ಬಂಟ್ವಾಳ, ನವೆಂಬರ್ 26, 2025 (ಕರಾವಳಿ ಟೈಮ್ಸ್) : ಲಾರಿಯೊಂದನ್ನು ಓವರ್ ಟೇಕ್ ಮಾಡುವ ಭರದಲ್ಲಿದ್ದ ಕಾರೊಂದು ಬೈಕಿಗೆ ಡಿಕ್ಕಿ ಹೊಡೆದು ಸವಾರ ಗಾಯಗೊಂಡ ಘಟನೆ ಕೇಪು ಗ್ರಾಮದ ಪೆರುವಾಯಿ ಸಮೀಪದ ಕುದ್ದುಪದವು ಎಂಬಲ್ಲಿ ಸಂಭವಿಸಿದೆ.
ಗಾಯಗೊಂಡ ಬೈಕ್ ಸವಾರನನ್ನು ಕಾಸರಗೋಡು ಜಿಲ್ಲೆಯ ಮಂಜೇಶ್ವರ ತಾಲೂಕಿನ ಸೀತಾಂಗೋಳಿ ನಿವಾಸಿ ಇರ್ಫಾನ್ ಹಬೀಬ್ ಐ (25) ಎಂದು ಹೆಸರಿಸಲಾಗಿದೆ. ಇವರು ತನ್ನ ಬೈಕಿನಲ್ಲಿ ಅಬ್ದುಲ್ ರಹಿಮಾನ್ ಎಂಬವರನ್ನು ಸಹ ಸವಾರನಾಗಿ ಕುಳ್ಳಿರಿಸಿಕೊಂಡು ಕೇಪು ಗ್ರಾಮಕ್ಕೆ ಬರುತ್ತಿರುವಾಗ ಕೇಪು ಗ್ರಾಮದ ಪೆರುವಾಯಿ ರಸ್ತೆಯ ಬಳಿ ಕುದ್ದುಪದವು ಎಂಬಲ್ಲಿ ಎದುರಿನಿಂದ ಬರುತ್ತಿದ್ದ ಲಾರಿಯೊಂದನ್ನು ಓವರ್ ಟೇಕ್ ಮಾಡಿದ ಸುಪಾರಿ ಕಾರಿನ ಚಾಲಕ ನಿಯಂತ್ರಣ ಮೀರಿ ಬೈಕಿಗೆ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ.
ಅಪಘಾತದಿಂದ ಬೈಕ್ ಸವಾರ ಇರ್ಫಾನ್ ಹಬೀಬ್ ಬಲಕಾಲಿಗೆ ತೀವ್ರ ಸ್ವರೂಪದ ಗಾಯವಾಗಿದ್ದು, ಆತನನ್ನು ವಿಟ್ಲದ ಬೆನಕ ಆಸ್ಪತ್ರೆಗೆ ಸಾಗಿಸಲಾಗಿದೆ. ಈ ಬಗ್ಗೆ ವಿಟ್ಲ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.














0 comments:
Post a Comment