ಬಂಟ್ವಾಳ, ನವೆಂಬರ್ 24, 2025 (ಕರಾವಳಿ ಟೈಮ್ಸ್) : ರಾಜ್ಯ ಸರ್ಕಾರದ 5 ಗ್ಯಾರಂಟಿ ಯೋಜನೆಗಳ ಕುರಿತು ಸಾರ್ವಜನಿಕರಲ್ಲಿ ಅರಿವು ಮತ್ತು ಜಾಗೃತಿ ಮೂಡಿಸಲು ಕಲಾ ಜಾಥಾ ಕಾರ್ಯಕ್ರಮ ಸೋಮವಾರ ಬಂಟ್ವಾಳ ತಾಲೂಕಿಗೆ ಆಗಮಿಸಿತು.
ಬಿ ಸಿ ರೋಡಿಗೆ ಆಗಮಿಸಿದ ಜಾಥಾವನ್ನು ಪುರಸಭಾಧ್ಯಕ್ಷ ಬಿ ವಾಸು ಪೂಜಾರಿ ಲೊರೆಟ್ಟು, ಬಂಟ್ವಾಳ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷೆ ಜಯಂತಿ ಪೂಜಾರಿ, ತಾಲೂಕು ತಹಶೀಲ್ದಾರ್ ಮಂಜುನಾಥ್, ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಸಚಿನ್ ಕುಮಾರ್ ಮೊದಲಾದವರು ಸ್ವಾಗತಿಸಿದರು.
ಇದೇ ವೇಳೆ ಕ್ಷೇತ್ರ ಪ್ರಚಾರ ಕಲಾ ತಂಡಗಳಿಂದ ಗ್ಯಾರಂಟಿ ಯೋಜನೆಗಳ ಮಹತ್ವ ಅರಿವು ಮೂಡಿಸುವ ತೊಗಲು ಗೊಂಬೆ ನಾಟಕ ಪ್ರದರ್ಶನ ನಡೆಯಿತು.















0 comments:
Post a Comment