ಮಂಗಳೂರು, ನವೆಂಬರ್ 11, 2025 (ಕರಾವಳಿ ಟೈಮ್ಸ್) : ದಿಲ್ಲಿಯಲ್ಲಿ ನಡೆದ ಘಟನೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪೆÇಲೀಸ್ ವ್ಯಾಪ್ತಿಯಲ್ಲಿ ಪೊಲೀಸ್ ಇಲಾಖಾ ವತಿಯಿಂದ ಕೆಲವು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಎಸ್ಪಿ ಡಾ ಅರುಣ್ ಕೆ ತಿಳಿಸಿದ್ದಾರೆ.
ಜಿಲ್ಲಾದ್ಯಂತ ರಾತ್ರಿ ವೇಳೆ ಪೆÇಲೀಸ್ ಅಧಿಕಾರಿಗಳು ಕಟ್ಟುನಿಟ್ಟಾದ ಗಸ್ತು ನಿರ್ವಹಿಸುವಂತೆ ಸೂಚಿಸಲಾಗಿದೆ. ಸೂಕ್ಷ್ಮ ಪ್ರದೇಶಗಳಲ್ಲಿ ಅಧಿಕಾರಿ/ ಸಿಬ್ಬಂದಿಗಳನ್ನು ಪಿಕೆಟಿಂಗ್ ಪಾಯಿಂಟ್ ಕರ್ತವ್ಯದಲ್ಲಿ ನಿಯೋಜಿಸಿ ನಿಗಾ ವಹಿಸಲಾಗುತ್ತಿದೆ. ಜಿಲ್ಲೆಯ ಮುಖ್ಯ ಸ್ಥಳಗಳಲ್ಲಿ ನಾಕಾಬಂದಿಗಳನ್ನು ಅಳವಡಿಸಿ ಕಟ್ಟುನಿಟ್ಟಾಗಿ ತಪಾಸಣೆ ನಡೆಸಲಾಗುತ್ತಿದೆ. ಜಿಲ್ಲೆಯ ಪ್ರವಾಸಿ ತಾಣಗಳು, ಧಾರ್ಮಿಕ ಸ್ಥಳಗಳು, ಮುಖ್ಯ ಸರ್ಕಾರಿ ಕಟ್ಟಡಗಳು ಸೇರಿದಂತೆ ಜನದಟ್ಟಣೆಯ ಜಾಗಗಳಲ್ಲಿ ಹೆಚ್ಚಿನ ಭದ್ರತೆ ಒದಗಿಸಿ ನಿಗಾ ವಹಿಸಲಾಗುತ್ತಿದೆ. ಯಾವುದೇ ಸಂಶಯಾಸ್ಪದ ವ್ಯಕ್ತಿಗಳು ಅಥವಾ ಸಂಶಯಾಸ್ಪದ ಕೃತ್ಯಗಳು ಕಂಡುಬಂದಲ್ಲಿ ಸಾರ್ವಜನಿಕರು ತಕ್ಷಣ ಜಿಲ್ಲಾ ನಿಯಂತ್ರಣ ಕೊಠಡಿಗೆ ಮಾಹಿತಿ ನೀಡುವಂತೆ ವಿನಂತಿಸಲಾಗಿದೆ ಎಂದು ಜಿಲ್ಲಾ ಎಸ್ಪಿ ತಿಳಿಸಿದ್ದಾರೆ.















0 comments:
Post a Comment