ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಬಗ್ಗೆ ಜಾಲ ತಾಣಗಳಲ್ಲಿ ಸುಳ್ಳು ಮಾಹಿತಿ ಹಂಚಿಕೊಂಡವರ ವಿರುದ್ದ ಮೊಕದ್ದಮೆ ದಾಖಲು - Karavali Times ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಬಗ್ಗೆ ಜಾಲ ತಾಣಗಳಲ್ಲಿ ಸುಳ್ಳು ಮಾಹಿತಿ ಹಂಚಿಕೊಂಡವರ ವಿರುದ್ದ ಮೊಕದ್ದಮೆ ದಾಖಲು - Karavali Times

728x90

18 November 2025

ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಬಗ್ಗೆ ಜಾಲ ತಾಣಗಳಲ್ಲಿ ಸುಳ್ಳು ಮಾಹಿತಿ ಹಂಚಿಕೊಂಡವರ ವಿರುದ್ದ ಮೊಕದ್ದಮೆ ದಾಖಲು

ಬೆಂಗಳೂರು, ನವೆಂಬರ್ 18, 2025 (ಕರಾವಳಿ ಟೈಮ್ಸ್) : ಉಚ್ಚ ನ್ಯಾಯಾಲಯದಲ್ಲಿ ದಾಖಲಾಗಿರುವ ಪ್ರಕರಣ ಸಂಖ್ಯೆ 28665/2025, 28668/2025 ಮತ್ತು 28675/2025ಕ್ಕೆ ಸಂಬಂಧಿಸಿದಂತೆ ಉಚ್ಚ ನ್ಯಾಯಾಲಯದ 2025ನೇ ಸೆಪ್ಟೆಂಬರ್ 25 ಆದೇಶದಲ್ಲಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಸಂಗ್ರಹಿಸಿದ ಮಾಹಿತಿ ಮತ್ತು ದತ್ತಾಂಶಗಳು ಸೋರಿಕೆಯಾಗದಂತೆ ಗೌಪ್ಯತೆಯನ್ನು ಕಾಪಾಡಿಕೊಳ್ಳಲು ಸೂಚಿಸಿದೆ. 

ಅದರಂತೆ  ಆಯೋಗದಿಂದ ಉಚ್ಚ ನ್ಯಾಯಾಲಯಕ್ಕೆ ಅಫಿಡೆವಿಟ್ ಸಲ್ಲಿಸಲಾಗಿರುತ್ತದೆ. ಸಮೀಕ್ಷೆಯ ಮಾಹಿತಿ ಹಾಗೂ ದತ್ತಾಂಶಗಳ ಗೌಪ್ಯತೆಯನ್ನು ಕಾಪಾಡಿಕೊಳ್ಳುವ ಜವಾಬ್ದಾರಿ ಮತ್ತು ಬದ್ಧತೆಯನ್ನು ಆಯೋಗ ಹೊಂದಿದ್ದು, ಈ ನಿಟ್ಟಿನಲ್ಲಿ ಅಗತ್ಯ ಕ್ರಮಕೈಗೊಳ್ಳಲಾಗಿದೆ.

2025ರ ಕರ್ನಾಟಕ ರಾಜ್ಯದ ಜಾತಿಗಣತಿ ವರದಿ ಎಂಬ ಶೀರ್ಷಿಕೆಯಡಿ ವಿವಿಧ ಜಾತಿಗಳ ಜನಸಂಖ್ಯೆಯ ತಪ್ಪು ಮಾಹಿತಿಯನ್ನು ವಾಟ್ಸಪ್ ಮೂಲಕ ಹಂಚಿಕೊಂಡಿರುವ ಮೊಬೈಲ್ ಸಂಖ್ಯೆ 8618891657 ಮತ್ತು 9972508500 ರ ವ್ಯಕ್ತಿಗಳ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಈಗಾಗಲೇ ಕ್ರಮಕೈಗೊಳ್ಳಲಾಗಿದೆ.

ಸಮೀಕ್ಷಾ ದತ್ತಾಂಶಗಳ ಬಗ್ಗೆ ಸುಳ್ಳು ಮಾಹಿತಿ ಸೃಜಿಸಿ, ಸಾಮಾಜಿಕ ಜಾಲತಾಣಗಳಾದ ವಾಟ್ಸಪ್, ಫೇಸ್ ಬುಕ್, ಟ್ವಿಟರ್, ಇನ್ಸ್ಟಾಗ್ರಾಂ ಇತ್ಯಾದಿ ಫ್ಲಾಟ್ ಫಾರಂಗಳಲ್ಲಿ ಹಂಚಿಕೊಂಡಲ್ಲಿ ಇದಕ್ಕೆ ಕಾರಣರಾಗಿರುವವರ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು. 

ಆದ್ದರಿಂದ ಈ ರೀತಿ ಯಾವುದೇ ಸುಳ್ಳು/ ತಪ್ಪು ಮಾಹಿತಿಯನ್ನು ಸೃಜಿಸಿ, ಸಾರ್ವಜನಿಕರಲ್ಲಿ ಗೊಂದಲ ಮೂಡಿಸದಂತೆ ಹಾಗೂ ಬಂದಿರುವ ಮಾಹಿತಿಯನ್ನು ಫಾರ್ವರ್ಡ್ ಮಾಡದಂತೆ ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಸದಸ್ಯ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

  • Blogger Comments
  • Facebook Comments

0 comments:

Post a Comment

Item Reviewed: ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಬಗ್ಗೆ ಜಾಲ ತಾಣಗಳಲ್ಲಿ ಸುಳ್ಳು ಮಾಹಿತಿ ಹಂಚಿಕೊಂಡವರ ವಿರುದ್ದ ಮೊಕದ್ದಮೆ ದಾಖಲು Rating: 5 Reviewed By: karavali Times
Scroll to Top