ಬಂಟ್ವಾಳ, ನವೆಂಬರ್ 15, 2025 (ಕರಾವಳಿ ಟೈಮ್ಸ್) : ಬೆಂಗಳೂರಿನಿಂದ ಉಡುಪಿ ಕಡೆಗೆ ಪ್ರಯಾಣಿಸುತ್ತಿದ್ದ ಇನ್ನೋವಾ ಕಾರೊಂದು ಚಾಲಕನ ನಿಯಂತ್ರಣ ಮೀರಿ ಬಿ ಸಿ ರೋಡು ನಾರಾಯಣ ಗುರು ವೃತ್ತಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಮೃತಪಟ್ಟು ಇತರ 6 ಮಂದಿ ಗಂಭೀರ ಗಾಯಗೊಂಡ ಘಟನೆ ಶನಿವಾರ ಮುಂಜಾನೆ ವೇಳೆ ಸಂಭವಿಸಿದೆ.
ಮೃತರನ್ನು ಬೆಂಗಳೂರು ನಿವಾಸಿಗಳಾದ ರವಿ (64), ನಂಜಮ್ಮ (75) ಹಾಗೂ ರಮ್ಯಾ (23), ಗಾಯಾಳುಗಳನ್ನು ಸುಶೀಲ, ಕೀರ್ತಿ ಕುಮಾರ್, ಕಿರಣ್, ಬಿಂದು, ಪ್ರಶಾಂತ್ ಹಾಗೂ ಕಾರು ಚಾಲಕ ಸುಬ್ರಹ್ಮಣ್ಯ ಎಂದು ಹೆಸರಿಸಲಾಗಿದೆ.
ನವೆಂಬರ್ 15 ರಂದು ಮುಂಜಾನೆ ವೇಳೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ, ಬೆಂಗಳೂರು ಕಡೆಯಿಂದ ಉಡುಪಿ ಕಡೆಗೆ ತೆರಳುತ್ತಿದ್ದ ಕೆಎ02 ಎಇ6146 ನೊಂದಣಿ ಸಂಖ್ಯೆಯ ಇನ್ನೋವಾ ಕಾರು ಚಾಲಕನ ನಿಯಂತ್ರಣ ತಪ್ಪಿ ಬಿ ಸಿ ರೋಡು ಮುಖ್ಯ ವೃತ್ತಕ್ಕೆ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನೋವಾ ವಾಹನದಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರು ಸಂಬಂಧಿಕರಾಗಿದ್ದರು ಎನ್ನಲಾಗಿದೆ. ಅಪಘಾತದ ತೀವ್ರತೆಗೆ ಇನ್ನೋವಾ ಕಾರು ಸಂಪೂರ್ಣ ಜಖಂಗೊಂಡಿದೆ. ಈ ಬಗ್ಗೆ ಬಂಟ್ವಾಳ ಸಂಚಾರಿ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಘಟನಾ ಸ್ಥಳಕ್ಕೆ ಜಿಲ್ಲಾ ಎಸ್ಪಿ ಡಾ ಅರುಣ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅಪಘಾತಕ್ಕೆ ಕಾರಣವಾಗಿರುವ ಅವೈಜ್ಞಾನಿಕ ಸರ್ಕಲ್ ಬಗ್ಗೆ ಅಧ್ಯಯನ ನಡೆಸಿದ್ದಾರೆ.






















0 comments:
Post a Comment