ನವೆಂಬರ್ 5 ರಿಂದ 2 ದಿನ ಕರಾವಳಿ ಸಹಿತ ರಾಜ್ಯದ ಕೆಲವೆಡೆ ಭಾರೀ ಮಳೆ ಸಾಧ್ಯತೆ : ಹವಾಮಾನ ಇಲಾಖೆ ಎಚ್ಚರಿಕೆ - Karavali Times ನವೆಂಬರ್ 5 ರಿಂದ 2 ದಿನ ಕರಾವಳಿ ಸಹಿತ ರಾಜ್ಯದ ಕೆಲವೆಡೆ ಭಾರೀ ಮಳೆ ಸಾಧ್ಯತೆ : ಹವಾಮಾನ ಇಲಾಖೆ ಎಚ್ಚರಿಕೆ - Karavali Times

728x90

3 November 2025

ನವೆಂಬರ್ 5 ರಿಂದ 2 ದಿನ ಕರಾವಳಿ ಸಹಿತ ರಾಜ್ಯದ ಕೆಲವೆಡೆ ಭಾರೀ ಮಳೆ ಸಾಧ್ಯತೆ : ಹವಾಮಾನ ಇಲಾಖೆ ಎಚ್ಚರಿಕೆ

ಬೆಂಗಳೂರು, ನವೆಂಬರ್ 04, 2025 (ಕರಾವಳಿ ಟೈಮ್ಸ್) : ನವೆಂಬರ್ 5 ರಿಂದ (ನಾಳೆಯಿಂದ) ರಾಜ್ಯ ರಾಜಧಾನಿ ಸೇರಿದಂತೆ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಭಾರೀ ಮಳೆ ಹಿನ್ನೆಲೆ ಜನರು ಮತ್ತು ಮೀನುಗಾರರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ. ಕಳೆದೆರಡು-ಮೂರು ದಿನಗಳಿಂದ ಕರಾವಳಿ ಭಾಗದಲ್ಲಿ ಮಳೆ ಅಬ್ಬರ ಕೊಂಚ ಕಡಿಮೆಯಾಗಿದ್ದು, ಕೆಲ ಜಿಲ್ಲೆಗಳಲ್ಲಿ ಬಿಸಿಲಿನ ಝಳವೂ ಹೆಚ್ಚಾಗಿದೆ. ನವೆಂಬರ್ 5 ರಿಂದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಗಾಳಿ-ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ ಮತ್ತು ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲಿ ಬುಧವಾರದಿಂದ 2 ದಿನ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

  • Blogger Comments
  • Facebook Comments

0 comments:

Post a Comment

Item Reviewed: ನವೆಂಬರ್ 5 ರಿಂದ 2 ದಿನ ಕರಾವಳಿ ಸಹಿತ ರಾಜ್ಯದ ಕೆಲವೆಡೆ ಭಾರೀ ಮಳೆ ಸಾಧ್ಯತೆ : ಹವಾಮಾನ ಇಲಾಖೆ ಎಚ್ಚರಿಕೆ Rating: 5 Reviewed By: karavali Times
Scroll to Top