ಮಂಗಳೂರು ವಿವಿಧೆಡೆ ವಿವಿಧ ಇಲಾಖಾಧಿಕಾರಿಗಳ ಜಂಟಿ ಕಾರ್ಯಾಚರಣೆ : 3 ಕಿಶೋರ ಕಾರ್ಮಿಕರ ರಕ್ಷಣೆ - Karavali Times ಮಂಗಳೂರು ವಿವಿಧೆಡೆ ವಿವಿಧ ಇಲಾಖಾಧಿಕಾರಿಗಳ ಜಂಟಿ ಕಾರ್ಯಾಚರಣೆ : 3 ಕಿಶೋರ ಕಾರ್ಮಿಕರ ರಕ್ಷಣೆ - Karavali Times

728x90

4 November 2025

ಮಂಗಳೂರು ವಿವಿಧೆಡೆ ವಿವಿಧ ಇಲಾಖಾಧಿಕಾರಿಗಳ ಜಂಟಿ ಕಾರ್ಯಾಚರಣೆ : 3 ಕಿಶೋರ ಕಾರ್ಮಿಕರ ರಕ್ಷಣೆ

ಮಂಗಳೂರು, ನವೆಂಬರ್ 04, 2025 (ಕರಾವಳಿ ಟೈಮ್ಸ್) : ನಗರದ ಸ್ಟೇಟ್ ಬ್ಯಾಂಕ್, ಹಂಪನಕಟ್ಟೆ, ಬಂದರ್, ಸೆಂಟ್ರಲ್ ಮಾರ್ಕೆಟ್ ಮುಂತಾದ ಕಡೆ  ಸೋಮವಾರ ಜಿಲ್ಲಾ ಮತ್ತು ತಾಲೂಕು ಮಟ್ಟದ ಟಾಸ್ಕ್ ಸಮಿತಿ ಸದಸ್ಯರು,  ತಹಶೀಲ್ದಾರರ ನೇತೃತ್ವದಲ್ಲಿ ಕಾರ್ಮಿಕ ಅಧಿಕಾರಿಗಳು, ಹಿರಿಯ ಕಾರ್ಮಿಕ ನಿರೀಕ್ಷಕರು, ಯೋಜನಾ ನಿರ್ದೇಶಕರು, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ, ಪೆÇಲೀಸ್ ಇಲಾಖೆ, ಶಿಕ್ಷಣ ಇಲಾಖೆ ಮತ್ತು ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ಚೈಲ್ಡ್ ಹೆಲ್ಪ್ ಲೈನ್ ಸಿಬ್ಬಂದಿಗಳು ಸಾರ್ವಜನಿಕರ ದೂರಿನ ಮೇರೆಗೆ ಕಾರ್ಯಾಚರಣೆ ನಡೆಸಿ 3 ಸಂಸ್ಥೆಗಳಲ್ಲಿ 3 ಕಿಶೋರ ಕಾರ್ಮಿಕರನ್ನು ಕೆಲಸದಿಂದ ಬಿಡುಗಡೆಗೊಳಿಸಿ ಮಕ್ಕಳ ಕಲ್ಯಾಣ ಸಮಿತಿಯಲ್ಲಿ ಪುನರ್ವಸತಿ ಕಲ್ಪಿಸಲಾಗಿದೆ.

ಬಾಲಕಾರ್ಮಿಕ ಪದ್ಧತಿ ಒಂದು ಸಾಮಾಜಿಕ ಅನಿಷ್ಟ ಪಿಡುಗು ಆಗಿದ್ದು, ಬಾಲ್ಯಾವಸ್ಥೆ, ಕಿಶೋರಾವಸ್ಥೆ ಕಾರ್ಮಿಕ ಕಾಯ್ದೆಯನ್ವಯ 14 ವರ್ಷದೊಳಗಿನ ಬಾಲ್ಯಾವಸ್ಥೆ ಕಾರ್ಮಿಕರನ್ನು ಯಾವುದೇ ಸಂಸ್ಥೆಯಲ್ಲಿ ಕೆಲಸಕ್ಕೆ ನೇಮಿಸಿಕೊಳ್ಳುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿರುತ್ತದೆ. 15 ವರ್ಷದಿಂದ 18 ವರ್ಷದೊಳಗಿನ ಕಿಶೋರಾವಸ್ಥೆಯ ಕಾರ್ಮಿಕರನ್ನು ಅಪಾಯಕಾರಿ ಉದ್ದಿಮೆಗಳಲ್ಲಿ ದುಡಿಸಿಕೊಳ್ಳುವುದನ್ನು ನಿಷೇಧಿಸಲಾಗಿದೆ. ಅಲ್ಲದೇ 15 ವರ್ಷದಿಂದ  18 ವರ್ಷದೊಳಗಿನ ಮಕ್ಕಳು ಅಪಾಯಕಾರಿ ಅಲ್ಲದ ಸಂಸ್ಥೆಯಲ್ಲಿ ದುಡಿಯುತ್ತಿರುವುದನ್ನು ನಿಯಂತ್ರಿಸಲಾಗಿರುತ್ತದೆ. 

ಕಾಯ್ದೆಯನ್ನು ಉಲ್ಲಂಘಿಸಿದ ಮಾಲೀಕರಿಗೆ 50 ಸಾವಿರ ರೂಪಾಯಿವರೆಗೆ ದಂಡ ಹಾಗೂ 2 ವರ್ಷದವರೆಗೆ  ಜೈಲು ಶಿಕ್ಷೆಯನ್ನು ವಿಧಿಸಲಾಗುತ್ತದೆ. ತಪ್ಪಿತಸ್ಥ ಮಾಲೀಕರ ಮೇಲೆ ಪೆÇಲೀಸ್ ಇಲಾಖೆಯಿಂದ ಎಫ್.ಐ.ಆರ್ ಸಹ ದಾಖಲಿಸಲಾಗುತ್ತದೆ.

ಸಾರ್ವಜನಿಕರು ಬಾಲ್ಯಾವಸ್ಥೆ ಹಾಗೂ ಕಿಶೋರಾವಸ್ಥೆ ಕಾರ್ಮಿಕರಿಂದ ದುಡಿಸಿಕೊಳ್ಳುತ್ತಿರುವುದು ಕಂಡು ಬಂದಲ್ಲಿ ಚೈಲ್ಡ್ ಲೈನ್ 1098, ಕಾರ್ಮಿಕ ಇಲಾಖೆಯ ದೂರವಾಣಿ ಸಂಖ್ಯೆ 0824-2435343, 2433132, 2437479 ಮತ್ತು ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸಂಘದ ದೂರವಾಣಿ ಸಂಖ್ಯೆ 2433131 ಗೆ ಕರೆ ಮಾಡಿ ತಿಳಿಸಬಹುದು ಎಂದು ಸಹಾಯಕ ಕಾರ್ಮಿಕ ಆಯುಕ್ತರ್ಲು ತಿಳಿಸಿದ್ದಾರೆ.

  • Blogger Comments
  • Facebook Comments

0 comments:

Post a Comment

Item Reviewed: ಮಂಗಳೂರು ವಿವಿಧೆಡೆ ವಿವಿಧ ಇಲಾಖಾಧಿಕಾರಿಗಳ ಜಂಟಿ ಕಾರ್ಯಾಚರಣೆ : 3 ಕಿಶೋರ ಕಾರ್ಮಿಕರ ರಕ್ಷಣೆ Rating: 5 Reviewed By: karavali Times
Scroll to Top