ಸುಜೀರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ದಿನಾಚರಣೆ, ಪೋಷಕ-ಶಿಕ್ಷಕ ಮಹಾಸಭೆ
ಬಂಟ್ವಾಳ, ನವೆಂಬರ್ 14, 2025 (ಕರಾವಳಿ ಟೈಮ್ಸ್) : ಸರಕಾರದ ಹೊಸ ಸುತ್ತೋಲೆಯಂತೆ ಶಾಲೆಗಳಲ್ಲಿ ಕಡ್ಡಾಯವಾಗಿ ನೆಹರೂ ಜಯಂತಿ ಪ್ರಯುಕ್ತ ನವೆಂಬರ್ 14 ರಂದು ಮಕ್ಕಳ ದಿನಾಚರಣೆ ಆಚರಿಸುವಂತಾಗಿರುವುದು ಉತ್ತಮ ಬೆಳವಣಿಗೆಯಾಗಿದೆ. ಇದು ಮಕ್ಕಳಿಗೆ ಪೂರಕ ವಾತಾವರಣ ಉಂಟು ಮಾಡಿದೆ ಎಂದು ಪುದು ಗ್ರಾಮ ಪಂಚಾಯತ್ ಅಧ್ಯಕ್ಷ ರಮ್ಲಾನ್ ಮಾರಿಪಳ್ಳ ಹೇಳಿದರು.
ತಾಲೂಕಿನ ಪುದು ಗ್ರಾಮದ ಮಾರಿಪಳ್ಳ ಸಮೀಪದ ಸುಜೀರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ನಡೆದ ಮಕ್ಕಳ ದಿನಾಚರಣೆ ಹಾಗೂ ಪೆÇೀಷಕ-ಶಿಕ್ಷಕ ಮಹಾಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಸುಜೀರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯು ಶತಮಾನದ ಇತಿಹಾಸ ಹೊಂದಿದ್ದು, ಸರಕಾರಿ ಶಾಲೆಗಳನ್ನು ಉಳಿಸಿಕೊಳ್ಳುವುದು ಗ್ರಾಮಸ್ಥರ ಜವಾಬ್ದಾರಿಯಾಗಿದೆ. ಗ್ರಾಮದ ಜನ ತಮ್ಮ ಮಕ್ಕಳನ್ನು ಸರಕಾರಿ ಹಾಗೂ ಕನ್ನಡ ಶಾಲೆಗಳಿಗೆ ತಮ್ಮ ಮಕ್ಕಳನ್ನು ಹೆಚ್ಚಾಗಿ ಕಳುಹಿಸುವ ಮೂಲಕ ಊರ ಶಾಲೆಯನ್ನು ಉಳಿಸಿಕೊಳ್ಳುವ ಪ್ರತಿಜ್ಞೆ ಮಾಡಬೇಕು ಎಂದರು.
ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷ ಮುಬಾರಕ್ ಬಿ ಎಂ ಸಭಾಧ್ಯಕ್ಷತೆ ವಹಿಸಿದ್ದರು. ಪುದು ಗ್ರಾ ಪಂ ಅಧ್ಯಕ್ಷ ರಮ್ಲಾನ್ ಮಾರಿಪಳ್ಳ ಶಾಲಾ ವಿದ್ಯಾರ್ಥಿ ನಾಯಕ ಮೊಹಮ್ಮದ್ ಆದಿಲ್, ಗ್ರಾ ಪಂ ಸದಸ್ಯರಾದ ಇಕ್ಬಾಲ್ ಪಾಡಿ, ಪಡಿ ಸಂಸ್ಥೆಯ ಪಂಚಾಯತ್ ಮಾಹಿತಿದಾರರಾದ ಶ್ರೀಮತಿ ಅಸುಂಪ್ತಾ ಡಿಸೋಜಾ, ಎಸ್ ಡಿ ಎಂ ಸಿ ಉಪಾಧ್ಯಕ್ಷೆ ಶ್ರೀಮತಿ ಮುಮ್ತಾಜ್, ಶಾಲಾ ಮುಖ್ಯ ಶಿಕ್ಷಕಿ ಲವೀನ ಸಿಕ್ವೇರಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಜವಾಹರಲಾಲ್ ನೆಹರೂ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈಯುವ ಮೂಲಕ ಕಾರ್ಯಕ್ರಮ ಉದ್ಘಾಟಿಸಲಾಯಿತು. ಬಳಿಕ ಸಂವಿಧಾನ ಪೀಠಿಕೆ ಓದಲಾಯಿತು. ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಲವಿನ ಸಿಕ್ವೇರಾ ಸಭಾ ಉದ್ದೇಶ ಮಂಡಿಸಿದರು. ಮಕ್ಕಳ ಕಲಿಕಾ ಪ್ರಗತಿ, ಹಾಜರಾತಿ ಮಾಹಿತಿ ಹಂಚಿಕೆ, ಎಲ್ ಬಿ ಎ ಹಾಗೂ ಮಕ್ಕಳ ಸರ್ವತೋಮುಖ ಅಭಿವೃದ್ಧಿ ಮತ್ತು ಶಾಲೆಯ ಅಭಿವೃದ್ಧಿಯಲ್ಲಿ ಪೆÇೀಷಕರ ಪಾತ್ರದ ಬಗ್ಗೆ ಅರಿವು ಮೂಡಿಸಲಾಯಿತು.
ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಪಡಿ ಸಂಸ್ಥೆ ಪಂಚಾಯತ್ ಮಾಹಿತಿದಾರರಾದ ಶ್ರೀಮತಿ ಅಸುಂಪ್ತಾ ಡಿಸೋಜ ಅವರು ಮಕ್ಕಳ ಹಕ್ಕುಗಳು, ಪೋಕ್ಸೋ ಕಾಯಿದೆ, ಬಾಲ್ಯ ವಿವಾಹ ನಿಷೇಧ ನೀತಿಗಳ ಬಗ್ಗೆ ಮಾಹಿತಿ ನೀಡಿದರು.
ಇದೇ ವೇಳೆ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು. ಬಳಿಕ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಶ್ರೀಮತಿ ಸಂತೋಷ್ ಕುಮಾರಿ ವಂದಿಸಿದರು.

















0 comments:
Post a Comment