ಜಾನುವಾರು ಸಾಗಾಟದ ಆರೋಪಿಗಳನ್ನು ರಕ್ಷಿಸಲು ಸಾಮಾಜಿಕ ಜಾಲ ತಾಣದಲ್ಲಿ ನಕಲಿ ರಶೀದ್ ವೈರಲ್ ಪ್ರಕರಣ : ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲು - Karavali Times ಜಾನುವಾರು ಸಾಗಾಟದ ಆರೋಪಿಗಳನ್ನು ರಕ್ಷಿಸಲು ಸಾಮಾಜಿಕ ಜಾಲ ತಾಣದಲ್ಲಿ ನಕಲಿ ರಶೀದ್ ವೈರಲ್ ಪ್ರಕರಣ : ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲು - Karavali Times

728x90

6 November 2025

ಜಾನುವಾರು ಸಾಗಾಟದ ಆರೋಪಿಗಳನ್ನು ರಕ್ಷಿಸಲು ಸಾಮಾಜಿಕ ಜಾಲ ತಾಣದಲ್ಲಿ ನಕಲಿ ರಶೀದ್ ವೈರಲ್ ಪ್ರಕರಣ : ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲು

ಮಂಗಳೂರು, ನವೆಂಬರ್ 06, 2025 (ಕರಾವಳಿ ಟೈಮ್ಸ್) : ಅಕ್ರಮ ಜಾನುವಾರು ಸಾಗಾಟ ಪ್ರಕರಣದ ಆರೋಪಿಗಳನ್ನು ರಕ್ಷಿಸಲು ಒಳಸಂಚು ರೂಪಿಸಿ, ಸುಳ್ಳು ದಾಖಲೆ ಸೃಷ್ಟಿಸಿ ಸಾಮಾಜಿಕ ಜಾಲತಾಣದಲ್ಲಿ ಪ್ರಸಾರ ಮಾಡಿದ ಆರೋಪದಲ್ಲಿ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ಪುತ್ತೂರು ಗ್ರಾಮಾಂತರ ಪೆÇಲೀಸ್ ಠಾಣಾ ಅಪರಾಧ ಕ್ರಮಾಂಕ 115/2025. ಕಲಂ 132, 109, 303(2) ಆರ್/ಡಬ್ಲ್ಯು 3(5) ಭಾರತೀಯ ನ್ಯಾಯ ಸಂಹಿತೆ 2023 ಮತ್ತು ಕಲಂ 4, 5, 6, 12 ಕರ್ನಾಟಕ ಜಾನುವಾರು ಹತ್ಯೆ ಪ್ರತಿ ಬಂಧಕ ಕಾಯ್ದೆ ಮತ್ತು ಸಂರಕ್ಷಣಾ ಕಾಯ್ದೆ-2020 ಪ್ರಕರಣಕ್ಕೆ ಸಂಬಂಧಿಸಿದಂತೆ, ಸದ್ರಿ ವಾಹನದಲ್ಲಿ ಸಾಗಿಸಲಾಗುತ್ತಿದ್ದ ಜಾನುವಾರುಗಳನ್ನು ಖರೀದಿ ಮಾಡಿರುವ ರಶೀದಿಗಳೆಂದು ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ರಶೀದಿ ಸೃಷ್ಟಿಸಿ ಪ್ರಸಾರ ಮಾಡಲಾಗಿತ್ತು. 

ಈ ಬಗ್ಗೆ ತನಿಖೆ ನಡೆಸಿದ ಪೊಲೀಸರಿಗೆ ಚನ್ನರಾಯಪಟ್ಟಣದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಕಾರ್ಯದರ್ಶಿರವರು ದೃಢೀಕರಿಸಿದಂತೆ, ಶುಕ್ರವಾರದಂದು ಮಾತ್ರ ಜಾನುವಾರು ಸಂತೆ ನಡೆಯುವುದಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರವಾಗುತ್ತಿರುವ ಸದ್ರಿ ದಾಖಲೆಗಳು (ರಶೀದಿ ಕ್ರಮ ಸಂಖ್ಯೆ 27653 ಹಾಗೂ 27654 ಗಳನ್ನು) ತಿದ್ದಿ ಸುಳ್ಳು ಸೃಷ್ಟನೆ ಮಾಡಿ ಪ್ರಸಾರ ಮಾಡಿರುವುದಾಗಿ ತಿಳಿದುಬಂದಿದೆ. ಅಲ್ಲದೆ ಈ ಬಗ್ಗೆ ಆರ್.ಟಿ.ಓ ಅಧಿಕಾರಿ ಮತ್ತು ಪಶು ವೈದ್ಯಾಧಿಕಾರಿಯವರಿಂದ ಮಾಹಿತಿ ಪಡೆಯಲಾಗಿದ್ದು, ವಾಹನದಲ್ಲಿ ಜಾನುವಾರುಗಳನ್ನು ಸಾಗಾಟ ಮಾಡಲು ಅನುಮತಿ ನೀಡಿರುವುದಿಲ್ಲ ಎಂದು ಅವರು ಮಾಹಿತಿ ನೀಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. 

ಈ ರೀತಿ ಸುಳ್ಳು ಸೃಷ್ಟನೆ ಮಾಡಿದ ಹಾಗೂ ನೈಜವಾಗಿರದ ದಾಖಲೆಗಳೆಂದು ತಿಳಿದಿದ್ದರು ಕೂಡಾ, ಆರೋಪಿಗಳನ್ನು ರಕ್ಷಿಸುವ ದುರುದ್ದೇಶದಿಂದ ‘ಸ್ಟೇಟ್ ಆಫೀಸ್ ಎಸ್ ಡಿ ಪಿ ಐ ಕರ್ನಾಟಕ’ ಎಂಬ ಹೆಸರಿನ ಎಕ್ಸ್ ಖಾತೆಯ ಖಾತೆದಾರರು, ತೇಜಸ್ ನ್ಯೂಸ್.ಕಾಂ ಇದರ ಮಾಲಕ/ ಸಂಪಾದಕ ಹಾಗೂ ಸಾದತ್ ಬಜತ್ತೂರು ಎಂಬವರು ಹಾಗೂ ಇತರ ಕೆಲವು ಸಾಮಾಜಿಕ ಜಾಲತಾಣ ಬಳಕೆದಾರರು ಸುಳ್ಳು ಸುದ್ದಿಯನ್ನು ಪ್ರಸಾರ ಮಾಡುವ ಮೂಲಕ, ಸಾರ್ವಜನಿಕರು ಉದ್ವೇಗಗೊಂಡು ಜನರು ಗುಂಪು ಕೂಡಿ ದೊಂಬಿಯಂತಹ ಅಪರಾಧ ನಡೆಸಲು ಸನ್ನಿವೇಶ ಸೃಷ್ಟಿಸಿರುತ್ತಾರೆ. ಈ ಬಗ್ಗೆ ಪುತ್ತೂರು ಗ್ರಾಮಾಂತರ ಪೆÇಲೀಸ್ ಠಾಣೆಯಲ್ಲಿ ನ 5 ರಂದು ಅಪರಾಧ ಕ್ರಮಾಂಕ 123-2005, ಕಲಂ 233, 240, 338, 353(1)(ಬಿ), 192, 61(2)(ಬಿ), 238(ಸಿ) ಆರ್/ಡಬ್ಲ್ಯು 3(5) ಬಿ ಎನ್ ಎಸ್-2023 ರಂತೆ ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದೆ. 

ದಕ್ಷಿಣ ಕನ್ನಡ ಜಿಲ್ಲಾ ಪೆÇಲೀಸ್ ವ್ಯಾಪ್ತಿಯಲ್ಲಿ ಮುಂದಿನ ದಿನಗಳಲ್ಲಿ ಕೂಡಾ, ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹಾಗೂ ಪ್ರಚೋದನಾಕಾರಿ ಪೆÇೀಸ್ಟ್ ಪ್ರಸಾರ ಮಾಡುವವರ ವಿರುದ್ಧ ಕಠಿನ ಕಾನೂನು ಕ್ರಮಗಳನ್ನು ಜರುಗಿಸಲಾಗುವುದು. ಸಾಮಾಜಿಕ ಜಾಲತಾಣ ಬಳಕೆದಾರರು ಜವಾಬ್ದಾರಿಯುತವಾಗಿ ಸಾಮಾಜಿಕ ಜಾಲತಾಣಗಳನ್ನು ಬಳಸಬೇಕು ಎಂದು ಜಿಲ್ಲಾ ಎಸ್ಪಿ ಡಾ ಅರುಣ್ ಕೆ ಅವರು ಸೂಚಿಸಿದ್ದಾರೆ.

  • Blogger Comments
  • Facebook Comments

0 comments:

Post a Comment

Item Reviewed: ಜಾನುವಾರು ಸಾಗಾಟದ ಆರೋಪಿಗಳನ್ನು ರಕ್ಷಿಸಲು ಸಾಮಾಜಿಕ ಜಾಲ ತಾಣದಲ್ಲಿ ನಕಲಿ ರಶೀದ್ ವೈರಲ್ ಪ್ರಕರಣ : ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲು Rating: 5 Reviewed By: karavali Times
Scroll to Top