ಸರಕಾರಿ ಸಭೆ-ಸಮಾರಂಭಗಳಲ್ಲಿ ಪ್ಲಾಸ್ಟಿಕ್ ಬಾಟ್ಲಿ ನಿಷೇಧಿಸಿ, ನಂದಿನಿ ಉತ್ಪನ್ನಗಳನ್ನು ಬಳಸುವಂತೆ ಸಿಎಂ ಕಟ್ಟುನಿಟ್ಟಿನ ಆದೇಶ - Karavali Times ಸರಕಾರಿ ಸಭೆ-ಸಮಾರಂಭಗಳಲ್ಲಿ ಪ್ಲಾಸ್ಟಿಕ್ ಬಾಟ್ಲಿ ನಿಷೇಧಿಸಿ, ನಂದಿನಿ ಉತ್ಪನ್ನಗಳನ್ನು ಬಳಸುವಂತೆ ಸಿಎಂ ಕಟ್ಟುನಿಟ್ಟಿನ ಆದೇಶ - Karavali Times

728x90

1 November 2025

ಸರಕಾರಿ ಸಭೆ-ಸಮಾರಂಭಗಳಲ್ಲಿ ಪ್ಲಾಸ್ಟಿಕ್ ಬಾಟ್ಲಿ ನಿಷೇಧಿಸಿ, ನಂದಿನಿ ಉತ್ಪನ್ನಗಳನ್ನು ಬಳಸುವಂತೆ ಸಿಎಂ ಕಟ್ಟುನಿಟ್ಟಿನ ಆದೇಶ

ಬೆಂಗಳೂರು, ನವೆಂಬರ್ 01, 2025 (ಕರಾವಳಿ ಟೈಮ್ಸ್) : ರಾಜ್ಯದಾದ್ಯಂತ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಹಾಗೂ ಸರ್ಕಾರಿ ಸಭೆ ಸಮಾರಂಭಗಳಲ್ಲಿ ಕುಡಿಯುವ ನೀರಿನ ಪ್ಲಾಸ್ಟಿಕ್ ಬಾಟಲಿ ಬಳಕೆಯನ್ನು ನಿಷೇಧಿಸುವ ಆದೇಶವನ್ನು ಕಟ್ಟು ನಿಟ್ಟಾಗಿ ಜಾರಿಗೊಳಿಸುವಂತೆ ಸಿಎಂ ಸಿದ್ದರಾಮಯ್ಯ ಸೂಚಿಸಿದ್ದಾರೆ. 

ಈ ಬಗ್ಗೆ ಆದೇಶ ಹೊರಡಿಸಿರುವ ಮುಖ್ಯಮಂತ್ರಿಗಳು, ರಾಜ್ಯದಾದ್ಯಂತ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಹಾಗೂ ಸರ್ಕಾರಿ ಸಭೆ ಸಮಾರಂಭಗಳಲ್ಲಿ ಕುಡಿಯುವ ನೀರಿನ ಪ್ಲಾಸ್ಟಿಕ್ ಬಾಟ್ಲಿಗಳ ಬದಲಾಗಿ ಪರಿಸರ ಸ್ನೇಹಿ ವಸ್ತುಗಳಿಂದ ತಯಾರಿಸಿದ ಪರಿಕರಗಳನ್ನು ಬಳಕೆ ಮಾಡುವಂತೆ ಹಿಂದೆಯೇ ಸೂಚನೆಗಳನ್ನು ನೀಡಲಾಗಿತ್ತು. ಈ ಕ್ರಮವನ್ನು ಕಟ್ಟುನಿಟ್ಟಾಗಿ ಪಾಲಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ. 

ಅಲ್ಲದೆ ಮುಖ್ಯಮಂತ್ರಿ ಮತ್ತು ಇಲಾಖಾ ಸಚಿವರುಗಳ ಸಭೆಗಳಲ್ಲಿ, ಸಚಿವಾಲಯವೂ ಸೇರಿದಂತೆ ರಾಜ್ಯದಾದ್ಯಂತ ನಡೆಯುವ ಎಲ್ಲಾ ಸರ್ಕಾರಿ ಸಭೆ-ಕಾರ್ಯಕ್ರಮಗಳಲ್ಲಿ ಸರ್ಕಾರಿ ಸ್ವಾಮ್ಯದ ಕೆಎಂಎಫ್ ಇದರ ‘ನಂದಿನಿ’ ತಿನಿಸುಗಳನ್ನು ಕಡ್ಡಾಯವಾಗಿ ಬಳಸುವಂತೆಯೂ ಸರ್ಕಾರದ ಮುಖ್ಯಕಾರ್ಯದರ್ಶಿಗಳಿಗೆ ಸಿಎಂ ಸೂಚಿಸಿದ್ದಾರೆ. 

  • Blogger Comments
  • Facebook Comments

0 comments:

Post a Comment

Item Reviewed: ಸರಕಾರಿ ಸಭೆ-ಸಮಾರಂಭಗಳಲ್ಲಿ ಪ್ಲಾಸ್ಟಿಕ್ ಬಾಟ್ಲಿ ನಿಷೇಧಿಸಿ, ನಂದಿನಿ ಉತ್ಪನ್ನಗಳನ್ನು ಬಳಸುವಂತೆ ಸಿಎಂ ಕಟ್ಟುನಿಟ್ಟಿನ ಆದೇಶ Rating: 5 Reviewed By: karavali Times
Scroll to Top