೇರಿ ಹೊಂದಿರುವ ಸಮಾಜ ಸೇವಾ ಸಹಕಾರ ಸಂಘ ನಿ ಇದರ ಅಧ್ಯಕ್ಷರ ಸಹಿತ ಎಲ್ಲಾ ನಿರ್ದೇಶಕರುಗಳನ್ನು ಅಮಾನತುಗೊಳಿಸಿ ಮೈಸೂರು ಪ್ರಾಂತ ಸಹಕಾರ ಸಂಘಗಳ ಜಂಟಿ ನಿಬಂಧಕರು ಆದೇಶ ಹೊರಡಿಸಿದ್ದಾರೆ. 

ಸಂಘದ ಸದಸ್ಯ ಡಿ ಲೋಕನಾಥ ಅವರು ಕರ್ನಾಟಕ ಸಹಕಾರ ಸಂಘಗಳ ಅಧಿನಿಯಮ 1959, ಪ್ರಕರಣ 29ಸಿ ಅಡಿ ಕ್ರಮ ಕೈಗೊಳ್ಳುವ ಬಗ್ಗೆ 2024 ರ ನವೆಂಬರ್ 22 ರಂದು ನೀಡಿದ ದೂರಿನಂತೆ ವಿಚಾರಣೆ ನಡೆಸಿದ ಜಂಟಿ ನಿಬಂಧಕರು ಈ ಆದೇಶ ಹೊರಡಿಸಿದ್ದಾರೆ.

2024 ರ ಸೆಪ್ಟೆಂಬರ್ 1 ರಂದು ನಡೆಸಿದ ಸರ್ವ ಸದಸ್ಯರ ಸಭೆಯಲ್ಲಿ ಬೈಲಾ ಸಮಗ್ರ ತಿದ್ದುಪಡಿಯನ್ನು ಮಂಡಿಸಿ ಅನುಮೋದನೆಯನ್ನು ಪಡೆಯಲಾಗಿದ್ದು, ಈ ಕ್ರಮದಲ್ಲಿ ನಿಯಮಗಳ ಉಲ್ಲಂಘನೆಯಾಗಿರುವುದಾಗಿ ಅರ್ಜಿದಾರರು ಆಕ್ಷೇಪಿಸಿ ಆಡಳಿತ ಮಂಡಳಿಯ ವಿರುದ್ಧ ಕ್ರಮ ಕೈಗೊಳ್ಳುವಂತೆ ದೂರು ನೀಡಿದ್ದರು. ಸಂಘದ ಬೈಲಾಗೆ ತರಲಾಗುತ್ತಿರುವ ತಿದ್ದುಪಡಿಯ ಬಗ್ಗೆ ಸದಸ್ಯರಿಗೆ ಮಾಹಿತಿಯನ್ನು ನೀಡದೇ ಸಭೆಯಲ್ಲಿ ತಿದ್ದುಪಡಿಯ ಬಗ್ಗೆ ಚರ್ಚಿಸಲು ಅವಕಾಶವನ್ನು ನೀಡದಿರುವುದು, ಸಂಘದ ಆಡಳಿತ ಮಂಡಳಿಯವರು ಸರ್ವ ಸದಸ್ಯರ ಸಭೆಯನ್ನು ನಡೆಸುವ ಪೂರ್ವದಲ್ಲಿ ಮತದಾನದ ಹಕ್ಕುಳ್ಳ ಸದಸ್ಯರ ಪಟ್ಟಿಯನ್ನು ಸಿದ್ಧಪಡಿಸಿ ಸಹಕಾರ ನಿಯಮ ಪಾಲಿಸುವಲ್ಲಿ ವಿಫಲರಾಗಿರುವುದು ಸಾಬೀತಾದ ಹಿನ್ನೆಲೆಯಲ್ಲಿ ಕರ್ನಾಟಕ ಸಹಕಾರ ಸಂಘಗಳ ಅಧಿನಿಯಮ 1959, ಪ್ರಕರಣ 29ಸಿ(8)(ಬಿ)ರಡಿ ಹಾಗೂ ಸರ್ಕಾರದ ಅಧಿಸೂಚನೆ ಅನ್ವಯ ಸಂಖ್ಯೆ ಸಿಒ/71/ಸಿಎಲ್‍ಎಂ/2016 ದಿನಾಂಕ 06-12-2016ರ ರೀತ್ಯಾ ಪ್ರತ್ಯಾಯೋಜನೆಗೊಂಡ ಅಧಿಕಾರದ ಮೇರೆಗೆ ಸಿ ಪ್ರಸಾದ್ ರೆಡ್ಡಿ, ಸಹಕಾರ ಸಂಘಗಳ ಜಂಟಿ ನಿಬಂಧಕರು, ಮೈಸೂರು ಪ್ರಾಂತ, ಮೈಸೂರು ಅವರು ಸಮಾಜ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಸುರೇಶ್ ಕುಲಾಲ್, ಉಪಾಧ್ಯಕ್ಷ ಪದ್ಮನಾಭ ವಿಟ್ಲ ಸಹಿತ ನಿರ್ದೇಶಕರುಗಳಾದ ವಿಶ್ವನಾಥ ಕೆ ಬಿ, ಜನಾರ್ಧನ ಬೊಂಡಾಲ,  ವಿಜಯಕುಮಾರ್ ವಿ, ಅರುಣ್ ಕುಮಾರ್ ಕೆ, ರಮೇಶ್ ಸಾಲ್ಯಾನ್ ಬಿ, ಸತೀಶ, ಎನ್ ಸುರೇಶ್, ರಮೇಶ್ ಸಾಲ್ಯಾನ್, ನಾಗೇಶ್ ಬಿ, ಜಯಂತಿ, ಶ್ರೀಮತಿ ವಿದ್ಯಾ, ಶ್ರೀಮತಿ ವಿಜಯಲಕ್ಷ್ಮೀ, ಜಗನ್ನಿವಾಸ ಗೌಡ, ಎಂ ಕೆ ಗಣೇಶ್ ಸಮಗಾರ ಅವರುಗಳನ್ನು ಅಧಿಕಾರದಿಂದ ಅಮಾನತುಗೊಳಿಸಿ ಆದೇಶಿಸಿದ್ದಾರೆ.

  • Blogger Comments
  • Facebook Comments

0 comments:

Post a Comment

Item Reviewed: ಬಂಟ್ವಾಳ ಸಮಾಜ ಸೇವಾ ಸಹಕಾರಿ ಸಂಘದ ಅಧ್ಯಕ್ಷ, ಉಪಾಧ್ಯಕ್ಷ ಸಹಿತ ಎಲ್ಲ ನಿರ್ದೇಶಕರ ಅಮಾನತುಗೊಳಿಸಿ ಜಂಟಿ ನಿಬಂಧಕರ ಆದೇಶ Rating: 5 Reviewed By: karavali Times
Scroll to Top