ಬಂಟ್ವಾಳ, ನವೆಂಬರ್ 29, 2025 (ಕರಾವಳಿ ಟೈಮ್ಸ್) : ಭಾರತದ ಪ್ರತಿಯೊಬ್ಬ ಪ್ರಜೆಯಲ್ಲಿಯೂ ಸಂವಿಧಾನದ ಆಶಯಗಳ ಅರಿವಿರಬೇಕು. ವಿದ್ಯಾರ್ಥಿಗಳು ತಮ್ಮ ಅಧ್ಯಯನದ ಜೊತೆಗೆ ಸಂವಿಧಾನದ ಮೂಲ ಆಶಯಗಳನ್ನು ಅಧ್ಯಯನ ಮಾಡಬೇಕು ಎಂದು ಬಂಟ್ವಾಳ ಎಸ್ ವಿ ಎಸ್ ಪದವಿ ಕಾಲೇಜು ಪ್ರಾಂಶುಪಾಲ ಎಂ ಡಿ ಮಂಚಿ ಕರೆ ನೀಡಿದರು.
ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಆಶ್ರಯದಲ್ಲಿ ನಡೆದ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳನ್ನುದ್ದೇಶಿಸಿ ಅವರು ಮಾತನಾಡಿದರು. ಇದೇ ವೇಳೆ ಪ್ರಾಂಶುಪಾಲರು ಸಂವಿಧಾನದ ಪೀಠಿಕೆ ಬೋಧಿಸಿ ಸಂವಿಧಾನ ದಿನದ ಪ್ರತಿಜ್ಞಾ ವಿಧಿ ಸ್ವೀಕರಿಸಿದರು.
ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಶಿವಣ್ಣ ಪ್ರಭು ಉಪಸ್ಥಿತರಿದ್ದರು. ಎನ್ ಎಸ್ ಎಸ್ ಕಾರ್ಯಕ್ರಮಾಧಿಕಾರಿ ಡಾ ಕಾಶೀನಾಥ ಶಾಸ್ತ್ರಿ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.















0 comments:
Post a Comment