ಬಂಟ್ವಾಳ, ನವೆಂಬರ್ 25, 2025 (ಕರಾವಳಿ ಟೈಮ್ಸ್) : ದೇಶದಾದ್ಯಂತ ಸಂವಿಧಾನ ದಿನಾಚರಣೆಯನ್ನು ಪ್ರತಿ ವರ್ಷ ನವೆಂಬರ್ 26 ರಂದು ಆಚರಿಸಲಾಗುತ್ತಿದ್ದು, ಆ ಪ್ರಯುಕ್ತ ಬಿ ಸಿ ರೋಡಿನಲ್ಲಿ ರಾಜ್ಯ ಸಮಾಜ ಕಲ್ಯಾಣ ಇಲಾಖೆ ಆದೇಶದಂತೆ ತಾಲೂಕು ಮಟ್ಟದಲ್ಲಿ ತಹಶೀಲ್ದಾರರು, ತಾಲೂಕು ಪಂಚಾಯತ್ ಕಾರ್ಯನಿರ್ವಾಹಣಾಧಿಕಾರಿ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ನೇತೃತ್ವದಲ್ಲಿ ನವೆಂಬರ್ 26 ರಂದು ಬುಧವಾರ (ನಾಳೆ) ಬೆಳಿಗ್ಗೆ 9 ಗಂಟೆಗೆ ಫ್ರೌಢಶಾಲೆ/ ಕಾಲೇಜು ವಿದ್ಯಾರ್ಥಿಗಳಿಂದ ಎನ್ ಎಸ್ ಎಸ್, ಸ್ಪೋರ್ಸ್ ವಿದ್ಯಾರ್ಥಿಗಳಿಂದ ರಾಷ್ಟ್ರ ಧ್ವಜಗಳ ಪ್ರದರ್ಶನದೊಂದಿಗೆ ಸಂವಿಧಾನ ಪುಸ್ತಕಗಳನ್ನು ಪ್ರದರ್ಶಿಸಿ ಬ್ರಹ್ಮಶ್ರೀ ನಾರಾಯಣ ಗುರು ವೃತ್ತದಿಂದ ಡಾ ಬಿ ಆರ್ ಅಂಬೇಡ್ಕರ್ ಭವನದವರೆಗೆ ಜಾಥಾ ನಡೆಯಲಿದೆ. ಜಾಥಾದಲ್ಲಿ ಸಂವಿಧಾನದ ಕುರಿತು ಡಾ ಬಿ ಆರ್ ಅಂಬೇಡ್ಕರ್ ಅವರ ಪ್ರಮುಖ ನುಡಿ ಮುತ್ತುಗಳನ್ನು ಫ್ಲೇ ಕಾರ್ಡ್ ಪ್ರದರ್ಶಿಸುವುದು. ಬಳಿಕ ಡಾ ಬಿ ಆರ್ ಅಂಬೇಡ್ಕರ್ ಭವನದಲ್ಲಿ ಸಂವಿಧಾನದ ಕುರಿತು ಉಪನ್ಯಾಸ ಕಾರ್ಯಕ್ರಮ ನಡೆಯಲಿದೆ. ಬಂಟ್ವಾಳ ಶಾಸಕ ಯು ರಾಜೇಶ್ ನಾಯಕ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಬಂಟ್ವಾಳ ಕ್ಷೇತ್ರ ಸಂಪನ್ಮೂಲ ಕೇಂದ್ರದ ವಿಶೇಷ ಸಂಪನ್ಮೂಲ ವ್ಯಕ್ತಿ ಶ್ರೀಮತಿ ಸುರೇಖಾ ಯಾಳವಾರ ಅವರು ಉಪನ್ಯಾಸ ನೀಡಲಿದ್ದಾರೆ ಎಂದು ಸಮಾಜ ಕಲ್ಯಾಣ ಇಲಾಖೆಯ ಬಂಟ್ವಾಳ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
25 November 2025
- Blogger Comments
- Facebook Comments
Subscribe to:
Post Comments (Atom)
















0 comments:
Post a Comment