ಧರ್ಮಸ್ಥಳ, ನವೆಂಬರ್ 26, 2025 (ಕರಾವಳಿ ಟೈಮ್ಸ್) : ಶ್ರೀ ಕ್ಷೇತ್ರ ಧರ್ಮಸ್ಥಕ್ಕೆ ಬಂದ್ದಿ ಮಹಿಳೆಯ ಬ್ಯಾಗಿನಲ್ಲಿರಿಸಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳವುಗೈದ ಘಟನೆ ಬೇಧಿಸಿದ ಪೊಲೀಸರು ಚಿನ್ನಾಭರಣ ಸಹಿತ ಇಬ್ಬರು ಮಹಿಳಾ ಕಳ್ಳಿಯರನ್ನು ಬಂಧಿಸುವಲ್ಲಿ ಸಫಲರಾಗಿದ್ದಾರೆ.
ಬಂಧಿತರನ್ನು ಹುಬ್ಬಳ್ಳಿ ನಗರದ ಸಟಲ್ಮೆಂಟ್ ನಿವಾಸಿ ಬಿ ಬಿ ಜಾನ್ (59) ಹಾಗೂ ಆಕೆಯ ಪುತ್ರಿ ಆರತಿ ಅಲಿಯಾಸ್ ಮಸಾಬಿ ಅಲಿಯಾಸ್ ಅಸ್ಮಾ (34) ಎಂದು ಗುರುತಿಸಲಾಗಿದೆ. ಕಳೆದ ಮೇ 3 ರಂದು ಶ್ರೀ ಕ್ಷೇತ್ರ ಧರ್ಮಸ್ಥಳ ದೇವಸ್ಥಾನಕ್ಕೆ ದರ್ಶನಕ್ಕೆ ಬಂದಿದ್ದ ಲತಾ ಎಂಬವರ ಬ್ಯಾಗಿನಲ್ಲಿರಿಸಿದ್ದ 6.79 ಲಕ್ಷ ರೂಪಾಯಿ ಮೌಲ್ಯದ 97 ಗ್ರಾಂ ಚಿನ್ನಾಭರಣ ಕಳವು ಮಾಡಿದ್ದ ಬಗ್ಗೆ ಧರ್ಮಸ್ಥಳ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ತನಿಖೆ ನಡೆಸಿದ ಪೊಲೀಸರು ಆರೋಪಿ ಮಹಿಳಾ ಕಳ್ಳಿಯರನ್ನು ನ 23 ರಂದು ಮತ್ತೆ ಕಳ್ಳತನ ಮಾಡಲು ಬರುತ್ತಿದ್ದಾಗ ಖಚಿತ ಮಾಹಿತಿ ಮೇರೆಗೆ ಧರ್ಮಸ್ಥಳ ದ್ವಾರದ ಬಳಿ ದಸ್ತಗಿರಿ ಮಾಡಿದ್ದಾರೆ. ಬಂಧಿತರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು ಹೆಚ್ಚಿನ ವಿಚಾರಣೆಗೆ ಪೊಲೀಸ್ ಕಸ್ಟಡಿಗೆ ಪಡೆದು ವಿಚಾರಣೆ ನಡೆಸಲಾಗಿ ಆರೋಪಿಗಳ ಹುಬ್ಬಳಿ ಮನೆಯಿಂದ ಕಳ್ಳತನ ಮಾಡಿದ ಸುಮಾರು 5.32 ಲಕ್ಷ ರೂಪಾಯಿ ಮೌಲ್ಯದ 76 ಗ್ರಾಂ ಚಿನ್ನಾಭರಣಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಆರೋಪಿಗಳ ಪತ್ತೆ ಕಾರ್ಯಾಚರಣೆಯಲ್ಲಿ ಬೆಳ್ತಂಗಡಿ ಉಪವಿಭಾಗ ಡಿವೈಎಸ್ಪಿ ರೋಹಿಣಿ ಸಿ.ಕೆ ಮಾರ್ಗದರ್ಶನದಲ್ಲಿ ಬೆಳ್ತಂಗಡಿ ಪೊಲೀಸ್ ಇನ್ಸ್ ಪೆಕ್ಟರ್ ಬಿ ಜಿ ಸುಬ್ಬಪುರ್ ಮಠ್ ಅವರ ತಂಡದಲ್ಲಿ ಧರ್ಮಸ್ಥಳ ಪೆÇಲೀಸ್ ಠಾಣಾ ಪಿಎಸ್ಸೈ ಸಮರ್ಥ್ ಆರ್ ಗಾಣಿಗೇರ, ಸಿಬ್ಬಂದಿಗಳಾದ ರಾಜೇಶ್, ಪ್ರಶಾಂತ್, ಸಂದೀಪ್, ಮಲ್ಲಿಕಾರ್ಜುನ್, ಶಶಿ ಕುಮಾರ್, ಮಂಜುನಾಥ್ ಪಾಟೀಲ್, ಪ್ರಮೋದಿನಿ, ಸುನಿತಾ, ಸೌಭಾಗ್ಯ, ದೀಪಾ, ಉಷಾ ಅವರುಗಳು ಭಾಗವಹಿಸಿದ್ದರು.















0 comments:
Post a Comment