ಧರ್ಮಸ್ಥಳ, ನವೆಂಬರ್ 03, 2025 (ಕರಾವಳಿ ಟೈಮ್ಸ್) : ಕಾರಿನಲ್ಲಿ ಯಾವುದೇ ಪರವಾನಿಗೆ ಇಲ್ಲದೆ ಅಕ್ರಮವಾಗಿ ಜಾನುವಾರು ಸಾಗಾಟ ಪ್ರಕರಣ ಬೇಧಿಸಿದ ಧರ್ಮಸ್ಥಳ ಪೊಲೀಸರು ಜಾನುವಾರು ಸಹಿತ ಇಬ್ಬರು ಆರೋಪಿಗಳನ್ನು ಬಂಧಿಸಿದ ಘಟನೆ ಪಟ್ರಮೆ ಗ್ರಾಮದ ಪಟ್ಟೂರು ಎಂಬಲ್ಲಿ ನ 2 ರಂದು ನಡೆದಿದೆ.
ಆರೋಪಿಗಳನ್ನು ಮಹಮ್ಮದ್ ಸಿನಾನ್ (25) ಹಾಗೂ ಇಬ್ರಾಹಿಂ ಖಲೀಲ್ ಅಲಿಯಾಸ್ ತೌಸೀಫ್ (38) ಎಂದು ಹೆಸರಿಸಲಾಗಿದೆ. ಖಚಿತ ಮಾಹಿತಿ ಮೇರೆಗೆ ಧರ್ಮಸ್ಥಳ ಪೊಲೀಸ್ ಠಾಣಾ ಪಿಎಸ್ಸೈ ಸಮರ್ಥ ಆರ್ ಗಾಣಿಗೇರ ನೇತೃತ್ವದ ಪೊಲೀಸರು ನ 2 ರಂದು ಪಟ್ರಮೆ ಗ್ರಾಮದ ಪಟ್ಟೂರು ಎಂಬಲ್ಲಿ ಸಂಶಯಾಸ್ಪದವಾಗಿ ಬರುತ್ತಿದ್ದ ಕೆಎ19 ಎಂಸಿ5862 ನೋಂದಣಿ ಸಂಖ್ಯೆಯ ರಿಟ್ಝ್ ಕಾರನ್ನು ನಿಲ್ಲಿಸಲು ಸೂಚಿಸಿ ವಾಹನ ಪರಿಶೀಲಿಸಿದಾಗ ಕಾರಿನ ಹಿಂಬದಿ ಸೀಟನ್ನು ತೆಗೆದ ಸ್ಥಳದಲ್ಲಿ ಎರಡು ಕಪ್ಪು ಬಣ್ಣದ ಕರುಗಳು ಮತ್ತು ಒಂದು ಕಪ್ಪು ಮತ್ತು ಬಿಳಿ ಮಿಶ್ರಿತ ಕರು ಇರುವುದು ಕಂಡುಬಂದಿದೆ.
ಸದ್ರಿ ಜಾನುವಾರುಗಳನ್ನು ಪಟ್ರಮೆ ಗ್ರಾಮದ ಜೋಹಾರ ಪಟ್ಟೂರು ಎಂಬಲ್ಲಿಂದ ಖರೀದಿಸಿ ಮಾಂಸ ಮಾಡಲು ತೆಗೆದುಕೊಂಡು ಹೋಗುತ್ತಿರುವುದಾಗಿ ಆರೋಪಿಗಳು ತಿಳಿಸಿದ್ದಾರೆ. ಕಾರಿನಲ್ಲಿ ಸುಮಾರು 20 ಸಾವಿರ ರೂಪಾಯಿ ಮೌಲ್ಯದ 3 ಜಾನುವಾರುಗಳು ಹಾಗೂ ಸುಮಾರು 2 ಲಕ್ಷ ರೂಪಾಯಿ ಮೌಲ್ಯದ ರಿಟ್ಜ್ ಕಾರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ಧರ್ಮಸ್ಥಳ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.













0 comments:
Post a Comment