ಬಂಟ್ವಾಳ, ನವೆಂಬರ್ 14, 2025 (ಕರಾವಳಿ ಟೈಮ್ಸ್) : ರಸ್ತೆ ವಿಭಜಕಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ನಾಲ್ಕು ಮಂದಿ ಗಾಯಗೊಂಡ ಘಟನೆ ಮಾಣಿ ಎಂಬಲ್ಲಿ ನ 11 ರಂದು ಸಂಭವಿಸಿದೆ.
ಗಾಯಗೊಂಡವರನ್ನು ಹಾಸನ ಮೂಲದ ನಿವಾಸಿಗಳಾದ ಕಾರು ಚಾಲಕ ಧ್ರುವ ಕುಮಾರ್ ಅವರ ತಂದೆ ಎಂ ಎಸ್ ಸದಾಶಿವ (73), ತಾಯಿ ಭಾಗೀರಥಿ, ಪತ್ನಿ ಕಾವ್ಯ ಎಂದು ಹೆಸರಿಸಲಾಗಿದೆ. ಇವರು ಕುಟುಂಬ ಸಮೇತ ಹಾಸನದಿಂದ ಹೊರಟು ಬರುತ್ತಿದ್ದ ವೇಳೆ ಮಾಣಿ ಎಂಬಲ್ಲಿ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. ಘಟನೆಯಿಂದ ನಾಲ್ವರು ಗಾಯಗೊಂಡಿದ್ದು, ಅವರನ್ನು ಸ್ಥಳೀಯರು ತುಂಬೆ ಫಾದರ್ ಮುಲ್ಲರ್ ಆಸ್ಪತ್ರೆಗೆ ಸಾಗಿಸಿ ಪ್ರಥಮ ಚಿಕಿತ್ಸೆ ನೀಡಿದ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ತೇಜಸ್ವಿನಿ ಆಸ್ಪತ್ರೆಗೆ ಸಾಗಿಸಲಾಗಿದೆ. ಅಪಘಾತದಿಂದ ಕಾರು ಸಂಪೂರ್ಣ ಜಖಂಗೊಂಡಿದೆ. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.













0 comments:
Post a Comment