ಸುಬ್ರಹ್ಮಣ್ಯ, ನವೆಂಬರ್ 29, 2025 (ಕರಾವಳಿ ಟೈಮ್ಸ್) : ಅಪ್ರಾಪ್ತ ಶಾಲಾ ಬಾಲಕನೋರ್ವಗೆ ವ್ಯಕ್ತಿಯೋರ್ವ ಗದರಿಸಿ ಕೋಲಿನಿಂದ ಹೊಡೆಯುತ್ತಿರುವ ಘಟನೆಯ ವೀಡಿಯೋ ಸಾಮಾಜಿಕ ಜಾಲ ತಾಣಗಳಲ್ಲಿ ವೈರಲ್ ಆಗಿದ್ದು, ಈ ಬಗ್ಗೆ ಬಾಲಕನ ತಾಯಿ ನೀಡಿದ ದೂರಿನ ಮೇರೆಗೆ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಆರೋಪಿತ ವ್ಯಕ್ತಿಯ ವಿರುದ್ದ ಪ್ರಕರಣ ದಾಖಲಾಗಿದೆ.
ಈ ಬಗ್ಗೆ ಬಾಲಕನ ತಾಯಿ ಪೊಲೀಸರಿಗೆ ದೂರು ನೀಡಿದ್ದು, ಇವರ ಅಪ್ರಾಪ್ತ ಪ್ರಾಯದ ಮಗ ಸ್ಥಳೀಯ ಶಾಲೆಯಲ್ಲಿ ಓದುತ್ತಿದ್ದು, ನವೆಂಬರ್ 24 ರಂದು ಆರೋಪಿ ಚೇತನ್ ಎಂಬಾತ ಅಪ್ರಾಪ್ತ ಮಗನಿಗೆ ಗದರಿಸಿ ಕೋಲಿನಿಂದ ಹೊಡೆಯುತ್ತಿರುವ ವಿಡಿಯೋ ಮೊಬೈಲ್ ಮೂಲಕ ಪ್ರಸಾರವಾಗಿರುವುದು ಗಮನಕ್ಕೆ ಬಂದ ಹಿನ್ನೆಲೆಯಲ್ಲಿ ಬಾಲಕನ ತಾಯಿ ಆರೋಪಿ ಚೇತನ್ ವಿರುದ್ಧ ನೀಡಿದ ದೂರಿನ ಮೇರೆಗೆ ಸುಬ್ರಮಣ್ಯ ಪೆÇಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 60/2025, ಕಲಂ 118(1) ಬಿ ಎನ್ ಎಸ್-2023 ರಂತೆ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ಕೈಗೊಂಡಿದ್ದಾರೆ.














0 comments:
Post a Comment