ಬಂಟ್ವಾಳ, ನವೆಂಬರ್ 17, 2025 (ಕರಾವಳಿ ಟೈಮ್ಸ್) : ಕಲ್ಲಡ್ಕ ಸಮೀಪದ ಗೋಳ್ತಮಜಲು ನಿವಾಸಿ ಮುಹಮ್ಮದ್ ಹಾಜಿ (80) ಅವರು ವಯೋಸಹಜ ಅನಾರೋಗ್ಯ ಸೋಮವಾರ ಸ್ವಗೃಹದಲ್ಲಿ ನಿಧನರಾದರು. ಇವರು ಗೋಳ್ತಮಜಲು ರಹ್ಮಾನಿಯಾ ಜುಮಾ ಮಸೀದಿ ಆಡಳಿತ ಸಮಿತಿಯಲ್ಲಿ ಹಲವಾರು ವರ್ಷಗಳ ಕಾಲ ಕೋಶಾಧಿಕಾರಿ ಮತ್ತು ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.
ಮೃತರು ಸಹೋದರ ಗೋಳ್ತಮಜಲು ಹಜಾಜ್ ಸಮೂಹ ಸಂಸ್ಥೆಯ ಅಬೂಬಕ್ಕರ್ ಹಾಜಿ ಸಹಿತ ಪತ್ನಿ, ಇಬ್ಬರು ಪುತ್ರರು, ಇಬ್ಬರು ಪುತ್ರಿಯರು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.













0 comments:
Post a Comment