ಸುಜೀರು ಸರಕಾರಿ ಪ್ರೌಢಶಾಲೆಯಲ್ಲಿ ಮಕ್ಕಳ ದಿನಾಚರಣೆ ಕಾರ್ಯಕ್ರಮ
ಬಂಟ್ವಾಳ, ನವೆಂಬರ್ 14, 2025 (ಕರಾವಳಿ ಟೈಮ್ಸ್) : ಪುದು ಗ್ರಾಮದ ಮಾರಿಪಳ್ಳ ಸಮೀಪದ ಸುಜೀರು ಸರಕಾರಿ ಪ್ರೌಢಶಾಲೆಯಲ್ಲಿ ಮಕ್ಕಳ ದಿನಾಚರಣೆ ಕಾರ್ಯಕ್ರಮ ಶುಕ್ರವಾರ ನಡೆಯಿತು.
ಕಾರ್ಯಕ್ರಮ ಉದ್ಘಾಟಿಸಿದ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ, ಜಿ ಪಂ ಮಾಜಿ ಸದಸ್ಯ ಉಮ್ಮರ್ ಫಾರೂಕ್ ಮಾತನಾಡಿ, ಮಕ್ಕಳಿಗೆ ವಿದ್ಯಾಭ್ಯಾಸದ ಜೊತೆ ಸಂಸ್ಕಾರ ಕಲಿಸಲು ಪೋಷಕರ ಪಾತ್ರ ಮಹತ್ವದ್ದು ಎಂದರು.
ಇದೇ ವೇಳೆ 2024-25ನೇ ಸಾಲಿನ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಯಲ್ಲಿ ಪ್ರಥಮ ಸ್ಥಾನ ಪಡೆದ ಕು ಆಯಿಶತುಲ್ ಫಾಝೀಲಾ ಹಾಗೂ ದ್ವೀತಿಯ ಸ್ಥಾನ ಪಡೆದ ಕು ಶೈಫಾ ಅವರನ್ನು ಗೌರವಿಸಲಾಯಿತು. ಮಕ್ಕಳ ದಿನಾಚರಣೆ ಪ್ರಯುಕ್ತ ಆಟೋಟ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.
ಶಾಲಾಭಿವೃದ್ಧಿ ಸಮಿತಿ ಸದಸ್ಯರಾದ ಶ್ರೀಮತಿ ನಾಝ್ಲೀನ್, ಶ್ರೀಮತಿ ಚಂದ್ರ್ರಾವತಿ, ಶ್ರೀಮತಿ ಝೊಹರ, ಶ್ರೀಮತಿ ರಂಝೀನಾ, ಸಲಾಂ ಮಲ್ಲಿ, ಶಾಲಾ ವಿದ್ಯಾರ್ಥಿ ನಾಯಕ ಮೊಹಮ್ಮದ್ ಸಾಬಿತ್ ಎ, ಉಪ ನಾಯಕಿ ಫಾತಿಮತ್ ಸಮೀಯಾ ಹಾಗೂ ಶಾಲಾ ಶಿಕ್ಷಕರು ಭಾಗವಹಿಸಿದ್ದರು. ಶಾಲಾ ಮುಖ್ಯ ಶಿಕ್ಷಕ ಲೋಕಾ ನಾಯ್ಕ್ ಸ್ವಾಗತಿಸಿ, ಪ್ರಸ್ತಾವನೆಗೈದರು. ಶ್ರೀಮತಿ ರಂಜಿತ ವಂದಿಸಿದರು.

















0 comments:
Post a Comment