ಬೆಂಗಳೂರು, ನವೆಂಬರ್ 27, 2025 (ಕರಾವಳಿ ಟೈಮ್ಸ್) : ಕರ್ನಾಟಕ ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಅವರಿಗೆ ಬೆಂಗಳೂರು ವಿಶ್ವವಿದ್ಯಾನಿಲಯದ ಗೌರವ ಡಾಕ್ಟರೇಟ್ ಗೌರವವನ್ನು ಗುರವಾರ ರಾಜಭವನದ ಬಾಂಕ್ವೆಟ್ ಹಾಲಿನಲ್ಲಿ ಪ್ರದಾನ ಮಾಡಲಾಯಿತು.
ಬೆಂಗಳೂರು ವಿಶ್ವವಿದ್ಯಾನಿಲಯದ ಕುಲಾಧಿಪತಿಗಳೂ ಆದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಸ್ಪೀಕರ್ ಯು.ಟಿ. ಖಾದರ್ ಅವರಿಗೆ ಗೌರವ ಡಾಕ್ಟರೇಟ್ ಪ್ರಧಾನ ಮಾಡಿದರು. ಕಾರ್ಯಕ್ರಮದಲ್ಲಿ ಬೆಂಗಳೂರು ವಿವಿ ಉಪಕುಲಪತಿ ಡಾ ಜಯಕರ ಎಸ್.ಎಂ., ಕುಲಸಚಿವೆ ಕೆ.ಟಿ. ಶಾಂತಳಾ ಮೊದಲಾದವರು ಭಾಗವಹಿಸಿದ್ದರು.
















0 comments:
Post a Comment