ಭಾರತದತ್ತ ಮುಖ ಮಾಡಿದ ದಿತ್ವಾ ಚಂಡ ಮಾರುತ : ರಾಜ್ಯಾದ್ಯಂತ ಮುಂದಿನ 5 ದಿನ ಭಾರಿ ಮಳೆ ಸಾಧ್ಯತೆ, ಬೆಂಗಳೂರಿನಲ್ಲಿ ತೀವ್ರ ಚಳಿಯ ವಾತಾವರಣ - Karavali Times ಭಾರತದತ್ತ ಮುಖ ಮಾಡಿದ ದಿತ್ವಾ ಚಂಡ ಮಾರುತ : ರಾಜ್ಯಾದ್ಯಂತ ಮುಂದಿನ 5 ದಿನ ಭಾರಿ ಮಳೆ ಸಾಧ್ಯತೆ, ಬೆಂಗಳೂರಿನಲ್ಲಿ ತೀವ್ರ ಚಳಿಯ ವಾತಾವರಣ - Karavali Times

728x90

29 November 2025

ಭಾರತದತ್ತ ಮುಖ ಮಾಡಿದ ದಿತ್ವಾ ಚಂಡ ಮಾರುತ : ರಾಜ್ಯಾದ್ಯಂತ ಮುಂದಿನ 5 ದಿನ ಭಾರಿ ಮಳೆ ಸಾಧ್ಯತೆ, ಬೆಂಗಳೂರಿನಲ್ಲಿ ತೀವ್ರ ಚಳಿಯ ವಾತಾವರಣ

ಬೆಂಗಳೂರು, ನವೆಂಬರ್ 30, 2025 (ಕರಾವಳಿ ಟೈಮ್ಸ್) : ದಿತ್ವಾ ಚಂಡಮಾರುತ ಪರಿಣಾಮದಿಂದಾಗಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಕೇಂದ್ರ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಶ್ರೀಲಂಕಾಗೆ ಅಪ್ಪಳಿಸಿರುವ ದಿತ್ವಾ ಚಂಡಮಾರುತ ಭಾರತದತ್ತ ಮುಖ ಮಾಡಿದ್ದು, ಭಾರತದ ಕರಾವಳಿ ಜಿಲ್ಲೆಗಳಲ್ಲಿ ಕೆಲವೆಡೆ ಹಳದಿ ಅಲರ್ಟ್, ಇನ್ನು ಕೆಲವೆಡೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಚಂಡಮಾರುತದ ಹಿನ್ನೆಲೆಯಲ್ಲಿ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಕರ್ನಾಟಕ ರಾಜ್ಯಾದ್ಯಂತ ಮುಂದಿನ 5 ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಮುಂದಿನ 2 ದಿನ ಚಳಿ ಹಾಗೂ ಮೋಡ ಕವಿದ ವಾತಾವರಣ ಇರಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ನವೆಂಬರ್ 30ರಿಂದ ಕರ್ನಾಟಕದ ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಚಳಿ ಹೆಚ್ಚಾಗುವ ಸಾಧ್ಯತೆಯಿದೆ. ಮುಂದಿನ 7 ದಿನಗಳವರೆಗೆ ಇದೇ ಹವಾಮಾನ ಮುಂದುವರೆಯುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ. ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳವರೆಗೆ ಮೋಡ ಕವಿದ ವಾತಾವರಣ ಇರಲಿದ್ದು, ಹಗುರದಿಂದ ಮಧ್ಯಮ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಕೆಲವು ಪ್ರದೇಶಗಳಲ್ಲಿ ಬೆಳಗಿನ ಜಾವ ವಿಪರೀತ ಮಂಜು ಬೀಳುವ ಸಾಧ್ಯತೆ ಇದೆ.

ನವೆಂಬರ್ 30 ರಂದು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ರಾಮನಗರ, ಮಂಡ್ಯ, ಹಾಸನ, ಚಿಕ್ಕಮಗಳೂರು, ಮೈಸೂರು, ಚಾಮರಾಜನಗರ, ಕೊಡಗು ಸೇರಿ 12 ಜಿಲ್ಲೆಗಳಿಗೆ ಹಳದಿ ಅಲರ್ಟ್ ಘೋಷಿಸಲಾಗಿದೆ.

ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ, ಚಾಮರಾಜನಗರ, ಮೈಸೂರು, ಹಾಸನ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳ ಕೆಲವೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಬಳ್ಳಾರಿ ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ, ವಿಜಯನಗರ ಜಿಲ್ಲೆಗಳಲ್ಲಿ ಒಣ ಹವೆ ಉಂಟಾಗುವ ಸಾಧ್ಯತೆಯಿದೆ ಎನ್ನಲಾಗಿದೆ.

ಇನ್ನು ಕರ್ನಾಟಕದ ಉತ್ತರ ಒಳನಾಡಿನ ಭಾಗಗಳಲ್ಲಿ ಒಣ ಹವೆ ಮುಂದುವರಿಯುವ ಸಾಧ್ಯತೆಯಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಒಣ ಹವೆ ಉಂಟಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

  • Blogger Comments
  • Facebook Comments

0 comments:

Post a Comment

Item Reviewed: ಭಾರತದತ್ತ ಮುಖ ಮಾಡಿದ ದಿತ್ವಾ ಚಂಡ ಮಾರುತ : ರಾಜ್ಯಾದ್ಯಂತ ಮುಂದಿನ 5 ದಿನ ಭಾರಿ ಮಳೆ ಸಾಧ್ಯತೆ, ಬೆಂಗಳೂರಿನಲ್ಲಿ ತೀವ್ರ ಚಳಿಯ ವಾತಾವರಣ Rating: 5 Reviewed By: karavali Times
Scroll to Top