ಸುಳ್ಯ : ಎಲೆಕ್ಟ್ರಾನಿಕ್ ಅಂಗಡಿಯಲ್ಲಿ ಬೆನಿಫಿಟ್ ಸ್ಕೀಂ ಆರಂಭಿಸಿ ಗ್ರಾಹಕರಿಗೆ ಕೋಟ್ಯಂತರ ರೂಪಾಯಿ ವಂಚಿಸಿದ ಪ್ರಕರಣದಲ್ಲಿ ಮೂರು ಮಂದಿ ಆರೋಪಿಗಳಿಗೆ ಶಿಕ್ಷೆ ವಿಧಿಸಿ ಕೋರ್ಟ್ ಆದೇಶ - Karavali Times ಸುಳ್ಯ : ಎಲೆಕ್ಟ್ರಾನಿಕ್ ಅಂಗಡಿಯಲ್ಲಿ ಬೆನಿಫಿಟ್ ಸ್ಕೀಂ ಆರಂಭಿಸಿ ಗ್ರಾಹಕರಿಗೆ ಕೋಟ್ಯಂತರ ರೂಪಾಯಿ ವಂಚಿಸಿದ ಪ್ರಕರಣದಲ್ಲಿ ಮೂರು ಮಂದಿ ಆರೋಪಿಗಳಿಗೆ ಶಿಕ್ಷೆ ವಿಧಿಸಿ ಕೋರ್ಟ್ ಆದೇಶ - Karavali Times

728x90

3 November 2025

ಸುಳ್ಯ : ಎಲೆಕ್ಟ್ರಾನಿಕ್ ಅಂಗಡಿಯಲ್ಲಿ ಬೆನಿಫಿಟ್ ಸ್ಕೀಂ ಆರಂಭಿಸಿ ಗ್ರಾಹಕರಿಗೆ ಕೋಟ್ಯಂತರ ರೂಪಾಯಿ ವಂಚಿಸಿದ ಪ್ರಕರಣದಲ್ಲಿ ಮೂರು ಮಂದಿ ಆರೋಪಿಗಳಿಗೆ ಶಿಕ್ಷೆ ವಿಧಿಸಿ ಕೋರ್ಟ್ ಆದೇಶ

ಮಂಗಳೂರು, ನವೆಂಬರ್ 03, 2025 (ಕರಾವಳಿ ಟೈಮ್ಸ್) : ಸುಳ್ಯದಲ್ಲಿ ಎಲೆಕ್ಟ್ರಾನಿಕ್ ಅಂಗಡಿಯಲ್ಲಿ ಬೆನಿಫಿಟ್ ಸ್ಕೀಂ  ಮೂಲಕ ಜನರಿಗೆ ಕೋಟ್ಯಂತರ ರೂಪಾಯಿ ವಂಚಿಸಿದ ಪ್ರಕರಣದಲ್ಲಿ ಭಾಗಿಯಾದ ಮೂವರು ಆರೋಪಿಗಳಿಗೆ ಶಿಕ್ಷೆ ವಿಧಿಸಿ ನ್ಯಾಯಾಲಯ ಆದೇಶ ನೀಡಿದೆ. 

ಸುಳ್ಯ ಕಸಬಾ ಗ್ರಾಮದ ವಿವೇಕಾನಂದ ಸರ್ಕಲ್ ಬಳಿ ಅಂಬಡೆಡ್ಕ ಎಂಬಲ್ಲಿರುವ ಸಮೃದ್ಧಿ ಕಾಂಪ್ಲೆಕಿನಲ್ಲಿ 2013 ರಲ್ಲಿ ಶ್ರೀ ತತ್ವಮಸಿ ಚಾರಿಟೇಬಲ್ ಟ್ರಸ್ಟ್ (ರಿ) ಮತ್ತು ಶ್ರೀ ತತ್ವಮಸಿ ಎಂಟರ್ ಪ್ರೈಸಸ್ (ರಿ) ಎಂಬ ಹೆಸರಿನಲ್ಲಿ ಸಂಸ್ಥೆ ಪ್ರಾರಂಭಿಸಿ, ಸದ್ರಿ ಸಂಸ್ಥೆಯ ಪರವಾಗಿ ಸುಳ್ಯ ಪೇಟೆಯ ಗಾಂಧಿನಗರ ಎಂಬಲ್ಲಿ ಇಲೆಕ್ಟ್ರಾನಿಕ್ಸ್  ಅಂಗಡಿ ತೆರೆದು, ಬೆನಿಫಿಟ್ ಸ್ಕೀಂ ಒಂದನ್ನು ಪ್ರಾರಂಭಿಸಿ ಏಜೆಂಟರುಗಳ ಮೂಲಕ ಸಾವಿರಾರು ಸಾರ್ವಜನಿಕರನ್ನು  ಸದಸ್ಯರನ್ನಾಗಿ ಸೇರಿಸಿಕೊಂಡು ಅವರಿಂದ ಕೊಟ್ಯಾಂತರ ಹಣವನ್ನು ಆರೋಪಿಗಳು ಸಂಗ್ರಹಿಸಿದ್ದರು. ಸದ್ರಿ ಹಣದಲ್ಲಿ  3,08,62,500/- (ಮೂರು ಕೋಟಿ ಎಂಟು ಲಕ್ಷದ ಅರವತ್ತೇರಡು ಸಾವಿರದ ಐನೂರು) ಸದ್ರಿ ಸ್ಕೀಂ ಸದಸ್ಯರುಗಳಿಗೆ ಹಣವನ್ನಾಗಲೀ ಯಾವುದೇ ವಸ್ತುವನ್ನಾಗಾಲಿ ನೀಡದೇ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಯ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 248/2014ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿ, ಒಟ್ಟು 8 ಮಂದಿ ಆರೋಪಿಗಳಾದ ಪ್ರಕರಣದ ಶಿವಪ್ರಕಾಶ್,  ಕೆ.ಪಿ. ಗಣೇಶ್, ಕೆ.ಪಿ. ಕೃಷ್ಣಪ್ಪ ಗೌಡ, ಗೀತಾ ಕೆ.ಎಸ್, ಭಾರತಿ, ಗೀತಾ ಗಣೇಶ್, ಎನ್.ಇ. ವೈ. ಕಮಲಾಕ್ಷ ಹಾಗೂ ಕೆ. ನಾಗೇಶ ಎಂಬವರ ವಿರುದ್ಧ ಸುಳ್ಯ ಪೊಲೀಸ್ ಠಾಣಾಧಿಕಾರಿಗಳು ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. 

ಸದ್ರಿ ಪ್ರಕರಣದ ವಿಚಾರಣೆಯು ಹಿರಿಯ ಸಿವಿಲ್ ಜಡ್ಜ್ ಮತ್ತು ಜೆ.ಎಂ.ಎಫ್.ಸಿ. ನ್ಯಾಯಾಲಯದಲ್ಲಿ ನ್ಯಾಯಾಧೀಶರಾದ ಬಿ. ಮೋಹನ್ ಬಾಬು ಅವರ ಸಮಕ್ಷಮ ನಡೆದು, ಅಕ್ಟೋಬರ್ 30 ರಂದು ಈ ಆರೋಪಿಗಳ ಪೈಕಿ 2, 4 ಮತ್ತು 5ನೇ ಆರೋಪಿಗಳ ಅಪರಾಧ ಸಾಬೀತಾದ ಹಿನ್ನೆಲೆಯಲ್ಲಿ ಅವರುಗಳಿಗೆ ನವೆಂಬರ್ 3 ರಂದು ಕಲಂ 406 ಸಹವಾಚಕ 149ರಡಿಯಲ್ಲಿ 3 ವರ್ಷಗಳ ಸಾದಾ ಕಾರಾಗೃಹ ವಾಸ ವಿಧಿಸಲಾಗಿದೆ. 

ಕಲಂ 409 ಮತ್ತು 420ರಡಿಯಲ್ಲಿ ಸಹವಾಚಕ 149ರೊಂದಿಗೆ ಎರಡೂ ಕಲಂಗಳಿಗೆ ಆರೋಪಿಗಳಿಗೆ  ಪ್ರತ್ಯೇಕವಾಗಿ 3 ವರ್ಷಗಳ ಕಾಲ ಸಾದಾ ಕಾರಾಗೃಹ ವಾಸ ಮತ್ತು 10 ಸಾವಿರ ರೂಪಾಯಿ ದಂಡ, ದಂಡ ಕಟ್ಟಲು ತಪ್ಪಿದ್ದಲ್ಲಿ 6 ತಿಂಗಳ ಹೆಚ್ಚುವರಿ ಸಾದಾ ಕಾರಾಗೃಹ ವಾಸ ವಿಧಿಸಲಾಗಿದೆ.

ಪ್ರಕರಣ ಉಳಿದ 3, 6, 7 ಮತ್ತು 8ನೇ ಆರೋಪಿಗಳ ಅಪರಾಧ ಸಾಬೀತಾಗದೆ ಅವರುಗಳನ್ನು ಬಿಡುಗಡೆ ಮಾಡಿ ನ್ಯಾಯಾಲಯ ತೀರ್ಪು ನೀಡಿದೆ. 1ನೇ ಆರೋಪಿಯು ಮರಣ ಹೊಂದಿರುವುದರಿಂದ ಅವರ ಮೇಲಿನ ಪ್ರಕರಣ ಸ್ಥಗಿತಗೊಳಿಸಲಾಗಿದೆ. ಸರ್ಕಾರದ ಪರವಾಗಿ ಸಹಾಯಕ ಸರ್ಕಾರಿ ಅಭಿಯೋಜಕ ರಮೇಶ್ ಅವರು ವಾದ ಮಂಡಿಸಿದ್ದಾರೆ ಎಂದು ಜಿಲ್ಲಾ ಎಸ್ಪಿ ಡಾ ಅರುಣ್ ಕೆ ಅವರು ಮಾಹಿತಿ ನೀಡಿದ್ದಾರೆ. 

  • Blogger Comments
  • Facebook Comments

0 comments:

Post a Comment

Item Reviewed: ಸುಳ್ಯ : ಎಲೆಕ್ಟ್ರಾನಿಕ್ ಅಂಗಡಿಯಲ್ಲಿ ಬೆನಿಫಿಟ್ ಸ್ಕೀಂ ಆರಂಭಿಸಿ ಗ್ರಾಹಕರಿಗೆ ಕೋಟ್ಯಂತರ ರೂಪಾಯಿ ವಂಚಿಸಿದ ಪ್ರಕರಣದಲ್ಲಿ ಮೂರು ಮಂದಿ ಆರೋಪಿಗಳಿಗೆ ಶಿಕ್ಷೆ ವಿಧಿಸಿ ಕೋರ್ಟ್ ಆದೇಶ Rating: 5 Reviewed By: karavali Times
Scroll to Top