ಮಂಗಳೂರು, ನವೆಂಬರ್ 21, 2025 (ಕರಾವಳಿ ಟೈಮ್ಸ್) : ಬಜಪೆ ಪಟ್ಟಣ ಪಂಚಾಯತ್ ವ್ಯಾಪಿಯಲ್ಲಿನ ಖಾಸಗಿ ಹಾಗೂ ಸರ್ಕಾರಿ ಶಿಕ್ಷಣ ಸಂಸ್ಥೆಗಳು ಖಾಸಗಿ ಹಾಗೂ ಸರ್ಕಾರಿ ಆಸ್ಪತ್ರೆಗಳ, ಕ್ರೀಡಾ ಸಂಕೀರ್ಣಗಳು, ಬಸ್ ನಿಲ್ದಾಣಗಳು, ರೈಲ್ವೆ ನಿಲ್ದಾಣಗಳ ಮುಖ್ಯಸ್ಥರು ತಮ್ಮ ಸಂಸ್ಥೆಯ ಆವರಣದಲ್ಲಿ ಯಾವುದೇ ಬೀದಿ ನಾಯಿಗಳು ವಾಸವಿದ್ದಲ್ಲಿ ಅದನ್ನು ಪರಿಶೀಲಿಸಿ ಕೂಡಲೇ ಅದರ ಸಂಖ್ಯೆಯನ್ನು ಲೆಕ್ಕ ಮಾಡಿ ಮುಖ್ಯಾಧಿಕಾರಿ/ ಪೌರಾಯುಕ್ತರಿಗೆ ತಿಳಿಸಬೇಕು.
ತಮ್ಮ ಸಂಸ್ಥೆಯ ಆವರಣದಲ್ಲಿ ಬೀದಿ ನಾಯಿಗಳ ಉಪಟಳ ತಡೆಯಲು ಹಾಗೂ ಅವುಗಳ ಪ್ರದೇಶ ನಿಯಂತ್ರಿಸಲು ಕ್ರಮ ವಹಿಸಬೇಕು. ನಗರ ಸ್ಥಳೀಯ ಸಂಸ್ಥೆಯಿಂದ ಬೀದಿ ನಾಯಿಗಳನ್ನು ಸ್ಥಳಾಂತರಿಸಲು ಸಹಕರಿಸಲು ಹಾಗೂ ಅವುಗಳ ಪ್ರವೇಶ ನಿರ್ಬಂಧಿಸುವುದನ್ನು ಮೇಲ್ವಿಚಾರಣೆ ಮಾಡಲು ತಮ್ಮ ಸಂಸ್ಥೆ ವತಿಯಿಂದ ಬಬ್ಬ ಜವಾಬ್ದಾರಿಯುತ ನೌಕರರನ್ನು ನೋಡಲ್ ಅಧಿಕಾರಿಯಾಗಿ ನೇಮಕ ಮಾಡಬೇಕು. ಸರ್ವೋಚ್ಛ ನ್ಯಾಯಾಲಯದ ನಿರ್ದೇಶನದಂತೆ ಯಾವುದೇ ಸಂಸ್ಥೆಯ ವ್ಯಾಪ್ತಿಯಲ್ಲಿ ಪುನ: ನಾಯಿಗಳು ವಾಸ ಮಾಡಲು ಅವಕಾಶ ಕೊಟ್ಟಲ್ಲಿ ಅವನ್ನು ಸ್ಥಳಾಂತರಿಸುವ ವೆಚ್ಚವನ್ನು ಆ ಸಂಸ್ಥೆಯಿಂದಲೇ ವಸೂಲಿ ಮಾಡಲಾಗುತ್ತದೆ. ಸರ್ವೋಚ್ಚ ನ್ಯಾಯಾಲಯದ ಆದೇಶ ಉಲ್ಲಂಘನೆ ಮಾಡಿದ್ದಲ್ಲಿ ನ್ಯಾಯಾಲಯದ ಆದೇಶದಂತೆ ತಮ್ಮ ವಿರುದ್ಧ ಕಾನೂನು ಕ್ರಮ ವಹಿಸಲಾಗುತ್ತದೆ ಎಂದು ಬಜಪೆ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.














0 comments:
Post a Comment