ಮಂಗಳೂರು, ನವೆಂಬರ್ 08, 2025 (ಕರಾವಳಿ ಟೈಮ್ಸ್) : ದಕ್ಷಿಣ ಕನ್ನಡ ಜಿಲ್ಲಾಡಳಿತ, ದ.ಕ ಜಿಲ್ಲಾ ಪಂಚಾಯತ್ ಕನ್ನಡ ಮತ್ತು ಸಂಸ್ಖತಿ ಇಲಾಖೆ, ದಕ್ಷಿಣ ಕನ್ನಡ ಜಿಲ್ಲೆ ಇವುಗಳ ಸಂಯುಕ್ತ ಆಶ್ರಯದಲ್ಲಿ ಕನಕ ಜಯಂತಿ ಆಚರಣೆಯು ಉರ್ವಸ್ಟೋರಿನ ತುಳು ಭವನದಲ್ಲಿ ಶನಿವಾರ ನಡೆಯಿತು.
ಕಾರ್ಯಕ್ರಮ ಉದ್ಘಾಟಿಸಿದ ಜಿಲ್ಲಾಧಿಕಾರಿ ದರ್ಶನ್ ಎಚ್ ವಿ ಮಾತನಾಡಿ, ದಾಸಸಾಹಿತ್ಯದ ಮೂಲಕ ಜೇವನದ ಆದರ್ಶಗಳನ್ನು ಪ್ರತಿಬಿಂಬಿಸಿದ ದಾಸವರೋಣ್ಯರಲ್ಲಿ ಕನಕದಾಸರು ಅಗ್ರಗಣ್ಯರು. ಕನಕದಾಸರ ಚಿಂತನೆಗಳು ಇಂದಿಗೂ ಮತ್ತು ಎಂದಿಗೂ ಮೌಲ್ಯಯುತವಾದದ್ದು. ಸಾಮಾನ್ಯ ಜನರಿಗೆ ಅರ್ಥವಾಗುವಂತಹ ಬಾಷೆಯಲ್ಲಿ ದಾಸ ಸಾಹಿತ್ಯದ ಮೂಲಕ ಸಾಮಾಜಿಕ ಚಿಂತನೆಗಳನ್ನು ಹರಿಸಿದವರು. ದಾಸ ಸಾಹಿತ್ಯದ ಮೂಲಕ ಕನಕದಾಸರು ಪಸರಿಸಿದ ತತ್ವಗಳು ನುಡಿಗಳು ಶ್ರೇಷ್ಠ ನಡೆಗಳಾಗಿ ಜೀವನದಲ್ಲಿ ಆಳವಡಿಸಿಕೊಳ್ಳಬೇಕು. ಅಕ್ಕಿ-ರಾಗಿ ಕಥೆಯ ರಾಮಧ್ಯಾನ ಚರಿತೆಯು ಸಮಾಜಕ್ಕೆ ಒಂದು ಉತ್ತಮ ಸಂದೇಶ ನೀಡುವ ಕಥೆಯಾಗಿದೆ ಎಂದರು.
ಹಿರಿಯ ಲೇಖಕಿ ಬಿ ಎಂ ರೋಹಿಣಿ ಅವರು ಕನಕ ದಾಸರ ಕುರಿತು ಉಪನ್ಯಾಸ ನೀಡಿದರು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನರ್ವಡೆ ವಿನಾಯಕ್ ಕಾರ್ಭಾರಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಅನಿಲ್ ಕುಮಾರ್ ಭೂಮರೆಡ್ಡಿ, ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ್ ಗಟ್ಟಿ ಕಾಪಿಕಾಡ್, ಮಂಗಳೂರು ನಗರ ಯೋಜನಾ ಪ್ರಾಧಿಕಾರ (ಮುಡಾ) ಅಧ್ಯಕ್ಷ ಸದಾಶಿವ ಉಳ್ಳಾಲ್, ಕರಾವಳಿ ಕುರುಬರ ಸಂಘದ ಅಧ್ಯಕ್ಷ ನಿರಂಜನ್, ಹಾಲುಮತ ಮಹಾಸಭಾ ಅಧ್ಯಕ್ಷ ಬಸವರಾಜ್ ಎಚ್ ಬೆಂಗಿ, ಕರಾವಳಿ ಹಾಲುಮತ ಕುರುಬರ ಸಂಘದ ಅಧ್ಯಕ್ಷ ಚಂದ್ರಪ್ಪ ಬಿ ಕೆ, ಕರ್ನಾಟಕ ಪ್ರದೇಶ ಕುರುಬರ ಸಂಘದ ನಿರ್ದೇಶಕ ಶಿವಾನಂದ ಯರಝೇರಿ, ಭಾಗವಹಿಸಿದ್ದರು.
ಕನ್ನಡ ಮತ್ತು ಸಂಸ್ಕøತಿ ಇಲಾಖಾ ಸಹಾಯಕ ನಿರ್ದೇಶಕ ರಾಜೇಶ ಜಿ ಸ್ವಾಗತಿಸಿ, ಶ್ರೀಮತಿ ರೇಣುಕಾ ಕಣಿಯೂರು ಕಾರ್ಯಕ್ರಮ ನಿರೂಪಿಸಿದರು.


















0 comments:
Post a Comment