ಮಂಗಳೂರು, ನವೆಂಬರ್ 06, 2025 (ಕರಾವಳಿ ಟೈಮ್ಸ್) : ನಗರದ ಗೋರಿಗುಡ್ಡ ಪ್ರದೇಶದ ಬಳಿ ನಾಲ್ವರು ಮಹಿಳೆಯರು ಅನುಮಾನಾಸ್ಪದವಾಗಿ ತಿರುಗುತ್ತಿದ್ದ ಬಗ್ಗೆ ಸ್ಥಳೀಯರು ನೀಡಿದ ಮಾಹಿತಿಯಂತೆ ತಕ್ಷಣ ಕಾರ್ಯಾಚರಣೆ ನಡೆಸಿದ 112 ತುರ್ತು ಸ್ಪಂದನೆಯ ಪೊಲೀಸರು ಮಹಿಳೆಯರನ್ನು ಬಂಧಿಸಿದ ಘಟನೆ ನ 5 ರಂದು ನಡೆದಿದೆ.
ಬುಧವಾರ ಬೆಳಿಗ್ಗೆ ಸುಮಾರು 9.45 ರ ವೇಳೆಗೆ ಗೋರಿ ಗುಡ್ಡ ಪ್ರದೇಶದ ಬಳಿ ನಾಲ್ವರು ಮಹಿಳೆಯರು ಅನುಮಾನಾಸ್ಪದವಾಗಿ ಓಡಾಡುವುದನ್ನು ಕಂಡು ಸ್ಥಳೀಯರು 112 ತುರ್ತು ಸ್ಪಂದನಾ ಪೊಲೀಸರಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಮಾಹಿತಿ ಬಂದ ಕೇವಲ ಐದೇ ನಿಮಿಷದಲ್ಲಿ ಕಾರ್ಯಪ್ರವೃತ್ತರಾದ ಪೊಲೀಸರು ಅನುಮಾನಾಸ್ಪದವಾಗಿ ತಿರುಗಾಡುತ್ತಿದ್ದ ಮಹಿಳೆರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.
ಈ ಪೈಕಿ ಓರ್ವ ಮಹಿಳೆ ಹಳೆಯ ಮನೆಗಳ್ಳತನ ಪ್ರಕರಣದ ಆರೋಪಿಯಾಗಿದ್ದು, ಬಳಿಕ ಪರಾರಿಯಾಗಿದ್ದರು ಎಂದು ತಿಳಿದುಬಂದಿದೆ. ಈಕೆಯನ್ನು ಹೊಳೆನರಸೀಪುರದ ನಿವಾಸಿ ಶಿವಗಾಮಿ ಎಂದು ಹೆಸರಿಸಲಾಗಿದೆ. ಸದ್ಯ ಈಕೆಯನ್ನು ಕದ್ರಿ ಪೆÇಲೀಸ್ ಠಾಣೆಯಲ್ಲಿ ದಾಖಲಾಗಿರುವ ಹಳೆಯ ಪ್ರಕರಣದಲ್ಲಿ ಆಕೆಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಇತರ ಮಹಿಳೆಯರು ಯವುದೇ ಅಪರಾಧ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವುದು ತಿಳಿದು ಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಕೆಲವೊಮ್ಮೆ ಸಂಶಯಾಸ್ಪದ ಘಟನೆಗಳಲ್ಲಿ ಸಾರ್ವಜನಿಕರು ಪ್ರದರ್ಶಿಸುವ ಜವಾಬ್ದಾರಿ ಕರೆಗಳು ಹೆಚ್ಚಿನ ಕೆಲಸ ಮಾಡುತ್ತದೆ. ಈ ಬಗ್ಗೆ ನಮ್ಮ ಕೆಲಸವಲ್ಲ ಎಂಬ ತಾತ್ಸಾರ ಮನೋಭಾವ ಸರಿಯಲ್ಲ ಎಂದು ಮಂಗಳೂರು ಪೊಲೀಸ್ ಕಮಿಷನರ್ ಸಾರ್ವಜನಿಕರಿಗೆ ಸಲಹೆ ನೀಡಿದ್ದಾರೆ.















0 comments:
Post a Comment